ವೈದ್ಯರಿಗೆ ಸಿದ್ದು ಮದ್ದು; ಅಂತಿಮ ತೀರ್ಮಾನ ಸಿಎಂಗೆ
Team Udayavani, Nov 10, 2017, 7:57 AM IST
ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದಲ್ಲಿನ (ಕೆಪಿಎಂಇ) ಕೆಲವು ಆಕ್ಷೇಪಾರ್ಹ ಅಂಶಗಳನ್ನು ಮರುಪರಿಶೀಲಿಸಲು ಗುರುವಾರ ರಾಜ್ಯ ಸಚಿವ ಸಂಪುಟ ಮುಖ್ಯ ಮಂತ್ರಿಗಳಿಗೆ ಅಧಿಕಾರ ನೀಡಿದೆ. ಇದರೊಂದಿಗೆ ಖಾಸಗಿ ವೈದ್ಯರ ಪ್ರತಿಭಟನೆಯ ಬಿಸಿಗೆ ರಾಜ್ಯ ಸರ್ಕಾರ ಕೊಂಚ ಮಣಿದಂತೆ ಕಾಣುತ್ತಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕ ಕುರಿತು ಸುದೀರ್ಘ ಚರ್ಚೆ ನಡೆದು, ಮುಂದಿನ ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೂ, ಅದರಲ್ಲಿನ ಕೆಲವು ಅಂಶಗಳ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಂತಿಮವಾಗಿ ಮತ್ತೂಂದು ಬಾರಿ ಪರಾಮರ್ಶಿಸಿ, ಸಂಬಂಧ ಪಟ್ಟವ ರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪುಟ ಅಧಿಕಾರ ನೀಡಿದೆ. ಹೀಗಾಗಿ, ತಪ್ಪು ಮಾಡುವ ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಗೂ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಂಡು ಎರಡು ವರ್ಷ ಜೈಲು ಶಿಕ್ಷೆಗೆ ಗುರಿ ಪಡಿಸುವುದು. 5 ಲಕ್ಷದವರೆಗೂ ದಂಡ ವಿಧಿಸುವುದು ಮತ್ತು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದೂರು ನಿವಾರಣಾ ಸಮಿತಿಗಳ ರಚನೆ ಮಾಡುವ ಪ್ರಸ್ತಾವನೆಯನ್ನು ಮರುಪರಿಶೀಲಿಸುವ ಸಾಧ್ಯತೆಗಳಿವೆ. ಈ ಅಂಶಗಳ ಬಗ್ಗೆಯೇ ಖಾಸಗಿ ವೈದ್ಯಕೀಯ ಸಂಸ್ಥೆಗಳಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಖಾಸಗಿ ವೈದ್ಯರು ಈಚೆಗೆ ಒಂದು ದಿನದ ಮುಷ್ಕರ ನಡೆಸಿದ್ದಲ್ಲದೆ, ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಸಂದರ್ಭ “ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.
ಗುರುವಾರ ನಡೆದ ಸಂಪುಟ ಸಭೆಯಲ್ಲಿಯೂ ಹಲವು ಸಚಿವರು ಖಾಸಗಿ ವೈದ್ಯರ ನಿಲುವಿನ ಪರ ವಹಿಸಿ ಮಾತನಾಡಿದರು. ಖಾಸಗಿ ಆಸ್ಪತ್ರೆಗಳ ವ್ಯವಹಾರ ಕಾರ್ಯ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವ ಕ್ರಮದ ಬಗ್ಗೆ ಅನೇಕ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಸರ್ಕಾರ ಬಡವರ ಪರವಾದ ವಿಧೇಯಕ ಜಾರಿಗೆ ಮುಂದಾಗಿದ್ದು, ಇದರಿಂದ ಖಾಸಗಿ ವೈದ್ಯಕೀಯ ಸಂಸ್ಥೆಗಳ ಧನ ದಾಹಕ್ಕೆ ಬ್ರೇಕ್ ಬೀಳಲಿದೆ.ಅಲ್ಲದೇ ಬಡವರಿಗೆ ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸಂಪುಟ ಸಹೋದ್ಯೋಗಿಗಳಿಗೆ ವಿವರಣೆ ನೀಡುವ ಪ್ರಯತ್ನ ನಡೆಸಿದ್ದಾರೆ.
ಆದರೆ, ಅವರ ವಾದಕ್ಕೆ ಅನೇಕ ಹಿರಿಯ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರೇ ವಿಧೇಯಕದ ಕುರಿತು ಪರಾಮರ್ಶೆ ನಡೆಸಿ, ವಿಧೇಯಕದ ಸಾಧಕ ಬಾಧಕಗಳ ಕುರಿತಂತೆ ಸಂಬಂಧ ಪಟ್ಟವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದರು. ಸಿಎಂ ಬೆಳಗಾವಿ ಚಳಿಗಾಲದ ಅಧಿವೇಶನದ ಒಳಗೆಯೇ ಸಂಬಂಧ ಪಟ್ಟವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡರೆ, ಇದೇ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಆಕ್ಷೇಪಾರ್ಹ ಅಂಶ ಕೈಬಿಟ್ಟರೆ ಹೋರಾಟ ವಾಪಸ್
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ತಿದ್ದುಪಡಿ ವಿಧೇಯಕದಲ್ಲಿ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಸರ್ಕಾರ ಕೈಬಿಡುವವರೆಗೂ ಖಾಸಗಿ ವೈದ್ಯರ ಹೋರಾಟದಲ್ಲಿಯಾವುದೇ ಬದಲಾವಣೆ ಇಲ್ಲ ಎಂದು ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಶಾಖೆ ಸ್ಪಷ್ಟಪಡಿಸಿದೆ. ತಿದ್ದುಪಡಿ ವಿಧೇಯಕ ಮಂಡನೆಗೂ ಮುನ್ನ ಖಾಸಗಿ ವೈದ್ಯರು, ಆಸ್ಪತ್ರೆಗಳ ಆಕ್ಷೇಪಣೆಗಳ ಬಗ್ಗೆ ಪುನರ್‌ಪರಿಶೀಲನೆಗಾಗಿ ಸಭೆ ನಡೆಸಲು ಸಿಎಂ ನಿರ್ಧರಿಸಿರುವುದನ್ನು ಸಂಘ ಸ್ವಾಗತಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ.ಎಚ್.ಎನ್. ರವೀಂದ್ರ, “”ವಿಧೇಯಕದ ತಿದ್ದುಪಡಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯರ ಆಕ್ಷೇಪಣೆ ಆಲಿಸಲು ಮುಖ್ಯಮಂತ್ರಿಗಳು ಸಭೆ ಕರೆಯಲು ತೀರ್ಮಾನಿಸಿರುವುದು ಸ್ವಾಗತಾರ್ಹ. ವಿಧೇಯಕದಲ್ಲಿನ ಪ್ರಸ್ತಾಪಿತ ಅಂಶಗಳಿಂದ ಉಂಟಾಗುವ ಪರಿಣಾಮದ ಬಗ್ಗೆಯೂ ಯೋಚಿಸಬೇಕು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.