ವಿಧಾನಸೌಧದಲ್ಲಿ ಟಿಪ್ಪು ಜಯಂತಿ

Team Udayavani, Nov 10, 2017, 9:47 AM IST

10-11.jpg

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಟಿಪ್ಪು ಸುಲ್ತಾನ್‌ ಜಯಂತಿಯ ಪ್ರಮುಖ ಕಾರ್ಯಕ್ರಮ ವಿಧಾನಸೌಧ ಬಾಂಕ್ವೆಟ್‌ ಸಭಾಂಗಣದಲ್ಲಿ ನಡೆಯಲಿದೆ. 

ಸಂಜೆ 6.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿಧಾನಪರಿಷತ್‌ ಸಭಾಪತಿ 
ಡಿ.ಎಚ್‌.ಶಂಕರಮೂರ್ತಿ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹಾಗೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್‌ ಅವರ ಹೆಸರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ, ಸಚಿವರಾದ ರೋಷನ್‌ಬೇಗ್‌, ಕೆ.ಜೆ.ಜಾರ್ಜ್‌, ರಾಮಲಿಂಗಾರೆಡ್ಡಿ, ಉಮಾಶ್ರೀ ಸೇರಿ ಅಲ್ಪಸಂಖ್ಯಾತರ ಪರವಾಗಿ ಸಚಿವರಾದ
ತನ್ವೀರ್‌ ಸೇs…, ಯು.ಟಿ.ಖಾದರ್‌, ರಾಜ್ಯಸಭೆ ಸದಸ್ಯ ರೆಹಮಾನ್‌ ಖಾನ್‌, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿ ಸಲೀಂ ಅಹಮದ್‌, ಶಾಸಕರಾದ ಎನ್‌.ಎ.ಹ್ಯಾರೀಸ್‌, ಜಮೀರ್‌ ಅಹಮದ್‌, ಪರಿಷತ್‌ ಸದಸ್ಯರಾದ ಸಿ.ಎಂ. ಇಬ್ರಾಹಿಂ, ರಿಜ್ವಾನ್‌ ಹರ್ಷದ್‌, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ ಅಹಮದ್‌, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಎ.ಗಫ‌ೂರ್‌ ಅವರನ್ನು ಆಹ್ವಾನಿಸಲಾಗಿದೆ. ಆಮೀರ್‌ ಎ ಷರಿಯತ್‌ ನ ಹಜರತ್‌ ಮೌಲಾನಾ ಸಗೀರ ಅಹ್ಮದ್‌ ಖಾನ ಸಾಹೇಬ್‌ ರಷಾದಿ ಹಾಗೂ ಉರಿ ಲಿಂಗಪೆದ್ದಿಗಳ ಮಠದ ಜ್ಞಾನಪ್ರಕಾಶ್‌ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಜೆ.ಆರ್‌.ಲೋಬೋ ವಿಶೇಷ ಆಹ್ವಾನಿತರಾಗಿದ್ದಾರೆ. ಡಾ.ಎಲ್‌.ಹನುಮಂತಯ್ಯ ಟಿಪ್ಪು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕೆನರಾ ಕ್ರಿಶ್ಚಿಯನ್ಸ್‌ ವೇದಿಕೆ ಖಂಡನೆ
ಮಂಗಳೂರು: ಕ್ರೈಸ್ತರ ಮೇಲೆ ಕ್ರೌರ್ಯ ನಡೆಸಿದ ಟಿಪ್ಪು ವಿನ ಜಯಂತಿಯನ್ನು ಆಚರಿಸಲು ರಾಜ್ಯ ಸರಕಾರ ಮುಂದಾಗಿರುವುದು ಖಂಡನೀಯ. ಟಿಪ್ಪುವಿನ ಕ್ರೌರ್ಯಕ್ಕೆ ಒಳಗಾದ ಕೆನರಾ ಕ್ರೈಸ್ತರ ಸಮುದಾಯದಿಂದಲೇ ಬಂದಿ ರುವ ಶಾಸಕರಾದ ಜೆ.ಆರ್‌. ಲೋಬೋ, ಐವನ್‌ ಡಿ’ಸೋಜಾ ಮತ್ತು ಸಂಸದ ಆಸ್ಕರ್‌ ಫ‌ರ್ನಾಂಡಿಸ್‌ ಟಿಪ್ಪುವಿನ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ತಪ್ಪಿದಲ್ಲಿ ಮುಂದಿನ ಚುನಾವಣೆಯಲ್ಲಿ ಟಿಪ್ಪುವಿನ ಹೆಸರಿನಲ್ಲೇ ಮತ ಯಾಚನೆ ನಡೆಸಲಿ ಎಂದು ಕೆನರಾ ಕ್ರಿಶ್ಚಿಯನ್ಸ್‌ ವೇದಿಕೆ ಸವಾಲು ಹಾಕಿದೆ.

ಆಮಂತ್ರಣ ಪತ್ರಿಕೆ: ಹೆಸರಿಗೆ ಕೊಕ್‌
ಬೆಂಗಳೂರು: ಧಾರವಾಡ ಜಿಲ್ಲಾಡಳಿತದಿಂದ ನಡೆಯಲಿರುವ  ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಸಂಸದ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಅವರ ಹೆಸರನ್ನು ಕೈಬಿಡಲಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಅವರ ಹೆಸರನ್ನೂ ಚಿಕ್ಕ ಮಗಳೂರು ಜಿಲ್ಲಾಡಳಿತ ಕೈಬಿಟ್ಟಿದೆ. ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸದಂತೆ ಈ ಹಿಂದೆಯೇ ಶೋಭಾ ಕರಂದ್ಲಾಜೆ ಹಾಗೂ ಕ್ಯಾ| ಗಣೇಶ್‌ ಕಾರ್ಣಿಕ್‌ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

ಬಿಜೆಪಿ ಅರ್ಜಿ ವಜಾ
ಚಿತ್ರದುರ್ಗ: ಟಿಪ್ಪು ಜಯಂತಿ ಅಂಗವಾಗಿ ಜಿಲ್ಲಾಡಳಿತ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಹಾಗೂ ನಿಷೇಧಾಜ್ಞೆ ತೆರವುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಜಿಲ್ಲಾ ನ್ಯಾಯಾ ಲಯ ವಜಾಗೊಳಿಸಿದೆ. 

ಕಾನೂನು ಸುವ್ಯವಸ್ಥೆಗೆ ಧಕ್ಕೆತಂದರೆ ಕ್ರಮ
ಗೃಹ ಸಚಿವ ರಾಮಲಿಂಗಾರೆಡ್ಡಿ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು. ನಂತರ ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಯಾರೇ ಮಾಡಿದರೂ ಎಷ್ಟೇ ದೊಡ್ಡವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಟಿಪ್ಪು ಜಯಂತಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಭದ್ರತೆ ಕೈಗೊಳ್ಳಲಾಗಿದೆ. ಈ ಬಾರಿ ಟಿಪ್ಪು ಜಯಂತಿ ಸುಸೂತ್ರವಾಗಿ ನಡೆಯಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.