ಅತ್ಯಾಚಾರಕ್ಕೆ ಯತ್ನಿಸಿದ ಕ್ಯಾಬ್ ಚಾಲಕನ ಬಂಧನ
Team Udayavani, Nov 10, 2017, 11:29 AM IST
ಬೆಂಗಳೂರು: ಕುಡಿತದ ಅಮಲಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿದ್ದ ಕ್ಯಾಬ್ ಚಾಲಕ ಜೈಲು ಸೇರಿದ್ದಾನೆ. ಕೊಡಿಗೆಹಳ್ಳಿಯ ಶರತ್ (32) ಬಂಧಿತ ಆರೋಪಿ.
ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ರಸ್ತೆಯ ಮನೆಯೊಂದರಲ್ಲಿ ನವೆಂಬರ್ 4ರ ರಾತ್ರಿ ಘಟನೆ ನಡೆದಿದ್ದು, ಸಂತ್ರಸ್ಥ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂತ್ರಸ್ಥ ವಿದ್ಯಾರ್ಥಿನಿ ಸ್ನೇಹಿತೆ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅದೇ ಮನೆಯ ಎರಡನೇ ಮಹಡಿಯಲ್ಲಿ ಆರೋಪಿಯ ಸ್ನೇಹಿತರು ವಾಸವಿದ್ದರು. ಆರೋಪಿ ಶರತ್ ನ.4ರಂದು ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಮನೆಗೆ ಬಂದಿದ್ದ.
ಈ ವೇಳೇ ಸ್ನೇಹಿತರೆಲ್ಲರೂ ಮದ್ಯಸೇವಿಸಿ ಮಲಗಿದ್ದಾರೆ. ಆರೋಪಿ ಶರತ್ ರಾತ್ರಿ 2.30ರ ಸುಮಾರಿಗೆ ವಿದ್ಯಾರ್ಥಿನಿಯಿದ್ದ ಮನೆ ಒಳ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಯುವತಿ ಜೋರಾಗಿ ಕಿರುಚಿಕೊಂಡಿದ್ದಾರೆ. ಆತನನ್ನು ತಳ್ಳಿ ನಮ್ಮ 100 ಸಂರ್ಖಯೆಗೆ ಕರೆ ಮಾಡಿದ್ದರು.
ಕೂಡಲೇ ಕಾರ್ಯಪ್ರವೃತ್ತರಾದ ಸೋಲದೇವನಹಳ್ಳಿ ಠಾಣೆಯ ಹೊಯ್ಸಳ ಸಿಬ್ಬಂದಿ, ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಆರೋಪಿ ಶರತ್ ಅವಿವಾಹಿತನಾಗಿದ್ದು, ಖಾಸಗಿ ಕಂಪೆನಿಯಲ್ಲಿ ಕಾರು ಚಾಲಕನಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.