ಸರ್ಕಾರಿ ನಿಯಮ ಪಾಲನೆಗೆ ತಾಕೀತು


Team Udayavani, Nov 10, 2017, 11:30 AM IST

vidhana-soudha.jpg

ಬೆಂಗಳೂರು: ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಿಗೆ ಖಡಕ್‌ ನಿರ್ದೇಶನ ನೀಡಿದೆ.

ಪ್ರತಿ ಆಸ್ಪತ್ರೆಯಲ್ಲೂ ಸ್ಟ್ರೆಚರ್‌ ಮತ್ತು  ವ್ಹೀಲ್‌ಚೈರ್‌ ಹೊಂದಿರಲೇ ಬೇಕು. ವೈದ್ಯರು, ನರ್ಸ್‌, ಭದ್ರತಾ ಸಿಬ್ಬಂದಿ ಸೇರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರ ಮೇಲೆ ಕರ್ತವ್ಯ ಲೋಪದ ಆರೋಪ ಕೇಳಿ ಬಂದ ತಕ್ಷಣವೇ ಮುಖ್ಯಸ್ಥರು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು.  

ರಸ್ತೆ ಅಪಘಾತ ಸೇರಿದಂತೆ ತುರ್ತು ಸೇವೆಗಾಗಿ ಬರುವ ರೋಗಿಗಳಿಗೆ ಅಗತ್ಯ ಸಂದರ್ಭದಲ್ಲಿ ನಿರ್ದಿಷ್ಟ ಚಿಕಿತ್ಸೆ ನೀಡಬೇಕು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇರಬಾರದು. ವೈದ್ಯರು ಅಥವಾ ಸಿಬ್ಬಂದಿ ವಿರುದ್ಧ ರೋಗಿಗಳ ಕಡೆಯಿಂದ ಯಾವುದೇ ದೂರು ಬಂದರೂ ಅದಕ್ಕೆ ಆಸ್ಪತ್ರೆಯ ಮುಖ್ಯಸ್ಥರೇ ನೇರ ಹೊಣೆಯಾಗಿರುತ್ತಾರೆ ಎಂದು ಎಚ್ಚರಿಸಿದೆ.

ಸಹಾಯಕ ಪ್ರಾಧ್ಯಾಪಕರಿಗೆ ಹಾಗೂ ಸಹ ಪ್ರಾಧ್ಯಾಪಕರಿಗೆ ರಾತ್ರಿ ಪಾಳಿ ಹಾಕುವಂತೆ ಈಗಾಗಲೇ ತಿಳಿಸಲಾಗಿದ್ದು, ಅನೇಕ ಸಂಸ್ಥೆಗಳಲ್ಲಿ ಇದು ಪಾಲನೆಯಾಗುತ್ತಿಲ್ಲ. ಎಲ್ಲಾ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಲ್ಲಿ ರಾತ್ರಿಪಾಳಿ ವ್ಯವಸ್ಥೆ ಕಡ್ಡಾಯ ಜಾರಿಮಾಡಬೇಕು. ನಿತ್ಯ ಸೇವೆಗೆ ಬರುವ ಅವಧಿಯನ್ನು ದಾಖಲಿಕರಿಸಿಕೊಳ್ಳಬೇಕು.

ರಾತ್ರಿ ಪಾಳಿಯ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿ ವರ್ಗ ತಡವಾಗಿ ಸೇವೆಗೆ ಬರುವುದನ್ನು ಸಹಿಸುವುದಿಲ್ಲ. ಅಂತಹ ಸಿಬ್ಬಂದಿ ವಿರುದ್ಧ ಮುಖ್ಯಸ್ಥರು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ವೈದ್ಯಕೀಯ ಕಾಲೇಜು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ನಿರ್ದೇಶಕರು ಆಸ್ಪತ್ರೆಯ ಆವರಣದಲ್ಲೇ ಇರಬೇಕು. ಆಸ್ಪತ್ರೆಯಿಂದ ಹೊರಗೆ ಹೋಗಬೇಕಾದರೆ ವೈದ್ಯಕೀಯ ನಿರ್ದೇಶನಾಲಯದ ನಿರ್ದೇಶಕರ ಅನುಮತಿಯನ್ನು ಪಡೆಯಬೇಕು.

ಹಾಗೆಯೇ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಆಸ್ಪತ್ರೆ ಬಿಟ್ಟು ಹೋಗುವಂತಿಲ್ಲ. ವೈದ್ಯರಿಗೆ ಆಸ್ಪತ್ರೆಯ ಆವರಣದಲ್ಲಿಯೇ ವಸತಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ. ಸರ್ಕಾರದ ಆದೇಶವನ್ನು ಉಲ್ಲಂ ಸುವ ವೈದ್ಯಕೀಯ, ದಂತವೈದ್ಯಕೀಯ ಕಾಲೇಜು, ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.