ದಂಡುಪಾಳ್ಯ ಗ್ಯಾಂಗ್‌ನ ಐವರಿಗೆ ಜೀವಾವಧಿ ಶಿಕ್ಷೆ


Team Udayavani, Nov 10, 2017, 11:31 AM IST

court-desicion.jpg

ಬೆಂಗಳೂರು: ಕಳೆದ 17 ವರ್ಷಗಳ ಹಿಂದೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗೀತಾ ಎಂಬುವವರ ಕೊಲೆ ಹಾಗೂ ದರೋಡೆ  ಪ್ರಕರಣದಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ತಂಡದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಐದು ಸಾವಿರ ರೂ. ದಂಡ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಹಿಳೆ ಕೊಲೆಗೈದು ಹಾಗೂ ಚಿನ್ನಾಭರಣ ದೋಚಿರುವುದಕ್ಕೆ ಪ್ರಾಸಿಕ್ಯೂಶನ್‌ ಸಲ್ಲಿಸಿದ್ದ ಪ್ರಬಲಸಾಕ್ಷ್ಯಾಧಾರಗಳು ಹಾಗೂ ವಾದವನ್ನು ಪುರಸ್ಕರಿಸಿದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವನಗೌಡ, ಈ ತೀರ್ಪು ನೀಡಿದರು.

ಆರೋಪಿಗಳು ಮಹಿಳೆಯನ್ನು ಕೊಲೆಗೈದು,ದರೋಡೆ ಮಾಡಿರುವುದು ಅಮಾನುಷ ಕೃತ್ಯ ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು, ದೋಷಿಗಳಾದ ದಂಡುಪಾಳ್ಯಗ್ಯಾಂಗ್‌ನ ದೊಡ್ಡಹನುಮ, ಮುನಿಕೃಷ್ಣ, ವೆಂಕಟೇಶ್‌, ನಲ್ಲತಿಮ್ಮ, ಲಕ್ಷ್ಮೀಗೆ ಜೀವಾವಧಿ ಹಾಗೂ ತಲಾ ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು.

ಆರೋಪಿಗಳು ಗೀತಾರನ್ನು ಕೊಲೆಗೈದು ಆಕೆಯ ಮೈಮೇಲಿದ್ದ ಓಡವೆಗಳನ್ನು ದೋಚಿದ್ದರು. ಈ ಕುರಿತು ಒಡವೆ ಗಿರವಿ ಇಟ್ಟುಕೊಂಡಿದ್ದ ರಾಜಾಮಾರ್ಕೆಟ್‌ನ ಜ್ಯುವೆಲರಿ ಶಾಪ್‌ ಮಾಲೀಕ ಆರೋಪಿಗಳ ವಿರುದ್ಧ ನೀಡಿದ ಹೇಳಿಕೆ. ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳು ಹಾಗೂ ಪ್ರಾಸಿಕ್ಯೂಶನ್‌ ವಾದವನ್ನು ನ್ಯಾಯಾಧೀಶರು ಪುರಸ್ಕರಿಸಿ ಈ ತೀರ್ಪು ನೀಡಿದ್ದಾರೆ ಎಂದು ಪ್ರಾಸಿಕ್ಯೂಶನ್‌ ಪರವಾಗಿ ವಾದಿಸಿದ್ದ ಸರ್ಕಾರಿ ವಿಶೇಷ ಅಭಿಯೋಜಕ ಬಿ.ಎಸ್‌ ಪಾಟೀಲ್‌  ವಾದ ಮಂಡಿಸಿದ್ದರು. 

ಏನಿದು ಪ್ರಕರಣ?: ದಂಡುಪಾಳ್ಯ ಗ್ಯಾಂಗ್‌ನ ಐವರೂ ಸದಸ್ಯರು 2000ರ ನವೆಂಬರ್‌ 7 ರಂದು ಮಧ್ಯಾಹ್ನದ ವೆಳೆ ಅಗ್ರಹಾರದಾಸರಹಳ್ಳಿಯಲ್ಲಿ  ಮನೆಯೊಂದರ ಬಳಿ ತೆರಳಿ ಕುಡಿಯಲು ನೀರು ಕೇಳಿದ್ದರು. ಈ ವೇಳೆ ಮನೆಯಲ್ಲಿದ್ದ ಗೀತಾ ಎಂಬಾಕೆ ನೀರು ನೀಡಲು ಒಳಹೋಗುತ್ತಿದ್ದಂತೆ ಆರೋಪಿಗಳೆಲ್ಲಾ ಮನೆಯೊಳಗೆ ಬಂದು ಬಾಗಿಲು ಹಾಕಿದ್ದರು.

ಬಳಿಕ ಭೀಕರವಾಗಿ ಆಕೆಯ ಕತ್ತುಕೊಯ್ದು ಕೊಲೆಗೈದು, ಆಕೆಯ ಮೈಮೇಲಿದ್ದ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ದಂಡುಪಾಳ್ಯ ಗ್ಯಾಂಗ್‌ನ ಐವರು ಆರೋಪಿಗಳನ್ನು ಬಂಧಿಸಿ ಐಪಿಸಿಕಲಂ 302, 396 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.