ಪಾಲಿಕೆ ಆಯುಕ್ತರ ಬಂಧನಕ್ಕೆ ಬಿಗಿಪಟ್ಟು
Team Udayavani, Nov 10, 2017, 12:07 PM IST
ಹುಬ್ಬಳ್ಳಿ: ಸಾರ್ವಜನಿಕರ ಸಮಸ್ಯೆ ಕುರಿತು ಮನವಿ ಸಲ್ಲಿಸಲು ತೆರಳಿದ ಯುವ ವಕೀಲ ಸಂತೋಷ ನರಗುಂದ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ ಅವರನ್ನು ನ. 10ರಂದು ಬೆಳಗ್ಗೆ 11 ಗಂಟೆಯೊಳಗೆ ಪೊಲೀಸರು ಬಂಧಿಸಬೇಕು.
ಇಲ್ಲವಾದರೆ ಪಾಲಿಕೆಗೆ ಮುತ್ತಿಗೆ ಹಾಕಿ ತಾವೇ ಬಂಧಿಸಿ ಪೊಲೀಸರಿಗೆ ಒಪ್ಪಿಸಲು ವಕೀಲರ ಸಂಘದ ಸಭೆಯಲ್ಲಿ ನಿರ್ಧರಿಸಲಾಗಿದೆ. ಗುರುವಾರ ಸಂಜೆ ನಡೆದ ಸಂಘದ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಹುಬ್ಬಳ್ಳಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಅಣೆಕರ ಮಾತನಾಡಿದರು.
ತಪ್ಪು ಮಾಡದ ಯುವ ವಕೀಲ ಸಂತೋಷ ನರಗುಂದ ಮೇಲೆ ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ ಹಲ್ಲೆ ಮಾಡುವ ಮೂಲಕ ಕೊಲೆಗೆ ಯತ್ನಿಸಿದ್ದಾರೆ. ವಕೀಲರ ವ್ಯವಸ್ಥೆ ಹಾಗೂ ಸ್ವಾಭಿಮಾನದ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ದೂರು ದಾಖಲಿಸುವ ಮುನ್ನವೇ ಠಾಣೆಯಲ್ಲಿ ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ.
ಇದಕ್ಕೆ ಪೊಲೀಸ್ ಅಧಿಕಾರಿಗಳು ಸಹ ಸಹಕಾರ ನೀಡಿದ್ದಾರೆ. ಆ ಮುಖಾಂತರ ವಕೀಲ ಬಾಂಧವರ ವೃತ್ತಿಗೆ ಅವಮಾನ ಮಾಡಿದ್ದಾರೆ. ಇದು ವಕೀಲರ ಸ್ವಾಭಿಮಾನದ ಪ್ರಶ್ನೆಯಾಗಿದೆ ಎಂದರು. ಸಿದ್ಧಲಿಂಗಯ್ಯ ಹಿರೇಮಠ ವಿರುದ್ಧ ಕೊಲೆಗೆ ಯತ್ನ ಪ್ರಕರಣ ದಾಖಲಾಗಿದ್ದು, ಅವರನ್ನು ತಕ್ಷಣ ಅಮಾನತುಗೊಳಿಸಿ ಬಂಧಿಸಬೇಕು.
ನಂತರ ಅವರು ಸಂಘದ ಕಚೇರಿ ಬಂದು ಬಹಿರಂಗವಾಗಿ ಕ್ಷಮಾಪಣೆ ಕೋರಿದರೆ ಪ್ರಕರಣವನ್ನು ಹಿಂಪಡೆಯಬೇಕೋ ಬೇಡವೋ ಹಾಗೂ ಅವರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಬೇಕೊ, ಇಲ್ಲವೋ ಎಂಬುದನ್ನು ಶುಕ್ರವಾರ ನಡೆಯುವ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸಂಘದ ಹಿರಿಯ ವಕೀಲರ ಸಲಹೆ ಹಾಗೂ ಧಾರವಾಡ ವಕೀಲರ ಸಂಘ ಸೇರಿದಂತೆ ಇನ್ನಿತರೆ ವಕೀಲರ ಸಂಘದ ಅಧ್ಯಕ್ಷರೊಂದಿಗೆ ಚರ್ಚಿಸಿ ನಿರ್ಣಯಿಸಲಾಗುವುದು ಎಂದರು.
ಸಂಘದ ಸದಸ್ಯರಾದ ಮಂಜುನಾಥ ದಾಟನಾಳ, ಸಂಜಯ ಬಡಸ್ಕರ, ಉಮೇಶ ಹುಡೇದ, ದೇವರಾಜ ಗೌಡರ, ಶಿವಾನಂದ ವಡ್ಡಟ್ಟಿ, ಎಸ್.ಆರ್. ಮಾಂಡ್ರೆ ಮಾತನಾಡಿ, ಕೊಲೆಗೆ ಯತ್ನ ಪ್ರಕರಣ ದಾಖಲಾಗಿ ಎರಡು ದಿನ ಕಳೆದರೂ ಪಾಲಿಕೆ ಆಯುಕ್ತರನ್ನು ಏಕೆ ಬಂಧಿಸಿಲ್ಲ. ಅಧಿಕಾರಿಗಳಿಗೊಂದು ನ್ಯಾಯ, ಸಾಮಾನ್ಯರಿಗೊಂದು ನ್ಯಾಯವೇ ಎಂದು ಪ್ರಶ್ನಿಸಿದರು.
ಪಾಲಿಕೆ ಆಯುಕ್ತರ ಪರ ವಾದ ಬೇಡ: ಧಾರವಾಡ ಹೈಕೋರ್ಟ್ ಪೀಠದ ವಕೀಲರ ಸಂಘದ ಅಧ್ಯಕ್ಷ ಆರ್.ಡಿ. ದೇಸಾಯಿ ಮಾತನಾಡಿ, ದೌರ್ಜನ್ಯ ವೆಸಗಿದ ಪಾಲಿಕೆ ಆಯುಕ್ತರನ್ನು ಬಂಧಿಸಿ, ಅಮಾನತು ಮಾಡಬೇಕು ಎಂಬ ಬೇಡಿಕೆಯೊಂದಿಗೆ ಹೋರಾಟ ಮಾಡಲಾಗುತ್ತಿದೆ.
ಬೀದಿ ಹೋರಾಟದ ಬದಲು ಕಾನೂನಾತ್ಮಕ ಹೋರಾಟಕ್ಕೆ ಮುಂದಾಗುವುದಾದರೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸೋಣ, ಪಾಲಿಕೆ ಆಯುಕ್ತರ ಪರ ಯಾವ ವಕೀಲರು ವಾದ ಮಂಡಿಸದಂತೆ ಮಾಡೋಣ. ನಿಮ್ಮ ಹೋರಾಟಕ್ಕೆ ಧಾರವಾಡ ಹೈಕೋರ್ಟ್ ವಕೀಲರ ಸಂಘದ ಪೂರ್ಣ ಬೆಂಬಲವಿದೆ ಎಂದರು.
ಧಾರವಾಡ ವಕೀಲರ ಸಂಘದ ಅಧ್ಯಕ್ಷ ಆರ್.ಯು. ಬೆಳ್ಳಕ್ಕಿ ಮಾತನಾಡಿ, ಪಾಲಿಕೆ ಆಯುಕ್ತರು ಜನ ಸೇವೆಗೆ ಬಂದಿದ್ದೇನೆ ಎಂಬುದನ್ನು ಮರೆತು ಇನ್ನು ಸೈನ್ಯದಲ್ಲಿಯೇ ಇದ್ದೇನೆಂಬ ಭಾವನೆ ಹೊಂದಿದ್ದಾರೆ. ಎಲ್ಲರನ್ನೂ ಗಡಿಯಾಚೆಗಿನವರು ಎಂಬಂತೆ ಕಾಣುತ್ತಿದ್ದಾರೆ.
ವಕೀಲರ ವಿರುದ್ಧ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಧಾರವಾಡ ಕೋರ್ಟ್‌ನಲ್ಲೂ ಅವರ ಪರವಾಗಿ ಯಾವ ವಕೀಲರು ವಕಾಲತ್ತು ವಹಿಸಲ್ಲ. ಹೋರಾಟಗಳನ್ನು ಮಾಡುವಾಗ ಮುಂದಿನ ಆಗು-ಹೋಗುಗಳ ಬಗ್ಗೆ ಪರಾವಲೋಕಿಸಿ ನಿರ್ಧಾರ ತೆಗೆದುಕೊಳ್ಳಿ. ಸ್ಥಳೀಯ ವಕೀಲರ ಸಂಘದವರು ತೆಗೆದುಕೊಳ್ಳುವ ಎಲ್ಲ ನಿರ್ಧಾರಕ್ಕೂ ಧಾರವಾಡ ವಕೀಲರ ಸಂಘ ಸದಾ ಬೆಂಬಲವಾಗಿರುತ್ತದೆ ಎಂದರು.
ಧಾರವಾಡ ವಕೀಲರ ಸಂಘದ ಕಾರ್ಯದರ್ಶಿ ಸಿ.ಎಸ್. ಪೊಲೀಸ್ ಪಾಟೀಲ, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಡಿ.ಎಂ. ನರಗುಂದ, ಪದಾಧಿಕಾರಿಗಳು, ಸದಸ್ಯರು ಇದ್ದರು. ನಂತರ ಸಂಘದ ಪದಾಧಿಕಾರಿಗಳು ನ. 10ರಂದು ಬೆಳಗ್ಗೆ 10:30 ಗಂಟೆಗೆ ಸಂಘದ ಕಚೇರಿಯಲ್ಲಿ ಸರ್ವಸದಸ್ಯರ ಸಭೆ ಕರೆಯಲು ನಿರ್ಧರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.