ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಲಿ


Team Udayavani, Nov 10, 2017, 3:45 PM IST

10-Nov-14.jpg

ಬೆಟ್ಟಂಪಾಡಿ: ನಮ್ಮ ತಾಲೂಕಿನ ವಿದ್ಯಾರ್ಥಿಗಳು ಕ್ರೀಡೆ ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿ, ಒಳ್ಳೆಯ ನಾಗರಿಕರಾಗಿ ಬಾಳುವಂತಾಗಲಿ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ನುಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಬೆಟ್ಟಂಪಾಡಿ ಪ.ಪೂ. ಕಾಲೇಜು ಆಶ್ರಯದಲ್ಲಿ ನ. 9ರಂದು ಬೆಟ್ಟಂಪಾಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ.ಪೂ. ಕಾಲೇಜಿನ ಬಾಲಕ, ಬಾಲಕಿಯರ ತ್ರೋಬಾಲ್‌ ಪಂದ್ಯವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಶುಭ ಹಾರೈಸಿದರು.

ಪರಿಶ್ರಮದ ಅಗತ್ಯ
ಮುಖ್ಯ ಅತಿಥಿಯಾದ ತಾ.ಪಂ. ಸದಸ್ಯ ಹರೀಶ್‌ ಬಿಜತ್ರೆ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಶಿಸ್ತು, ನಿಯಮವನ್ನು ಅಳವಡಿಸಿಕೊಳ್ಳುವುದರೊಂದಿಗೆ ಕಠಿನ ಪರಿಶ್ರಮದ ಅಗತ್ಯವಿದೆ. ಇದಕ್ಕೆ ಹಿರಿಯರ ಮಾರ್ಗದರ್ಶನ, ಪ್ರೋತ್ಸಾಹ ಅಗತ್ಯ ಎಂದು ಹೇಳಿ ಶುಭ ಹಾರೈಸಿದರು.

ನಿಡ್ಪಳ್ಳಿ ಗ್ರಾ.ಪಂ. ಅಧ್ಯಕ್ಷೆ ಸುಮತಿ ಅಧ್ಯಕ್ಷತೆ ವಹಿಸಿದ್ದರು. ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯ ಮೊಯಿದುಕುಂಞಿ ಕೋನಡ್ಕ, ಭವಾನಿ ಪಿ., ಪಾಣಾಜೆ ಗ್ರಾ.ಪಂ. ಸದಸ್ಯೆ ಯಶೋದಾ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೆಂಕಟ್ರಾವ್‌ ಬಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನಾಗರಾಜ್‌ ಘಾಟೆ, ತಿಮ್ಮಣ್ಣ ರೈ ಆನಾಜೆ, ಪ್ರೌಢಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕೆ.ಪಿ. ಭಟ್‌ ಕೋನಡ್ಕ, ಸದಸ್ಯರಾದ ಮಾಧವ ಪೂಜಾರಿ, ಅಬೂಬಕ್ಕರ್‌ ಕೊರಿಂಗಿಲ, ಆರ್‌.ಸಿ. ರೈ ಮದಕ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಪ್ರಾಂಶುಪಾಲರಾದ ಬಿ. ಬಾಲಕೃಷ್ಣ ರಾವ್‌ ಅವರು ಸ್ವಾಗತಿಸಿದರು. ಉಪನ್ಯಾಸಕರಾದ ಪರಶಿವಮೂರ್ತಿ ಅವರು ವಂದಿಸಿದರು. ಪದ್ಮನಾಭ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಉಪನ್ಯಾಸಕಿ ರಜನಿ, ಉಪನ್ಯಾಸಕ ಮಹೇಶ್‌ ಎಂ., ಪ್ರೌಢಶಾಲಾ ಶಿಕ್ಷಕಿ ಶ್ಯಾಮಲಾ ರೈ ಅತಿಥಿಗಳಿಗೆ ಪುಷ್ಪ ನೀಡಿ ಗೌರವಿಸಿದರು. ದೈಹಿಕ ಶಿಕ್ಷಕರು, ಉಪನ್ಯಾಸಕರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಪಾಲ್ಗೊಂಡರು.

ಪಂದ್ಯಾಟದ ಫ‌ಲಿತಾಂಶ
ಬಾಲಕರ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು (ಪ್ರಥಮ), ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ (ದ್ವಿತೀಯ). ಬಾಲಕಿಯರ ವಿಭಾಗದಲ್ಲಿ ಶ್ರೀಕೃಷ್ಣ ಪದವಿಪೂರ್ವ ಕಾಲೇಜು ಪಟ್ಟೆ, ಬಡಗನ್ನೂರು (ಪ್ರಥಮ), ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ (ದ್ವಿತೀಯ) ಸ್ಥಾನ ಪಡೆದುಕೊಂಡರು.

ಸಾಧಕರಿಗೆ ಗೌರವಾರ್ಪಣೆ
ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಾದ ನಡಿಗೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ದೀಕ್ಷಿತ್‌ ಕೆ. ಹಾಗೂ 3 ಮತ್ತು 5 ಸಾವಿರ ಮೀಟರ್‌ ಓಟದಲ್ಲಿ ತೃತೀಯ ಹಾಗೂ ಗುಡ್ಡಗಾಡು ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹರ್ಷಿತ್‌ ನಿಡ್ಪಳ್ಳಿ  ಅಲ್ಲದೆ ಇವರಿಗೆ ತರಬೇತಿ ನೀಡಿದ ನವೋದಯ ಪ್ರೌಢಶಾಲಾ ದೈಹಿಕ ಶಿಕ್ಷಕ ದಯಾನಂದ ರೈ ಕೊರ್ಮಂಡ ಅವರನ್ನು ಶಾಸಕರು ಹೂವು ನೀಡಿ ಗೌರವಿಸಿದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.