ಅಂತಸ್ತಿನ ಹಳೇ ಕಟ್ಟಡ ಕುಸಿತ, ಕುಟುಂಬ ಪಾರು


Team Udayavani, Nov 10, 2017, 4:55 PM IST

Permude-3.jpg

ಕೋಲಾರ: ನಗರದ ಬಸ್‌ ನಿಲ್ದಾಣ ವೃತ್ತದಲ್ಲಿ ಹಳೆಯ ಮೂರು ಅಂತಸ್ತಿನ ಕಟ್ಟಡವೊಂದು ನೆಲ ಅಂತಸ್ತಿನ ಮೇಲೆ ಸಂಪೂರ್ಣ ಕುಸಿದು ಬಿದ್ದ ಘಟನೆ ಗುರುವಾರ ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಜರುಗಿದೆ. ಇದೇ ಕಟ್ಟಡದಲ್ಲಿ ವಾಸವಾಗಿದ್ದ ಕುಟುಂಬವೊಂದು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದೆ.

ನಗರದ ಬಸ್‌ ನಿಲ್ದಾಣ ವೃತ್ತಕ್ಕೆ ಹೊಂದಿಕೊಂಡಂತಿರುವ ಫ‌ಲಾಮೃತ ಐಸ್‌ ಕ್ರೀಮ್ಸ್‌ ಮಳಿಗೆ ಇದ್ದ ಮೂರು ಅಂತಸ್ತಿನ ಕಟ್ಟಡದ ಮೊದಲ ಅಂತಸ್ತು ದೊಡ್ಡ ಸದ್ದಿನೊಂದಿಗೆ ನೆಲಸಮವಾಗಿದೆ. ಕಟ್ಟಡದ ಎರಡನೇ ಮಹಡಿಯಲ್ಲಿ ವಾಸವಾಗಿದ್ದ ಬಸವರಾಜ್‌ ಕುಟುಂಬದ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಏಳು ಮಂದಿ ನಿದ್ದೆ ಮಂಪರಿನಲ್ಲಿಯೇ ಭೀತರಾಗಿ ಹೊರ ಜಿಗಿದು ಬಂದಿದ್ದಾರೆ.

ಲಕ್ಷಾಂತರ ನಷ್ಟ: ಘಟನೆಯಿಂದ ಫ‌ಲಾಮೃತ ಐಸ್‌ಕ್ರೀಮ್ಸ್‌ ಮಳಿಗೆಯಲ್ಲಿದ್ದ ಪೀಠೊಪಕರಣಗಳು, ಯಂತ್ರೋಪರಣಗಳು ಸೇರಿದಂತೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆಯೆಂದು ಅಂದಾಜು ಮಾಡಲಾಗಿದೆ. ಸುಮಾರು ಎಂಭತ್ತು ವರ್ಷಗಳ ಹಿಂದೆ ಮಣ್ಣಿನಲ್ಲಿ ನಿರ್ಮಾಣ ಮಾಡಿದ್ದ ಕಟ್ಟಡದ ಮೇಲೆಯೇ ವಾಣಿಜ್ಯ ಕಾರಣಗಳಿಗಾಗಿ ಮೂರು ಅಂತಸ್ತು ನಿರ್ಮಿಸಲಾಗಿತ್ತು. ಇದರ ಭಾರವನ್ನು ಹೊರಲಾಗದೆ ಕಟ್ಟಡ ಕುಸಿದು ಬಿದ್ದಿದೆಯೆಂದು ಅಂದಾಜಿಸಲಾಗಿದೆ.

ತಡವಾಗಿದ್ದರೆ ಅಪಾಯ: ಕಟ್ಟಡವು ಪಕ್ಕದ ಕಟ್ಟಡದ ಮೇಲೆ ಉರುಳಿ ಬಿದ್ದಿದ್ದರಿಂದ ಆ ಕಟ್ಟಡಕ್ಕೂ ಕೊಂಚ ಹಾನಿಯಾಗಿದೆ. ಪಕ್ಕದ ಕಟ್ಟಡದ ಛಾವಣಿಯಲ್ಲಿದ್ದ ನಾಯಿಯನ್ನು ರಕ್ಷಿಸಲಾಗಿದೆ. ಒಂಭತ್ತು ಗಂಟೆಯ ನಂತರ ಇದೇ ಘಟನೆ ಜರುಗಿದ್ದರೆ ಕನಿಷ್ಠ ಐವತ್ತು ಮಂದಿಗಾದರೂ ಅಪಾಯವಾಗುತ್ತಿತ್ತು.

ನಾಗರಿಕರು ನೀಡಿದ ದೂರಿನ ಮೇರೆಗೆ ಬೆಸ್ಕಾಂನವರು ಆಗಮಿಸಿ ಕುಸಿದ ಕಟ್ಟಡದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಈ ಮೂಲಕ ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಡೆದರು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಟ್ಟಡದ ಸುತ್ತಲೂ ಜಮಾಯಿಸಿದ್ದ ಜನರನ್ನು ದೂರ ಕಳುಹಿಸಿದರು.

ಕುಸಿದು ಬಿದ್ದಿದ್ದ ಕಟ್ಟಡವನ್ನು ಮಧ್ಯಾಹ್ನದ ವೇಳೆಗೆ ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ನಗರದಲ್ಲಿ ಇದೇ ರೀತಿಯಲ್ಲಿ ಹಲವಾರು ಹಳೆಯ ಕಟ್ಟಡಗಳು ಕುಸಿದು ಬೀಳುವ ಆತಂಕವನ್ನು ಸೃಷ್ಟಿಸುತ್ತಿದೆ. ನಗರಸಭೆ ಕೂಡಲೇ ಗಮನ ಹರಿಸಿ ಇಂತಹ ಕಟ್ಟಡಗಳನ್ನು ಸುರಕ್ಷಿತವಾಗಿ ತೆರವುಗೊಳಿಸಿ ಆಗಲಿರುವ ಅಪಾಯವನ್ನು ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.