ಯುವಕರೇ ಟಿಪ್ಪು ಧೈರ್ಯ ಕಲಿಯಿರಿ


Team Udayavani, Nov 11, 2017, 9:57 AM IST

gul-2.jpg

ಕಲಬುರಗಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಅವರ ನಿದ್ದೆಗೆಡಿಸಿದ್ದ ಧೈರ್ಯಶಾಲಿ ಹಾಗೂ ಕುಶಾಗ್ರಮತಿ ಟಿಪ್ಪು ಸುಲ್ತಾನ್‌ನ ಧೈರ್ಯ ಮತ್ತು ಸ್ವಾಭಿಮಾನವನ್ನುಯುವಕರು ಕಲಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮವನ್ನು ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಟಿಪ್ಪು ನಿಲುವು, ಸ್ವಾಭಿಮಾನ ಹಾಗೂ ಆಡಳಿತ ಸುಧಾರಣಾ ಕ್ರಮ ಹಾಗೂ ಸಹೋದರತ್ವವನ್ನು ಮನಗಂಡು ರಾಜ್ಯ ಸರಕಾರ ಇವತ್ತು ಟಿಪ್ಪು ಜಯಂತಿ ಮಾಡಲು ಹೊರಟಿದೆ. ಆದರೆ, ಕೆಲವರು ಇದನ್ನು ವಿರೋಧಿಸಿದ್ದಾರೆ. ಅದೆಲ್ಲವೂ ಅವರವರ ಮನೋಭಾವ. ತನ್ನ ಇಡೀ ಜೀವನವನ್ನೇ ನಾಡಿನ ಏಳಿಗೆಗಾಗಿ ಮುಡಿಪಾಗಿಟ್ಟು ಶೌರ್ಯ, ಸಾಹಸಕ್ಕೆ ಹೆಸರಾಗಿ ಸಹಿಷ್ಣತೆ ರುವಾರಿಯಾಗಿದ್ದ ಟಿಪ್ಪು ಸುಲ್ತಾನ್‌ ಸ್ವಾತಂತ್ರ್ಯಪೂರ್ವ ದೇಶ ಕಂಡ ಅಪ್ರತಿಮ ಹೋರಾಟಗಾರ ಎಂದರು.

ಟಿಪ್ಪು ಸುಲ್ತಾನ್‌ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿಯ ಆಡಳಿತದಲ್ಲಿ ನಲುಗುತ್ತಿದ್ದ ಭಾರತವನ್ನು ಅವರ ಕಪಿಮುಷ್ಟಿಯಿಂದ ಬಿಡಿಸಲು ಕನಸು ಕಂಡ ಕಾರಣ ಪುರುಷ, ಬ್ರಿಟಿಷರೊಂದಿಗೆ ನಿರಂತರ ಸೆಣಸಿದ ಛಲಗಾರ, ಹಗಲಿರುಳು ಬ್ರಿಟಿಷರನ್ನು ದುಃಸ್ವಪ್ನದಂತೆ ನಿರಂತರ ಕಾಡಿದ ವೀರ ಯೋಧ, ಅಪ್ಪಟ ದೇಶಪ್ರೇಮಿಯಾಗಿದ್ದರು ಎಂದರು. ಆಡಳಿತ, ಪ್ರಜಾಪ್ರಭುತ್ವ ಮತ್ತು ಜನಪರ ಕಾಳಜಿ ಇಂದಿನ ಯುಕವರು ಅಳವಡಿಸಿಕೊಳ್ಳಬೇಕಾದಂತಹ ವ್ಯಕ್ತಿತ್ವವನ್ನು ಟಿಪ್ಪು ಹೊಂದಿದ್ದರು. ಆದ್ದರಿಂದ ಅವರೊಬ್ಬ ಮೇರು ವ್ಯಕ್ತಿತ್ವ ಹೊಂದಿದ್ದರು ಎಂದರು.

ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಮೊಹ್ಮದ್‌ ಅಮಜದ್‌ ಜಾವೀಧ್‌ ಮಾತನಾಡಿ ಟಿಪ್ಪು ಸುಲ್ತಾನ್‌ ಹಿಂದೂ ಧರ್ಮವನ್ನು, ಹಿಂದೂಗಳನ್ನು ಎಷ್ಟೊಂದು ಗೌರವ ಮತ್ತು ಭಕ್ತಿಯಿಂದ ಕಾಣುತ್ತಿದ್ದ ಎಂಬುದಕ್ಕೆ ಅವರು ಒಟ್ಟು 156 ದೇವಸ್ಥಾನಗಳಿಗೆ ಆರ್ಥಿಕ ನೆರವು ನೀಡಿರುವುದೇ ಸಾಕ್ಷಿಯಾಗಿದೆ ಎಂದರು.

ಟಿಪ್ಪು ಸುಲ್ತಾನ್‌ ರ ಹಲವಾರು ಕ್ರಾಂತಿಕಾರಿ ಆಲೋಚನೆಗಳು ಮತ್ತು ಕಾರ್ಯಗಳು ನಮಗೆ ಇಂದಿಗೂ ಮಾದರಿ. ಟಿಪ್ಪು ಸುಲ್ತಾನ್‌ ಸದಾ ಹೊಸ ತಂತ್ರಜ್ಞಾನಕ್ಕೆ ತುಡಿಯುತ್ತಿದ್ದ. ಅವನು ಭಾರತದಲ್ಲಿ ಮೊದಲ ಬಾರಿಗೆ ಸೇನೆಯಲ್ಲಿ ಫ್ರೆಂಚ್‌
ರ ಸಹಾಯದಿಂದ ಕ್ಷಿಪಣಿ ಮತ್ತು ರಾಕೇಟ್‌ಗಳನ್ನು ಬಳಸುವುದರ ಮೂಲಕ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಎಂದರು.

ಹಜರತ್‌ ಖಾಜಾ ಬಂದೇ ನವಾಜ್‌ ದರ್ಗಾದ ಸಜ್ಜಾದ್‌ ನಶೀನ್‌ ಡಾ| ಸೈಯದ ಶಹಾ ಖುಸ್ರೋ ಹುಸೇನಿ ಮಾತನಾಡಿ, ಟಿಪ್ಪು ಸುಲ್ತಾನ್‌ ನೇರವಾಗಿ ಹುಲಿಯೊಂದಿಗೆ ಹೋರಾಡಿ ಜಯಶಾಲಿಯಾಗಿ ಮೈಸೂರು ಹುಲಿ ಎಂದು ಪ್ರಖ್ಯಾತರಾಗಿದ್ದು, ಹುಲಿಯನ್ನೇ ತನ್ನ ಲಾಂಛನವನ್ನಾಗಿ ಮಾಡಿಕೊಂಡಿದ್ದರು. ತನ್ನ ರಾಜ್ಯದ ಎಲ್ಲ ಜನತೆಯೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತ ಸಂಯಮದಿಂದ ವರ್ತಿಸುತ್ತಿದ್ದ ಸರಳ ವ್ಯಕ್ತಿ ಎಂದರು.

ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಇಲಿಯಾಸ್‌ ಬಾಗವಾನ್‌, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹ್ಮದ ಅಜಗರ ಚುಲಬುಲ್‌, ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಫರಾಜ್‌ ಉಲ್‌ ಇಸ್ಲಾಂ ಹಾಗೂ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ವಂದಿಸಿದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಕುರಿತ ಕಿರು ಹೊತ್ತಿಗೆಯನ್ನು ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಡುಗಡೆ
ಮಾಡಿದರು. 

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.