ಮತ ಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ವಿರೋಧ
Team Udayavani, Nov 11, 2017, 10:06 AM IST
ಚಿತ್ತಾಪುರ: ರಾಜ್ಯ ಸರ್ಕಾರ ಮಹಾನ್ ಪುರುಷರ ಜಯಂತಿ ಆಚರಿಸಲು ಅನುಮತಿ ನೀಡಿದೆ. ಅದೇ ರೀತಿ ಅಪ್ಪಟ ದೇಶಪ್ರೇಮಿ ಆಗಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಅನುಮತಿ ನೀಡಿದ್ದರಲ್ಲಿ ತಪ್ಪಿಲ್ಲ. ಆದರೆ ಬಿಜೆಪಿ ಅವರು ಕೇವಲ ಮತ ಬ್ಯಾಂಕ್ ಗಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಟಿಪ್ಪು ಜಯಂತಿ
ಆಚರಿಸಿ, ಟಿಪ್ಪುವಿನ ವೇಷಭೂಷಣ ಧರಿಸಿ ಹಾಡಿ ಹೊಗಳಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ
ಇದೆ. ಆದ್ದರಿಂದ ಟಿಪ್ಪು ಜಯಂತಿ ಬಗ್ಗೆ ಅಪಸ್ವರ ಎತ್ತುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿಸುವ ಜತೆಗೆ ಹಿಂದೂ-ಮುಸ್ಲಿಂ ಬೇಧ ಭಾವ ಹುಟ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಟಿಪ್ಪು ವಿರುದ್ಧ ಅಪಸ್ವರ ಎತ್ತುತ್ತಿರುವಯಡಿಯೂರಪ್ಪ, ಜಗದೀಶ ಶೆಟ್ಟರ್, ಈಶ್ವರಪ್ಪ, ಆರ್.ಅಶೋಕ, ಶೋಭಾ ಕರಂದ್ಲಾಜೆ ಅವರು ಟಿಪ್ಪುವಿನ ವೇಷಭೂಷಣ ತೊಟ್ಟು ಹೊಗಳಿದ್ದು ಜಗಜ್ಜಾಹೀರವಾಗಿದ್ದರೂ, ಈಗ ಮತ ಬ್ಯಾಂಕ್‌ಗಾಗಿ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದರು.
ಕ್ಷೇತ್ರದ ಜನ ಕತ್ತೆಗೆ ಮತ ಹಾಕ್ಬೇಕಾ?
ಬಿಜೆಪಿ ಸೇರಿದ ಕೂಡಲೇ ಕತ್ತೆಗೆ ಟಿಕೆಟ್ ಕೊಟ್ಟರೆ ಗೆಲ್ಲಿಸಿ ತೋರಿಸ್ತಿವಿ ಎಂದು ಹೇಳುತ್ತಾರೆ. ಅಂದರೇ ಬಿಜೆಪಿಯಲ್ಲಿ ನಾಯಕರೇ ಇಲ್ವಾ.? ಕ್ಷೇತ್ರದ ಜನರು ಏನ್ ಕತ್ತೆಗೆ ಮತ ಹಾಕ್ಬೇಕಾ? ಚುನಾವಣೆ ಸಂದರ್ಭದಲ್ಲಿ ನಾನ್ ಯಾರ ಜೊತೆ ಫೈಟ್ ಮಾಡ್ಬೇಕು ಎನ್ನೋದೆ ತಿಳಿಯದ ಹಾಗಾಗಿದೆ. ನಾನು ಕುಸ್ತಿ ಆಡಲು ಸಿದ್ಧವಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಕತ್ತೆ ಆದ್ರೆ ನಾನು ಕತ್ತೆ ಜೊತೆ ಕುಸ್ತಿ ಆಡ್ಲಾ. ಮೊದಲು ಒಬ್ಬರು ಅಭ್ಯರ್ಥಿನ ಸಿದ್ಧ ಮಾಡ್ಕೊಳ್ಳಿ. ಆಮೇಲೆ ಯಾರು ಯಾರ ಜೊತೆ ಕುಸ್ತಿ ಆಡುತ್ತಾರೆ ಅಂತ ಗೊತ್ತಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.