ಟಿಪ್ಪು ಜಯಂತಿ, ವ್ಯಾಪಕ ಬಂದೋಬಸ್ತು
Team Udayavani, Nov 11, 2017, 10:08 AM IST
ಮಹಾನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ‘ಹಜರತ್ ಟಿಪ್ಪು ಸುಲ್ತಾನ್ ಜಯಂತಿ’ ಶುಕ್ರವಾರ ಜರಗಿತು.
ಜಿಲ್ಲೆಯಲ್ಲಿ ಸರಕಾರದ ವತಿಯಿಂದ ಮಾತ್ರ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು. ನಗರದ ಬೇರೆ ಎಲ್ಲೂ ಆಚರಣೆಗೆ ಅನುಮತಿ ನೀಡಿರಲಿಲ್ಲ. ಮೆರವಣಿಗೆಗೂ ಅವಕಾಶವಿರಲಿಲ್ಲ. ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಕಮಿಷನರೆಟ್ ವ್ಯಾಪ್ತಿಯಲ್ಲಿ 4 ಕೆಎಸ್‌ಆರ್‌ಪಿ, 10 ಸಿಆರ್‌ಪಿ ತುಕುಡಿಗಳು ಸಹಿತ 1,200 ಅಧಿಕಾರಿಗಳು ಹಾಗೂ ಸಿಬಂದಿ ಮತ್ತು 130 ಸಿಬಂದಿಯನ್ನು ಒಳಗೊಂಡ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತ್ ಕಚೇರಿಗಿಂತ ಸುಮಾರು 500 ಮೀಟರ್ ದೂರದಿಂದಲೇ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದವರನ್ನು ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿತ್ತು. ವಾಹನಗಳನ್ನು ಗೇಟಿನ ಹೊರಭಾಗದಲ್ಲೇ ನಿಲ್ಲಿಸಿ ತಪಾಸಣೆಗೊಳಪಡಿಸಿದರು. ಕೇವಲ ಸರಕಾರಿ ವಾಹನಗಳಿಗಷ್ಟೇ ಪಂಚಾಯತ್ ಕಟ್ಟಡದ ಆವರಣದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗಿತ್ತು.
ಬಿಗಿ ಭದ್ರತೆಯ ಮಧ್ಯೆಯೂ ಕಾರ್ಯಕ್ರಮ ಆರಂಭಕ್ಕೆ ಮುನ್ನ ಜಿ.ಪಂ. ಕಚೇರಿಗೇಟಿನೊಳಗೆ ಪ್ರವೇಶಿಸಿದ ಬಿಜೆಪಿ ಅಲ್ಪ
ಸಂಖ್ಯಾಕ ಘಟಕದ ಮುಖಂಡ ಫ್ರಾಂಕ್ಲಿನ್ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು. ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಡಿಸಿಪಿಗಳಾದ ಉಮಾ ಪ್ರಶಾಂತ್, ಹನುಮಂತರಾಯ, ಎಸಿಪಿ ಉದಯ ನಾಯಕ್, ಮಂಜುನಾಥ ಶೆಟ್ಟಿ ಸಹಿತ ಹಿರಿಯ ಅಧಿಕಾರಿಗಳು ಕೂಡ ಕಾರ್ಯಕ್ರಮ ಆರಂಭದಿಂದ ಕೊನೆಯವರೆಗೆ ಜಿಲ್ಲಾ ಪಂಚಾಯತ್ ಕಚೇರಿಯ ಹೊರಗಡೆ ಬಂದೋಬಸ್ತ್ ನಿರತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.