ಟಿಪ್ಪು ಎಪಿಗ್ರಫಿ ಪುಸ್ತಕ ಸಿಎಂಗೆ ರವಾನೆ


Team Udayavani, Nov 11, 2017, 1:04 PM IST

m1-tippu-apigarpi.jpg

ಮೈಸೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಟಿಪ್ಪುವಿನ ನೈಜ ಇತಿಹಾಸವಿರುವ ಎಪಿಗ್ರಫಿ ಪುಸ್ತಕವನ್ನು ಅಂಚೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಿದರು.

ನಗರದ ಕೆ.ಆರ್‌.ಕ್ಷೇತ್ರದ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮತದಾರರ ನಡಿಗೆ ಬೂತ್‌ ಕಡೆಗೆ ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಟಿಪ್ಪು ಜಯಂತಿ ವಿರೋಧಿಸುವವರಿಗೆ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದು, ಹೀಗಾಗಿ ಟಿಪ್ಪುವಿನ ನೈಜ ಇತಿಹಾಸವಿರುವ ಪುಸ್ತಕವನ್ನು ಕಳುಹಿಸಲಾಗುತ್ತಿದೆ.

ಮೈಸೂರು ವಿವಿ ಪ್ರಕಟಿಸಿರುವ ಎಪಿಗ್ರಫಿ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್‌ ಕ್ರೂರಿ, ಮತಾಂಧ, ಸರ್ವಾಧಿಕಾರಿಯಾಗಿದ್ದ ಎನ್ನುವ ಬಗ್ಗೆಯೇ ಉಲ್ಲೇಖೀಸಲಾಗಿದೆ. ಸ್ವತಃ ಟಿಪ್ಪು ಪರ್ಶಿಯನ್‌ ಭಾಷೆಯಲ್ಲಿ ಕಲ್ಲಿನಲ್ಲಿ ಕೆತ್ತಿಸಿರುವ ವಿಚಾರವನ್ನು ಮೈಸೂರು ವಿವಿ ಇಂಗ್ಲಿಷ್‌ಗೆ ತರ್ಜುಮೆ ಮಾಡಿದೆ.

ಆ ಪುಸ್ತಕದಲ್ಲಿ ಮೂರ್ತಿ ಪೂಜೆ ಮಾಡುವವರನ್ನು ಕತ್ತರಿಸಿ ಹಾಕಿ, ಹಿಂದೂಗಳ ನಾಶಕ್ಕೆ ಕತ್ತಿ ಸಿದ್ಧ ಮಾಡಿಕೊಳ್ಳಿ ಮತ್ತು ದೇವಾಲಯಗಳ ನಾಶ ಮಾಡಿ, ಮರಗಳ ಕತ್ತರಿಸಿ, ಹರಿಯುವ ನೀರನ್ನು ತಡೆಯಿರಿ ಎಂದು ಬರೆಸಿದ್ದಾನೆ. ಅಯ್ಯಂಗಾರ್‌ಗಳನ್ನು ಕೊಲೆ ಮಾಡಿದ್ದು, ಕೊಡಗಿನಲ್ಲಿ ನಾಯರ್‌ಗಳನ್ನು ಅಮಾನುಷವಾಗಿ ಹತ್ಯೆ ಮಾಡಿದ್ದು, ಚಿತ್ರದುರ್ಗದ ಕೋಟೆಯನ್ನು ನಾಶ ಮಾಡಿದ ವಿಷಯಗಳು ಪುಸ್ತಕದಲ್ಲಿ ದಾಖಲಾಗಿದೆ ಎಂದರು.

ಒಂದೊಮ್ಮೆ ಮುಖ್ಯಮಂತ್ರಿಗಳು ಹಠ ಬಿಡದೆ ಟಿಪ್ಪು ಜಯಂತಿ ಆಚರಿಸಿದ್ದೇ ಆದಲ್ಲಿ, ಮುಂದಿನ ದಿನಗಳಲ್ಲಿ ರಾಜಾದ್ಯಂತ ಟಿಪ್ಪುವಿನ ನೈಜ ಇತಿಹಾಸವನ್ನು ಜನರ ಮುಂದೆ ತೆರೆದಿಡಲಾಗುವುದು ಎಂದು ಹೇಳಿದರು. ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್‌, ಬಿಜೆಪಿ ಮುಖಂಡ ಜೋಗಿಮಂಜು, ಕೆ.ಆರ್‌.ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.