ಪೊಲೀಸ್ ಭದ್ರಕೋಟೆಯೊಳಗೆ ಟಿಪ್ಪು ಜಯಂತಿ
Team Udayavani, Nov 11, 2017, 1:05 PM IST
ಮೈಸೂರು: ಪೊಲೀಸರ ಭದ್ರಕೋಟೆ, ಸಿಸಿ ಕ್ಯಾಮರಾಗಳ ಕಣ್ಗಾವಲಿನ ನಡುವೆ ಶುಕ್ರವಾರ ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಟಿಪ್ಪು ಸುಲ್ತಾನ್‌ರ 268ನೇ ದಿನಾಚರಣೆ ನಡೆಯಿತು. ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ಇದ್ದ ಹಿನ್ನೆಲೆಯಲ್ಲಿ ಕಲಾಮಂದಿರದಲ್ಲಿ ಭದ್ರತೆಗಾಗಿ ನೂರಕ್ಕು ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ಕಲಾಮಂದಿರದ ಪ್ರವೇಶ ದ್ವಾರಗಳಲ್ಲೇ ಬ್ಯಾರಿಕೇಡ್ ಹಾಕಿಕೊಂಡು ನಿಂತಿದ್ದ ಪೊಲೀಸರು, ಲೋಹಶೋಧಕ ಯಂತ್ರಗಳ ಮೂಲಕ ಪ್ರತಿಯೊಬ್ಬರನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಿದ ನಂತರವೇ ಒಳ ಬಿಟ್ಟರು. ಮತ್ತೆ ಕಲಾಮಂದಿರದ ಮುಖ್ಯ ಪ್ರವೇಶ ದ್ವಾರದಲ್ಲಿ ತಪಾಸಣೆ ಮೂಲಕವೇ ಒಳ ಪ್ರವೇಶಿಸಬೇಕಿತ್ತು.
ಕಂಟ್ರೋಲ್ ಯೂನಿಟ್: ವಿಶೇಷ ಭದ್ರತೆ ಹಿನ್ನೆಲೆಯಲ್ಲಿ ಕಲಾಮಂದಿರಕ್ಕೆ ಹೆಚ್ಚುವರಿ 16 ಸಿಸಿ ಕ್ಯಾಮರಾ ಅಳವಡಿಸಿ ಕಂಟ್ರೋಲ್ ಯೂನಿಟ್‌ಗಳನ್ನು ಸ್ಥಾಪಿಸಲಾಗಿತ್ತು. ಇಬ್ಬರೂ ಡಿಸಿಪಿಗಳು ಅಲ್ಲಿಯೇ ಕುಳಿತು ಕಲಾಮಂದಿರದ ಎಲ್ಲಾ ಕೋನಗಳಿಂದ ಬರುವವರು, ಹೋಗುವವರ ಮೇಲೆ ನಿಗಾ ಇಡುತ್ತಿದ್ದರು.
ಕಾರ್ಯಕ್ರಮದ ವೇದಿಕೆ ಮುಂಭಾಗ ಕೂಡ 10ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ಬೆಳಗ್ಗೆ 10.30ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ 11.15ಕ್ಕೆ ಬಂದರು. ನಂತರ ಕಾರ್ಯಕ್ರಮ ಆರಂಭಿಸಲಾಯಿತು. ಆರಂಭದಲ್ಲಿ ಕಲಾಮಂದಿರ ಸಭಾಂಗಣ ಖಾಲಿ ಇತ್ತು. ನಂತರ ಗುಂಪು ಗುಂಪಾಗಿ ಘೋಷಣೆ ಕೂಗುತ್ತಾ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಮಹದೇವಪ್ಪ ಅವರು ಸುಮಾರು 1ಗಂಟೆ ಕಾಲ ವೀರಾವೇಶದಿಂದ ಭಾಷಣ ಮಾಡಿದರು. ಆನಂತರ ಶುಕ್ರವಾರದ ನಮಾಜ್ ಹಿನ್ನೆಲೆಯಲ್ಲಿ ಬಹುಪಾಲು ಜನ ಎದ್ದು ಹೋದರು.
ಹೆಸರಿರಲಿಲ್ಲ: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕಿಸದಂತೆ ಸಂಸದ ಪ್ರತಾಪ್‌ಸಿಂಹ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು. ಆದರೆ, ಬಿಜೆಪಿಯ ಉಪ ಮೇಯರ್ ರತ್ನಲಕ್ಷ್ಮಣ್, ಜಿಪಂ ಉಪಾಧ್ಯಕ್ಷ ಜಿ.ನಟರಾಜ್‌ರ ಹೆಸರನ್ನು ಮುದ್ರಿಸಲಾಗಿತ್ತಾದರೂ ಗೈರಾಗಿದ್ದರು. ಸಾಮಾನ್ಯವಾಗಿ ಯಾವುದೇ ಕಾರ್ಯಕ್ರಮದಲ್ಲೂ ತಪ್ಪಿಸಿಕೊಳ್ಳದ ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ ಗೈರು ಹಾಜರಿ ಎದ್ದು ಕಾಣುತ್ತಿತ್ತು.
ಎಂದಿನಂತೆ ಜಿಲ್ಲಾಡಳಿತ ಶಿಷ್ಟಾಚಾರದ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ 29 ಮಂದಿ ಚುನಾಯಿತ ಜನಪ್ರತಿನಿಧಿಗಳ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಹಾಕಿಸಿದ್ದರೂ ಕಾರ್ಯಕ್ರಮಕ್ಕೆ ಬಂದವರು, 10ಮಂದಿ ಮಾತ್ರ. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ತನ್ವೀರ್‌ಸೇs… ಕಳುಹಿಸಿದ್ದ ಸಂದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ ಓದಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.