‘ಕಾರ್ಮಿಕರಿಗೆ ಇಂಟಕ್‌ ಮೂಲಕ ನೆರವಾಗಿ’


Team Udayavani, Nov 11, 2017, 2:17 PM IST

11-Nov-9.jpg

ಪುತ್ತೂರು: ಕಾರ್ಮಿಕ ವರ್ಗವನ್ನು ಗುರುತಿಸಿ ಅವರನ್ನು ಸಂಘಟನಾತ್ಮಕ ವಲಯಕ್ಕೆ ಸೇರಿಸಿಕೊಂಡು ಸರಕಾರದಿಂದ ಕಾರ್ಮಿಕರಿಗೆ ಸಿಗುವ ಸವಲತ್ತುಗಳನ್ನು ಒದಗಿಸಿಕೊಡುವ ಹಾಗೂ ಕಾರ್ಮಿಕರ ನ್ಯಾಯಯುತ ಹಕ್ಕುಗಳನ್ನು ಒದಗಿಸಿ ಕೊಡುವ ಪ್ರಯತ್ನ ಇಂಟಕ್‌ ಮೂಲಕ ನಡೆಯಬೇಕು ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಡೆದ ಪುತ್ತೂರು ಇಂಟಕ್‌ ಪದಗ್ರಹಣ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರು ದೇಶದ ಬೆನ್ನೆಲುಬು. ಅವರ ದುಡಿಮೆಯ ಶ್ರಮದಲ್ಲಿ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತಾ ಬಂದಿದೆ.
ಇಂಥ ಕಾರ್ಮಿಕ ವರ್ಗಕ್ಕೆ ಉತ್ತಮ ಭವಿಷ್ಯ ಸಿಕ್ಕರೆ ದೇಶದ ಭವಿಷ್ಯವೂ ಉಜ್ವಲವಾಗುತ್ತದೆ ಎಂದರು.

ಸ್ವಾವಲಂಬಿಗಳಾಗಿ
ಕಾರ್ಮಿಕರು ತಾವು ಪರಿಶ್ರಮದಿಂದ ದುಡಿದು ಸ್ವಾವಲಂಬಿಗಳಾಗಬೇಕು. ಇನ್ನೊಂದಿಷ್ಟು ಕಾರ್ಮಿಕರ ಬದುಕಿಗೆ ದಾರಿದೀಪ ಆಗುವ ರೀತಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಇದರಿಂದ ಇಡೀ ಕಾರ್ಮಿಕ ಸಮುದಾಯದ ಕಲ್ಯಾಣ ಸಾಧ್ಯವಾಗುತ್ತದೆ ಎಂದರು.

ಇಂಟಕ್‌ ರಾಜ್ಯಾಧ್ಯಕ್ಷ ರಾಕೇಶ್‌ ಮಲ್ಲಿ ಅವರು ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತಾದ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, 3.30 ಕೋಟಿ ಸದಸ್ಯರು ಇಂಟಕ್‌ನಲ್ಲಿದ್ದು, ಇಡೀ ವಿಶ್ವದಲ್ಲೇ ಇಷ್ಟು ಸಂಖ್ಯೆಯ ಸದಸ್ಯರನ್ನು ಹೊಂದಿರುವ ಮತ್ತೂಂದು ಕಾರ್ಮಿಕ ಸಂಘಟನೆ ಇಲ್ಲ. ದೇಶದ ಬಲಿಷ್ಠ ಕಾರ್ಮಿಕ ಸಂಘಟನೆಯಾಗಿ ಬೆಳೆದು ನಿಂತಿರುವ ಇಂಟಕ್‌ ನಾಡಿನ ಮೂಲೆ ಮೂಲೆಯಲ್ಲಿ ಕಾರ್ಮಿಕರನ್ನು ಸಂಘಟಿಸುವ ಮತ್ತು ಅವರಿಗೆ ಯೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡುವ ಕೆಲಸ ಮಾಡುತ್ತಾ ಬಂದಿದೆ ಎಂದರು.

ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿದ ಜಿಲ್ಲಾ ಇಂಟಕ್‌ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ, ಎಲ್ಲ ತಾಲೂಕುಗಳಲ್ಲಿ ಇಂಟಕ್‌ ಕಾರ್ಯಕರ್ತರು ಬಲಿಷ್ಠ ತಂಡ ಕಟ್ಟಿಕೊಂಡಿದ್ದಾರೆ. ಪುತ್ತೂರಿನಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರು ಮತ್ತೂಮ್ಮೆ ಗೆದ್ದು ಬರುವ ನಿಟ್ಟಿನಲ್ಲಿ ಇಂಟಕ್‌ ಕೂಡ ಕೆಲಸ ಮಾಡಲಿದೆ ಎಂದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು, ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುರಳೀಧರ ರೈ, ಇಂಟಕ್‌ ಕಾನೂನು ಸಲಹೆಗಾರ ದಿನಕರ ಶೆಟ್ಟಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು ಮಾತನಾಡಿದರು.

ನಗರ ಕಾಂಗ್ರೆಸ್‌ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ,
ಇಂಟಕ್‌ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್‌ ಶೆಟ್ಟಿ, ಪ್ರಮುಖರಾದ ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ, ಲಕ್ಷ್ಮಣ ಬೈಲಾಡಿ, ಜೋಕಿಂ ಡಿ’ಸೋಜಾ, ಯು.ಟಿ. ತೌಸಿಫ್‌, ದೀಕ್ಷಿತ್‌ ಶೆಟ್ಟಿ, ಸ್ಟೀವನ್‌ ಡಿ’ಸೋಜಾ ಉಪಸ್ಥಿತರಿದ್ದರು.

ದಿಲೀಪ್‌ ಕುಮಾರ್‌ ಮೊಟ್ಟೆತ್ತಡ್ಕ ಪ್ರಾರ್ಥಿಸಿದರು. ತಾಲೂಕು ಇಂಟಕ್‌ನ ನೂತನ ಅಧ್ಯಕ್ಷ ಜಯಪ್ರಕಾಶ್‌ ಬದಿನಾರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರಫಿಕ್‌ ಎಂ. ಕೆ. ವಂದಿಸಿದರು. ನಿರಂಜನ ರೈ ಮಠಂತಬೆಟ್ಟು ನಿರ್ವಹಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.