ಚೆಕ್‌ಪೋಸ್ಟ್‌ಗಳಲ್ಲಿ ವಸೂಲಿ ದಂಧೆ: ಎಚ್‌ಡಿಕೆ ಆರೋಪ
Team Udayavani, Nov 12, 2017, 12:56 PM IST
ಬೆಂಗಳೂರು: ಜಿಎಸ್‌ಟಿ ಜಾರಿಯಾದ ಬಳಿಕ ದೇಶಾದ್ಯಂತ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ. ಆದರೂ ಕರ್ನಾಟಕದಲ್ಲಿ ಚೆಕ್ ಪೋಸ್ಟ್‌ಗಳಲ್ಲಿ ನಿತ್ಯ 30ಲಕ್ಷ ರೂ.ವರೆಗೆ ರೌಡಿಗಳ ಮೂಲಕ ವಸೂಲಿ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಶನಿವಾರ ಮಾತನಾಡಿ, ಸರ್ಕಾರವೇ ರೌಡಿಗಳ ಮೂಲಕ ಇಂಥದ್ದೊಂದು ದಂಧೆಗೆ ಇಳಿದಿದೆ. ಇದು ಸಿಎಂ ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು. ಚೆಕ್ ಪೋಸ್ಟ್‌ಗಳಲ್ಲಿ ಅನಧಿಕೃತವಾಗಿ ವಸೂಲಿ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು ಇದಕ್ಕೆ ಗೃಹ ಸಚಿವರು ಹಾಗೂ ಸಾರಿಗೆ ಸಚಿವರೇ ಜವಾಬ್ದಾರರು ಎಂದು ಕುಮಾರಸ್ವಾಮಿ ಆರೋಪಿಸಿದರು.
ವಿಜಯಪುರ ಜಿಲ್ಲೆ ಝಳಕಿ ಸೇರಿ ರಾಜ್ಯದ ಚೆಕ್‌ಪೋಸ್ಟ್ ಗಳಲ್ಲಿ ನಡೆಯುತ್ತಿರುವ ದಂಧೆಯ ಬಗ್ಗೆ 15 ದಿನಗಳವರೆಗೂ ಕಾಯುತ್ತೇನೆ.
ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ನಮ್ಮ ಪಕ್ಷದಿಂದಲೇ ದಾಳಿ ಮಾಡಿ ವಸೂಲಿಗಾರರನ್ನು ಹಿಡಿಯಲಾಗುವುದು ಎಂದರು.
ಸಿದ್ದರಾಮಯ್ಯ ಬೇರೆಯವರ ಬಗ್ಗೆ “ಡೋಂಗಿ’ ಪದಬಳಸುತ್ತಾರೆ. ಅದು ಅವರಿಗೆ ಬಹುಪ್ರಿಯ ಪದ. ಆದರೆ, ಸಮಾಜವಾದ ಹಿನ್ನೆಲೆಯಿಂದ ಬಂದಿರುವ ಅವರು 50 ಸಾವಿರ ರೂ. ಮೌಲ್ಯದ ಶೂ ಬಳಸುತ್ತಾರೆ.ಅವರದ್ದು ಢೋಂಗಿ ಸಮಾಜವಾದವಲ್ಲವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಅನೇಕ ಶಾಸಕರು ಜೆಡಿಎಸ್ ಸೇರ್ಪಡೆ ಬಗ್ಗೆ ಸಂಪರ್ಕಿಸಿರುವುದು ನಿಜ. ಆದರೆ, ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುತ್ತೇನೆ. ಮಾಲಕರೆಡ್ಡಿ ಹೇಳಿಕೆ ಗಮನಿಸಿದ್ದೇನೆ. ಮಾಲೀಕಯ್ಯ ಗುತ್ತೇದಾರ್ ಅವರು ಸಚಿವ ಪ್ರಿಯಾಂಕ ಖರ್ಗೆ ಆಡಳಿತದ ಬಗ್ಗೆ ಬೇಸರ ಹೊರಹಾಕಿದ್ದಾರೆ. ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರುವ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ಆದರೆ, ಸದ್ಯಕ್ಕೆ ಏನೂ ಹೇಳಲಾರೆ.
– ಎಚ್.ಡಿ.ಕುಮಾರಸ್ವಾಮಿ,
ಮಾಜಿ ಮುಖ್ಯಮಂತ್ರಿ
ಎಚ್‌ಡಿಕೆ ಕ್ರಿಯೇಟಿವ್ ಸೆಂಟರ್‌ಗೆ ಚಾಲನೆ
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರ ತಲುಪಲು ಜೆಡಿಎಸ್ ಹೊಸ ಪ್ರಯೋಗಗಳಲ್ಲಿ ತೊಡಗಿದೆ.
“ಕರ್ನಾಟಕ ನಿಮ್ಮ ಕಡೆಗೆ ನನ್ನ ನಡಿಗೆ’ ಘೋಷವಾಕ್ಯದಡಿ ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್, ಸೌಂಡ್ ಕೌಡ್,
ಪಿಂಟರೆಸ್ಟ್ ಮೂಲಕ ಟಿವಿ ಚಾನೆಲ್‌ಗಳ ರೀತಿಯಲ್ಲಿ ದಿನದ 24 ಗಂಟೆ ನಿರಂತರವಾಗಿ ಸಾಮಾಜಿಕ ಜಾಲತಾಣಗಳ
ಮೂಲಕ ಜೆಡಿಎಸ್ ಕಾರ್ಯಚಟುವಟಿಕೆಗಳು, ಕುಮಾರಸ್ವಾಮಿ ಭಾಷಣಗಳನ್ನು ಅಪಲೋಡ್ ಮಾಡುವುದು ಇದರ ಉದ್ದೇಶ. “ನಮ್ಮ ಎಚ್‌ಡಿಕೆ’ ಆ್ಯಪ್ ನಂತರ ಇದೀಗ “ನಮ್ಮ ಎಚ್‌ಡಿಕೆ’ ಕ್ರಿಯೇಟಿವ್ ಸೆಂಟರ್ ಆರಂಭಿಸಿದೆ. ಇದರ ಜತೆಗೆ ಮಾಧ್ಯಮಗಳಿಗೆ ಹೇಳಿಕೆಗಳನ್ನು ಸುದ್ದಿರೂಪದಲ್ಲಿ ಕಳುಹಿಸಲು “ಎಚ್‌ಡಿಕೆ μàಚರ್ ಸರ್ವೀಸ್’, ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಸಂದೇಶ ರವಾನಿಸಲು “ನಮ್ಮ ಎಚ್‌ಡಿಕೆ’ ವಾಟ್ಸ್‌ಆ್ಯಪ್ ಕೇಂದ್ರ, ಜನ ಸಾಮಾನ್ಯರು ಮಿಸ್ಡ್ ಕಾಲ್ ಕೊಟ್ಟರೆ ಪಕ್ಷಕ್ಕೆ ಸಂಬಂಧಿಸಿದ ಮಾಹಿತಿ ರವಾನಿಸಲು “ಎಚ್‌ಡಿಕೆ ಕಾಮನ್
ಮ್ಯಾನ್ ಕ್ಲಿಕ್’ ಕೇಂದ್ರ ಸ್ಥಾಪಿಸಲಾಗಿದೆ. ಶನಿವಾರ ಪಕ್ಷದ ಕಚೇರಿಯಲ್ಲಿ ಎಚ್‌ಡಿಕೆ ಕ್ರಿಯೇಟಿವ್ ಸೆಂಟರ್‌ಗೆ ಕುಮಾರಸ್ವಾಮಿ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.