ಕಾಂಗ್ರೆಸ್ ಬಿಡುವ ಯೋಚನೆ ಇದೆ ಬೇರೆ ಪಕ್ಷ ಸೇರಲ್ಲ: ಮಾಲಕರೆಡ್ಡಿ
Team Udayavani, Nov 12, 2017, 1:06 PM IST
ಕಲಬುರಗಿ: ಇಂದಿನ ರಾಜಕೀಯ ಬೆಳವಣಿಗೆಗಳಿಂದ ಅಸಮಾಧಾನ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಬಿಡುವ ಬಗ್ಗೆ ಯೋಚಿಸುತ್ತಿದ್ದೇನೆ. ಜೊತೆಗೆ ರಾಜಕೀಯದಿಂದಲೇ ನಿವೃತ್ತಿಯಾಗುವ ಬಗ್ಗೆಯೂ ಚಿಂತಿಸುತ್ತಿದ್ದೇನೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಯಾದಗಿರಿ ಶಾಸಕ ಡಾ|ಎ.ಬಿ.ಮಾಲಕರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ “ಉದಯವಾಣಿ’ ಜತೆ ಮಾತನಾಡಿ, ಕಾಂಗ್ರೆಸ್‌ನಲ್ಲೀಗ ಹಿರಿಯರೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಈ ಬಗ್ಗೆ ಈಗಾಗಲೇ ಅನೇಕ ಸಲ ಅಸಮಾಧಾನ ಹೊರ ಹಾಕಿದ್ದೇನೆ. ಆದರೆ, 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದೊಂದಿಗೆ ಬಂದಿದ್ದೇನೆ. ಪಕ್ಷ ಎಲ್ಲವನ್ನೂ ನೀಡಿದೆ. ಹೀಗಾಗಿ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರೋದಿಲ್ಲ. ಆದರೆ, ರಾಜಕೀಯದಿಂದ ದೂರ ಇರುವ ನಿಟ್ಟಿನಲ್ಲಿ ನಿವೃತ್ತಿ ಘೋಷಿಸಿ ಸಾಮಾನ್ಯ ನಾಗರಿಕನಾಗಿ ಇರಲು ಬಯಸಿದ್ದೇನೆ.
ಹಾಗಂತ ಈಗಲೇ ಪಕ್ಷ ಬಿಡುತ್ತಿದ್ದೇನೆ, ಬಿಜೆಪಿ ಅಥವಾ ಜೆಡಿಎಸ್ ಸೇರ್ತೇನೆ ಎಂಬುದು ಕೇವಲ ಊಹಾಪೋಹ. ಆದರೆ, ಚುನಾವಣೆ ಸಮಯದಲ್ಲಿ ಪಕ್ಷ ಬಿಡುವ ಹಾಗೂ ರಾಜಕೀಯ ನಿವೃತ್ತಿಯಾಗುವ ಬಗ್ಗೆ ಕ್ಷೇತ್ರದ ಜನರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಉದ್ದೇಶಿಸಿದ್ದೇನೆ ಎಂದು ಹೇಳಿದರು.
ಅಲ್ಲದೆ, ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಕಾಂಗ್ರೆಸ್ ಬಿಡುತ್ತಾರೆ ಎಂಬುದು ಊಹಾಪೋಹ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.