ಅಧಿವೇಶನ ವಿರುದ್ಧ ಎಂಇಎಸ್ ಮರಾಠಿ ಮಹಾ ಮೇಳಾವ್!
Team Udayavani, Nov 13, 2017, 7:10 AM IST
ಬೆಳಗಾವಿ: ಉತ್ತರ ಕರ್ನಾಟಕದ ವಿಕಾಸಕ್ಕಾಗಿ ಗಡಿ ನೆಲ ಬೆಳಗಾವಿಯಲ್ಲಿ ಸರಕಾರ ನಡೆಸುತ್ತಿರುವ ಚಳಿಗಾಲದ ಅಧಿವೇಶನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮರಾಠಿ ಮಹಾ ಮೇಳಾವ್ ನಡೆಸಿ ಕರ್ನಾಟಕ ಸರಕಾರಕ್ಕೆ ಸಡ್ಡು ಹೊಡೆಯಲು ಸಜ್ಜಾಗಿದೆ.
ಈ ಸಲ ರಾಷ್ಟ್ರವಾದಿ ಕಾಂಗ್ರೆಸ್ (ಎನ್‌ಸಿಪಿ)ನ ಇಬ್ಬರು ನಾಯಕರು ಪ್ರಮುಖ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಧನಂಜಯ ಮುಂಡೆ, ಮಾಜಿ ಸಚಿವ ಜಯವಂತ ದಳವಿ, ಸಂಸದ ಧನಂಜಯ ಮಹಾಡಿಕಗೆ ಮೇಳಾವ್‌ಕ್ಕೆ ಹೋಗುವಂತೆ ಎನ್‌ಸಿಪಿ ಪರಮೋಚ್ಚ ನಾಯಕ ಶರದ ಪವಾರ ಖಡಕ್ ಸೂಚನೆ ನೀಡಿದ್ದಾರೆ.
ಶರದ ಪವಾರ ಆಗಮಿಸದಿದ್ದರೂ ಅವರು ಬರೆದ ಪತ್ರವನ್ನು ಎಂಇಎಸ್ ನಾಯಕರು ಮೇಳಾವ್‌ದಲ್ಲಿ ಓದಲಿದ್ದಾರೆ.
1986ರಲ್ಲಿ ಕನ್ನಡ ವಿರೋಧಿ ಸಮಾವೇಶಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆಗ ಶರದ ಪವಾರ ಹಾಗೂ ಛಗನ್ ಭುಜಬಲ ವೇಷ ಬದಲಿಸಿಕೊಂಡು ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ಸಲವೂ ಅನುಮತಿ ಸಿಗದಿದ್ದರೆ ಎನ್‌ಸಿಪಿ ಮುಖಂಡರು ಹೇಗಾದರೂ ಮಾಡಿ ಭಾಗವಹಿಸುವಂತೆ ಪವಾರ ಸೂಚನೆ ನೀಡಿದ್ದಾರೆ ಎಂದು ಎಂಇಎಸ್ ನಾಯಕರು
ತಿಳಿಸಿದ್ದಾರೆ.
ಜೊತೆಗೆ, ಬೆಳಗಾವಿ ದಕ್ಷಿಣ ಕ್ಷೇತ್ರದ ಎಂಇಎಸ್ ಬೆಂಬಲಿತ ಶಾಸಕ ಸಂಭಾಜಿ ಪಾಟೀಲ ಹಾಗೂ ಖಾನಾಪುರ ಶಾಸಕ ಅರವಿಂದ ಪಾಟೀಲ ಅವರು ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಆಗಮಿಸಿ ನಂತರ ಮೇಳಾವ್‌ದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿ ವರ್ಷದಂತೆ ಈ ಸಲವೂ ಮಹಾರಾಷ್ಟ್ರ ಪರ ಘೋಷಣೆ ಕೂಗಿ ಕಲಾಪದಿಂದ ಹೊರ ನಡೆದು ಮೇಳಾವ್‌ದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಮೇಳಾವ್‌ಕ್ಕೆ ಹೆಚ್ಚಿನ ಜನರನ್ನು ಸೇರಿಸಲು ಎಂಇಎಸ್ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದೆ. ವಾಟ್ಸ್ ಆ್ಯಪ್, ಫೇಸ್‌ಬುಕ್‌ಗಳ ಮೂಲಕ ಪ್ರಚಾರ ನಡೆಸುತ್ತಿದೆ. ಕನ್ನಡ ವಿರುದಟಛಿ ಬರೆದ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಎಂಇಎಸ್ ನಾಯಕರು ಸಭೆ ನಡೆಸಿ ಜನರನ್ನು ಆಹ್ವಾನಿಸುತ್ತಿದ್ದಾರೆ. ಆದರೆ, ಸದ್ಯ ಹೊಲಗಳಲ್ಲಿ ರಾಶಿ ಕಾರ್ಯ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರುವುದು ಅಸಾಧ್ಯ.
ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.