ಕೇರಳದಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ
Team Udayavani, Nov 13, 2017, 6:05 AM IST
ಗುರುವಾಯೂರು: ಕೇರಳದ ದೇಗುಲ ನಗರ ಗುರುವಾಯೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಇರಿದು ಹತ್ಯೆ ಮಾಡಲಾಗಿದೆ. ಮೂರು ವರ್ಷಗಳ ಹಿಂದೆ ಸಿಪಿಎಂ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಆತನನ್ನು ಬಂಧಿಸಲಾಗಿತ್ತು.
ಆನಂದನ್ (23) ಹತ್ಯೆಯಾದ ಯುವಕ. ಸದ್ಯ ಆತ ಜಾಮೀನಿನ ಮೇಲೆ ಬಿಡು ಗಡೆಯಾಗಿದ್ದ. ಗುರುವಾಯೂರಿನ ನನ್ಮೆàನಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಕಿಡಿಗೇಡಿಗಳು ಥಳಿಸಿ, ಮಾರಕ ಆಯುಧಗಳಿಂದ ಇರಿದು ಹತ್ಯೆಗೈದಿದ್ದಾರೆ. ಗಂಭೀರವಾಗಿ ಗಾಯಗೊಂಡ ಆನಂದನ್‌ನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಖಂಡಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದು, ಪಕ್ಷ ಮತ್ತು ಆರ್‌ಎಸ್‌ಎಸ್ ಕಾರ್ಯ ಕರ್ತರ ಮೇಲೆ ಸಿಪಿಎಂನಿಂದ ಹಲ್ಲೆ, ಕೊಲೆ ಯತ್ನ ಮುಂದುವರಿದೆ. ರಾಜಕೀಯ ಹತ್ಯೆ ನಡೆಸುವವರ ಬಗ್ಗೆ ರಕ್ಷಣೆ ನೀಡುವ ವ್ಯವಸ್ಥೆ ದೇಶದಲ್ಲೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹತ್ಯೆ ನಡೆದ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲಾಗದು. ತನಿಖೆ ನಡೆಯುತ್ತಿದ್ದು, ಪ್ರಬಲ ಸುಳಿವು ಸಿಕ್ಕಿದೆ. ಅದಕ್ಕೆ ರಾಜಕೀಯ ಹಿನ್ನೆಲೆ ಇದೆಯೇ ಎಂಬ ಬಗ್ಗೆ ಹೇಳಲು ಸಾಧ್ಯವಾಗದು ಎಂದಿದ್ದಾರೆ.
ಸಿಪಿಎಂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರು ಹಿಂಸಾತ್ಮಕ ಚಟು ವಟಿಕೆಗಳಲ್ಲಿ ನಿರತರಾಗಿದ್ದಾರೆ. ಪಕ್ಷದ ನಾಯಕತ್ವ ಮತ್ತು ಕಾರ್ಯಕರ್ತರು ಯಾವುದೇ ರೀತಿಯಲ್ಲಿ ರಾಜಕೀಯ ಹತ್ಯೆಗಳಲ್ಲಿ ಭಾಗಿಯಾಗಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.