ಸಿಎಂ ಅಂಕಿತಕ್ಕೆ ಕಾದಿದೆ ಎನ್‌ಪಿಎಸ್‌

Team Udayavani, Nov 13, 2017, 6:00 AM IST

Ban13111701Medn.jpg

ಹುಬ್ಬಳ್ಳಿ: ಸರ್ಕಾರಿ ನೌಕರರ ತೀವ್ರ ಪ್ರತಿರೋಧದ ಪರಿಣಾಮ 12ಕ್ಕೂ ಹೆಚ್ಚು ರಾಜ್ಯಗಳು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಪದ್ಧತಿಯನ್ನು ರದ್ದು ಪಡಿಸಲು ಹೆಜ್ಜೆ ಇಟ್ಟಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ನಿವೃತ್ತಿ ಮತ್ತು ಮರಣ ಉಪಧನ (ಡಿಸಿಆರ್‌ಜಿ) ಮಸೂದೆ ಮುಖ್ಯಮಂತ್ರಿ ಅಂಕಿತಕ್ಕಾಗಿ ಎದುರು ನೋಡುತ್ತಲೇ ಇದೆ.

ಸರ್ಕಾರಿ ನೌಕರರು ನಿವೃತ್ತಿ ನಂತರದಲ್ಲಿ  ಪಿಂಚಣಿ ಪಡೆಯುತ್ತಿದ್ದರು. 2006ರ ಏಪ್ರಿಲ್‌ ಅನಂತರದಲ್ಲಿ ನೇಮಕಗೊಂಡ ಸರ್ಕಾರಿ ನೌಕರರಿಗೆ ಪಿಂಚಣಿ ಬದಲು ಎನ್‌ಪಿಎಸ್‌ ಜಾರಿಗೊಳಿಸಿ ನೌಕರರ ಮೂಲ ವೇತನದ ಶೇ.10ರಷ್ಟು ಕಡಿತಗೊಳಿಸುತ್ತಿದ್ದು, ಸರಕಾರ ಶೇ.10ರಷ್ಟು  ಹಣ ನೀಡುತ್ತದೆ. ಭವಿಷ್ಯನಿಧಿ ಯೋಜನೆಯಡಿ ಹೂಡಿಕೆ ಮಾಡಿ ಅದರಿಂದ ಪಿಂಚಣಿ ಪಾವತಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸರ್ಕಾರಿ ನೌಕರರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ.

ಎನ್‌ಪಿಎಸ್‌ ಅವೈಜ್ಞಾನಿಕವಾಗಿದ್ದು, ನೌಕರರ ನಿವೃತ್ತ ಜೀವನ ಹಲವು ಸಂಕಷ್ಟಗಳನ್ನು ಎದುರಿಸುವಂತಾಗಲಿದೆ ಎಂದು ಸರ್ಕಾರಿ ನೌಕರರು ಎನ್‌ಪಿಎಸ್‌ ವಿರುದ್ಧ ಧ್ವನಿ ಎತ್ತಿದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪಂಜಾಬ್‌, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ಧತಿಯನ್ನು ಪೂರ್ಣವಾಗಿ ಕೈಗೊಳ್ಳದಿದ್ದರೂ, ನೌಕರರ ಬೇಡಿಕೆಗೆ ಪೂರಕವಾಗಿ ಕೆಲವೊಂದು ಸುಧಾರಿತ ಕ್ರಮ ಕೈಗೊಂಡಿವೆ.

ಎಂಟು ರಾಜ್ಯಗಳಲ್ಲಿ ನಿವೃತ್ತಿ ಮತ್ತು ಮರಣ ಉಪಧನ ಬಿಲ್‌ನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿವೆ. ಕುಟುಂಬ ಪಿಂಚಣಿ ಬಿಲ್‌ ಜಾರಿಗೆ ಕ್ರಮ ಕೈಗೊಂಡಿವೆ. ಆಂಧ್ರಪ್ರದೇಶ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ಎನ್‌ಪಿಎಸ್‌ ಸರ್ಕಾರಿ ನೌಕರರ ಕುಟುಂಬಗಳಿಗೆ ಪೂರಕವಾಗುವ ಪಿಂಚಣಿ ಬಿಲ್‌ ಜಾರಿಗೆ ಅನುಮೋದನೆ ನೀಡಿದೆ. ರಾಜ್ಯದಲ್ಲೂ ಎನ್‌ಪಿಎಸ್‌ ಸರ್ಕಾರಿ ನೌಕರರ ಸಂಘದಿಂದ ಸಮಾವೇಶ, ಹೋರಾಟ ಕೈಗೊಳ್ಳಲಾಗಿದೆ.

ಸಿಎಂರಿಂದ ಸಿಗುತ್ತಾ  ಅಂಕಿತ?:
ರಾಜದಲ್ಲಿ 2006ರ ಏಪ್ರಿಲ್‌ನಿಂದ ಇದುವರೆಗೆ ಸುಮಾರು 1.90 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು ನೇಮಕಗೊಂಡಿದ್ದಾರೆ. ರಾಜ್ಯದಲ್ಲಿ ಸೇವೆಯಲ್ಲಿರುವ ಒಟ್ಟು ಸರ್ಕಾರಿ ನೌಕರರಲ್ಲಿ ಶೇ.50ರಷ್ಟು ಎನ್‌ಪಿಎ ನೌಕರರಾಗಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ 8 ರಾಜ್ಯಗಳು ನಿವೃತ್ತಿ ಮತ್ತು ಮರಣ ಉಪಧನ (ಡಿಸಿಆರ್‌ಜಿ)ಬಿಲ್‌ನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿವೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ  ಬಿಲ್‌ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ತೀವ್ರವಾಗಿದ್ದು, ಸಂಘದವರು ಈಗಾಗಲೇ ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಈ ಕುರಿತು ಮನವರಿಕೆ ಮಾಡಿದ್ದು, ಅವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಹೇಳಲಾಗುತ್ತಿದ್ದು, ಕಡತಕ್ಕೆ ಮುಖ್ಯಮಂತ್ರಿಯವರ ಅಂಕಿತವೊಂದೇ ಬಾಕಿ ಇದೆ ಎಂದು ಎನ್ನಲಾಗಿದೆ.

ಕುಟುಂಬ ಪಿಂಚಣಿಗೆ ಒತ್ತಾಯ:
ರಾಜ್ಯದಲ್ಲಿ ಸುಮಾರು 200-300 ಎನ್‌ಪಿಎ ಸರ್ಕಾರಿ ನೌಕರರು ಮೃತಪಟ್ಟಿದ್ದು, ಅವರ ಕುಟುಂಬಗಳಿಗೆ ಹಳೇ ಪಿಂಚಣಿ ಮಾದರಿಯಲ್ಲಿ ಪಿಂಚಣಿ ನೀಡಬೇಕೆಂಬ  ಒತ್ತಾಯ ಮಾಡಲಾಗಿದೆ. ಆಂಧ್ರಪ್ರದೇಶ ಸರಕಾರ  ಕೆಲ ದಿನಗಳ ಹಿಂದೆಯಷ್ಟೇ  ಎನ್‌ಪಿಎ ಸರ್ಕಾರಿ ನೌಕರರ ಕುಟುಂಬಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ  ಮೃತಪಟ್ಟ 200-300 ಎನ್‌ಪಿಎ ನೌಕರರ ಕುಟುಂಬದವರಿಗೆ ಹಳೇ ಮಾದರಿ ಪಿಂಚಣಿ ನೀಡುವ ಮೂಲಕ ಸಂಕಷ್ಟದಲ್ಲಿರುವ ಕುಟುಂಬದ ಸಹಾಯಕ್ಕೆ ಸರಕಾರ ಧಾವಿಸಬೇಕೆಂಬುದು ಸಂಘದ ಒತ್ತಾಯವಾಗಿದೆ.

ಸರ್ಕಾರಿ ನೌಕರರಿಗೆ ಪಿಂಚಣಿ ನೀಡುವುದು ಸರ್ಕಾರದ ಜವಾಬ್ದಾರಿ. 2006 ಏಪ್ರಿಲ್‌ ನಂತರದಲ್ಲಿ ನೇಮಕಗೊಂಡ ಸರ್ಕಾರಿ ನೌಕರರಿಗೆ ಎನ್‌ಪಿಎಸ್‌ ಜಾರಿ ಮಾಡಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಶೇ.10ರಷ್ಟು ವಂತಿಗೆಯನ್ನು ಸರ್ಕಾರ ಭರಿಸುತ್ತಿಲ್ಲ. ಆಡಳಿತ ಮಂಡಳಿಯೂ ನೀಡುತ್ತಿಲ್ಲ.
-ಬಸವರಾಜ ಹೊರಟ್ಟಿ, ವಿಧಾನಪರಿಷತ್‌ ಸದಸ್ಯ

ಜನವರಿ ಮೊದಲ ವಾರದಲ್ಲಿ  ಎನ್‌ಪಿಎಸ್‌ ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ  ಹೋರಾಟ ಕೈಗೊಳ್ಳಲು ನಿರ್ಧರಿಸಲಾಗಿದೆ. ಜನಪ್ರತಿನಿಧಿಗಳು, ಸಾಹಿತಿಗಳು, 8 ರಾಜ್ಯಗಳ ಎನ್‌ಪಿಎ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.
-ನಾಗನಗೌಡ ಎಂ.ಅಬಲೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌ಪಿಎ ಸರ್ಕಾರಿ ನೌಕರರ ಸಂಘ

*ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.