ಆರನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ
Team Udayavani, Nov 13, 2017, 10:49 AM IST
ಅಫಜಲಪುರ: ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರ ಸಂಘದವರು ಮತ್ತು ಕಬ್ಬು ಬೆಳೆಗಾರ ರೈತರು ರೇಣುಕಾ ಸಕ್ಕರೆ ಕಾರ್ಖಾನೆ ಎದುರು ಕುಳಿತಿರುವ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ.
ಧರಣಿ ಸ್ಥಳಕ್ಕೆ ಬಿಜೆಪಿ ಮುಖಂಡ, ಸಮಾಜ ಸೇವಕ ರಾಜೇಂದ್ರ ಪಾಟೀಲ ಭೇಟಿ ನೀಡಿ ಮಾತನಾಡಿ, ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ, ನೀರಿನ ಅಭಾವದ ಮಧ್ಯೆ ಸಾಲ ಮಾಡಿ ಕಬ್ಬು ಬೆಳೆದಿರುವ ರೈತರಿಗೆ ನ್ಯಾಯಯುತ ಬೆಲೆಯನ್ನು
ಕಾರ್ಖಾನೆಯವರು ನೀಡುತ್ತಿಲ್ಲ. ಇಷ್ಟು ವರ್ಷಗಳ ಕಾಲ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈಗಲೂ ಇದೇ ಪ್ರವೃತ್ತಿ ಮುಂದುವರಿಸಿದ್ದಾರೆ. ಹೀಗಾಗಿ ಪ್ರತಿಭಟನೆ, ಧರಣಿ ಅನಿವಾರ್ಯವಾಗಿದ್ದು, ರೈತರ ಧರಣಿಗೆ ನಾವು ಬೆಂಬಲಿಸುತ್ತೇವೆ. ಅಲ್ಲದೆ ರಾಜ್ಯದಲ್ಲಿ ಬೇರೆ ಕಾರ್ಖಾನೆಗಳಲ್ಲಿ ಸಿಗುತ್ತಿರುವ ಬೆಲೆ ಇಲ್ಲೂ ಸಿಗಬೇಕು ಎಂದು ಹೇಳಿದರು.
ಧರಣಿ ಕುಳಿತಿರುವ ರೈತರಿಗೆ ಧರಣಿ ಮುಗಿಯುವ ವರೆಗೂ ನಮ್ಮ ಆರ್.ವಿ ಫೌಂಡೇಶನ್ ವತಿಯಿಂದ ಊಟ ಮತ್ತು
ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ನಾವು ಸದಾ ರೈತರೊಂದಿಗೆ ಇರುತ್ತೇವೆ ಎಂದು ಹೇಳಿದರು.
ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ, ರೇಣುಕಾ ಸಕ್ಕರೆ ಕಾರ್ಖಾನೆಯವರು ನಮ್ಮ ತಾಲೂಕಿನ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಹೀಗಾಗಿ ನಮ್ಮ ರೈತರಿಗೆ ನ್ಯಾಯ ಸಿಗುವವರೆಗೆ ನಾವು
ಧರಣಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ಮುಖಂಡರಾದ ಶಿವು ಪ್ಯಾಟಿ, ದಯಾನಂದ ಪಾರಗೊಂಡ, ಸುರೇಶ ಸಿಂಗೆ, ಮಹಾಂತೇಶ ಉಜನಿ, ಗಜೇಂದ್ರ ಜೇರಟಗಿ, ಪ್ರಶಾಂತ ಹಿರೇಮಠ, ರಾಜು ನಿಂಬಾಳ, ಬಸವರಾಜ ಗುಣಾರಿ, ರೈತರಾದ ಮಲ್ಲು ಬಳೂರ್ಗಿ, ಪರೇಪ್ಪ ಬಳೂರ್ಗಿ, ಮಲ್ಲು ಸೋಲಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.