ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತಿ ಆತ್ಮಹತ್ಯೆ
Team Udayavani, Nov 13, 2017, 12:50 PM IST
ಬೆಂಗಳೂರು: ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಅನುಮಾನದಿಂದ ಬೇಸತ್ತ ವ್ಯಕ್ತಿಯೊಬ್ಬ ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್ಎಎಲ್ ಸಮೀಪದ ಜಗದೀಶ್ನಗರದಲ್ಲಿ ನಡೆದಿದೆ. ಪೇಂಟರ್ ಕೆಲಸ ಮಾಡುತ್ತಿದ್ದ ಆಂಥೋಣಿ (27) ಮೃತನು.
ನಾಲ್ಕು ವರ್ಷಗಳ ಹಿಂದೆ ಪ್ರಭಾ ಎಂಬಾಕೆಯನ್ನು ವಿವಾಹವಾಗಿದ್ದ ಆಂಥೋಣಿ, ಪತ್ನಿಯೊಂದಿಗೆ ಜಗದೀಶ್ನಗರದಲ್ಲಿ ವಾಸವಿದ್ದರು. ಇತ್ತೀಚಿಗೆ ನಡತೆ ಬಗ್ಗೆ ಸಂಶಯಪಟ್ಟು ಪತ್ನಿಯೊಂದಿಗೆ ಜಗಳ ಮಾಡಿದ್ದ. ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ಠಾಣೆಗೆ ದೂರು ನೀಡಿದ್ದರು. ನಂತರ ಹಿರಿಯರು ಮಧ್ಯೆ ಪ್ರವೇಶಿಸಿ ದಂಪತಿ ನಡುವೆ ಸಂಧಾನ ಮಾಡಿದ್ದರು.
ಆದರೂ ಕಳೆದ ವಾರ ಪತ್ನಿಯ ತವರು ಮನೆಗೆ ಹೋಗಿದ್ದ ಆಂಥೋಣಿ ಅಲ್ಲಿಯೂ ಜಗಳ ಮಾಡಿದ್ದ. ಅಲ್ಲಿಂದ ಶುಕ್ರವಾರ ನಗರಕ್ಕೆ ಬಂದಿದ್ದ. ಇದೇ ವೇಳೆ ಪಕ್ಕದ ಮನೆ ನಿವಾಸಿಯೊಂದಿಗೆ ಪತ್ನಿ ಸ್ನೇಹದಿಂದ ಇರುವುದನ್ನು ಕಂಡು ಮತ್ತೂಮ್ಮೆ ಜಗಳ ಮಾಡಿದ್ದ. ಬಳಿಕ ಶನಿವಾರ ರಾತ್ರಿ ಮನೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಡೆತ್ ನೋಟ್ನಲ್ಲೇನಿದೆ?: “ಪತ್ನಿಯ ಅಕ್ರಮ ಸಂಬಂಧದಿಂದ ನನಗೆ ಬದುಕಬೇಕೆಂಬ ಎಂಬ ಆಸೆ ಇಲ್ಲವಾಗಿದೆ. ನಾನು ಸಾವಿಗೆ ಶರಣಾಗುತ್ತಿದ್ದೇನೆ. ನನ್ನ ಸಾವಿನ ಬಳಿಕ ಪತ್ನಿ ಹಾಗೂ ಆಕೆ ಕುಟುಂಬದವರಿಗೆ ಶಿಕ್ಷೆಯಾಗಬೇಕು. ಆಗಲೇ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ’ ಎಂದು ಆಂಥೋಣಿ ಆತ್ಮಹತ್ಯೆಗೆ ಮೊದಲು ಬರೆದಿರುವ ಡೆತ್ನೋಟ್ನಲ್ಲಿ ಉಲ್ಲೇಖೀಸಿದ್ದಾರೆ. ಪ್ರಕರಣ ಎಚ್ಎಎಲ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.