‘ಪುಚ್ಚೆಮೊಗರು: 8 ಕೋ.ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ’
Team Udayavani, Nov 13, 2017, 3:35 PM IST
ಪುಂಜಾಲಕಟ್ಟೆ: ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಅಂತರ್ಜಲ ವೃದ್ಧಿಸುವ ನಿಟ್ಟಿನಲ್ಲಿ ಪಶ್ಚಿಮವಾಹಿನಿ ಯೋಜನೆಯಲ್ಲಿ ಇಲ್ಲಿನ ಪುಚ್ಚಮೊಗರು ಫಲ್ಗುಣಿ ಹೊಳೆಗೆ 8 ಕೋ. ರೂ. ವೆಚ್ಚದ ಹೊಸ ಕಿಂಡಿ ಅಣೆಕಟ್ಟೆ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಯಿ ಗ್ರಾಮದ ಹೋರಂಗಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೂಡುರಸ್ತೆಗೆ ಪಾಂಚಕೋಡಿಯಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ 2016-17ನೇ ಸಾಲಿನ ಅಪೆಂಡಿಕ್ಸ್ ಇ ನಲ್ಲಿ ಒಂದು ಬಾರಿ ಅಭಿವೃದ್ಧಿ ಯೋಜನೆಯಡಿ ಅನುದಾನದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ಅಣ್ಣಳಿಕೆ -ಇರ್ನಿ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಬಂಟ್ವಾಳ ತಾಲೂಕಿನ ಸಂಗಬೆಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು 36 ಕೋ.ರೂ. ವೆಚ್ಚದಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈಗಾಗಲೇ ಕಾರ್ಯಾರಂಭಗೊಳಿಸಿದೆ
ಎಂದವರು ಹೇಳಿದರು.
ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಜಿ.ಪಂ. ಸದಸ್ಯರಾದ ಬಿ. ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಅಕ್ರಮ- ಸಕ್ರಮ ಸಮಿತಿ ಸದಸ್ಯ ಕೆ. ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಸದಸ್ಯ ಪದ್ಮರಾಜ ಬಲ್ಲಾಳ್, ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ತಾ.ಪಂ. ಸದಸ್ಯೆ ಮಂಜುಳಾ ಸದಾನಂದ, ಸಂಗಬೆಟ್ಟು ಗ್ರಾ.ಪಂ. ಸದಸ್ಯ ದೇವಪ್ಪ ಕರ್ಕೇರ, ರಾಜೇಂದ್ರ ಜೈನ್, ಲೋಕೋಪಯೋಗಿ ಅಭಿಯಂತರ ಉಮೇಶ್ ಭಟ್, ಸಹಾಯಕ ಅಭಿಯಂತರರಾದ ಅರುಣ್ ಪ್ರಕಾಶ್, ಅಮೃತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.