ಲೆಬನಾನ್ ಪ್ರಧಾನಿ ನಿಗೂಢ ನಾಪತ್ತೆ, ರಾಜೀನಾಮೆ: ಶೀಘ್ರವೇ ಲೆಬನಾನ್ ಗೆ!
Team Udayavani, Nov 13, 2017, 4:14 PM IST
ಬೈರುತ್ : ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಲೆಬನಾನ್ ಪ್ರಧಾನಿ ಸಾದ್ ಹ್ಯಾರಿರಿ ತನ್ನ ಬಗ್ಗೆ ಹಬ್ಬರುವ ಊಹಾಪೋಹಗಳ ವರದಿಯನ್ನು ತಳ್ಳಿಹಾಕಿದ್ದಾರೆ. ಅಲ್ಲದೇ ತಾನು ಶೀಘ್ರವಾಗಿ ಲೆಬನಾನ್ ಗೆ ಮರಳುವುದಾಗಿ ತಿಳಿಸಿದ್ದಾರೆ.
ಕಳೆದ ವಾರ ವಿದೇಶ ಪ್ರವಾಸದ ಭಾಗವಾಗಿ ಮೊದಲು ರಾಜಕೀಯ ಆಶ್ರಯದಾತ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದರು. ಆದರೆ ಮರುದಿನವೇ ಅನಿರೀಕ್ಷಿತವಾಗಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಸೌದಿ ರಾಜಧಾನಿ ರಿಯಾದ್ನಲ್ಲಿ ವೀಡಿಯೋ ಸಂದೇಶವೊಂದರಲ್ಲಿ ಪ್ರಕಟಿಸಿದ್ದರು. ಇದೀಗ ರಾಜೀನಾಮೆ ನೀಡಿದ 8 ದಿನಗಳ ಬಳಿಕ ಸೌದಿ ಅರೇಬಿಯಾ ರಾಜಧಾನಿ ರಿಯಾದ್ ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಪ್ರತಿಕ್ರಿಯೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಭಾನುವಾರ ಫೂಚರ್ ಟಿವಿ ಜತೆ ಮಾತನಾಡಿದ ಅವರು, ಸೌದಿ ಅರೇಬಿಯಾದಲ್ಲಿ ನಾನು ಮುಕ್ತವಾಗಿದ್ದೇನೆ. ನನಗೆ ಪೂರ್ಣಪ್ರಮಾಣದ ಸ್ವಾತಂತ್ರ್ಯ ಇದೆ. ಆದರೆ ನನ್ನ ಕುಟುಂಬವನ್ನೂ ನೋಡಬೇಕೆಂಬ ಹಂಬಲವಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಲೆಬನಾನ್ ಗೆ ಮರಳುವ ಯೋಚನೆಯೂ ಇದೆ ಎಂದು ತಿಳಿಸಿದ್ದಾರೆ.ನಾನೇನು ತಿಂಗಳುಗಳ ಬಗ್ಗೆ ಮಾತನಾಡುತ್ತಿಲ್ಲ, ಕೆಲವು ದಿನಗಳಲ್ಲಿಯೇ ಲೆಬನಾನ್ ಗೆ ವಾಪಸ್ ಆಗುವುದಾಗಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಸೌದಿ ಅರೇಬಿಯಾದಲ್ಲಿ ಭಾರಿ ಭ್ರಷ್ಟಾಚಾರ ವಿರೋಧಿ ಸಮರದ ನೆಪದಲ್ಲಿ ರಾಜಮನೆತನದ ಹಲವು ರಾಜಕುಮಾರರನ್ನು ಬಂಧಿಸಿ ಜೈಲಿಗೆ ತಳ್ಳಲಾಗಿದೆ. ಲೆಬನಾನ್‌ನಲ್ಲಿ ನೆಲೆಸಿರುವ ಸೌದಿಯ ಶ್ರೀಮಂತ ಉದ್ಯಮಿಗಳು ಕೂಡಲೇ ಸೌದಿಗೆ ಹಿಂದಿರುಗಬೇಕೆಂದು ಸೌದಿ ದೊರೆ ಗುರುವಾರ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಕಾರ್ಮೋಡದ ಪರಿಸ್ಥಿತಿ ತಲೆದೋರಲಿದೆ ಎಂದು ವಿಶ್ಲೇಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.