ಅಯೋಧ್ಯೆಯಲ್ಲಿ ಸಂಧಾನ
Team Udayavani, Nov 14, 2017, 6:55 AM IST
ಹೊಸದಿಲ್ಲಿ: ರಾಮ ಮಂದಿರ ವಿವಾದದ ಬಗ್ಗೆ ಡಿ.5ರಿಂದ ಅಂತಿಮ ವಿಚಾರಣೆ ಆರಂಭಿಸುವುದಾಗಿ ಸುಪ್ರೀಂಕೋರ್ಟ್ ಹೇಳಿರುವಂತೆಯೇ ನ್ಯಾಯಾಲಯದ ಹೊರಗೆ ಪ್ರಕರಣ ಇತ್ಯರ್ಥ ಪ್ರಯತ್ನಗಳು ನಡೆದಿವೆ. ಅದಕ್ಕೆ ನೇತೃತ್ವ ವಹಿಸಿರುವುದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ. ಸ್ವಯಂಪ್ರೇರಿತನಾಗಿಯೇ ಈ ಬಗ್ಗೆ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದೇನೆ. ನ.16ರಂದು ಅಯೋಧ್ಯೆಗೆ ಭೇಟಿ ನೀಡುವುದಾಗಿ ಅವರು ಸೋಮವಾರ ತಿಳಿಸಿದ್ದಾರೆ. ರವಿಶಂಕರ್ ಅವರನ್ನು ಕೇಂದ್ರದ ಏಜೆಂಟ್ ಎಂದು ಕಾಂಗ್ರೆಸ್ ಟೀಕಿಸಿದ್ದಕ್ಕೆ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿ ವಿವಾದಕ್ಕೆ ಸಂಬಂಧಪಟ್ಟವರನ್ನೆಲ್ಲ ಭೇಟಿಯಾಗಿ ಅವರೆಲ್ಲರ ಅಭಿಪ್ರಾಯಗಳನ್ನು ಆಲಿಸುವುದಾಗಿ ಹೇಳಿದ್ದಾರೆ. ಜತೆಗೆ ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಅವರನ್ನೂ ಬೇಟಿಯಾಗುವುದಾಗಿಯೂ ತಿಳಿಸಿದ್ದಾರೆ.
ಒವೈಸಿ ಟೀಕೆ: ರವಿಶಂಕರ ಗುರೂಜಿ ಪ್ರಯತ್ನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಈ ವಿಚಾರ ದಲ್ಲಿ ಅವರಿಗೆ ಯಾವುದೇ ಅಧಿಕಾರವಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇಂಥ ಆಫರ್ ಅನ್ನು ತಿರಸ್ಕರಿಸಿದೆ. ರವಿಶಂಕರ್ ಈ ರೀತಿಯಾಗಿ ಗಾಳಿಪಟ ಹಾರಿಸುವ ವಿಚಾರ ಬಿಟ್ಟುಬಿಡಬೇಕು ಎಂದು ಹೇಳಿದ್ದಾರೆ.
ವಿರೋಧ: ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ಅಯೋಧ್ಯೆ ವಿವಾದದ ಬಗ್ಗೆ ಉ.ಪ್ರ. ಶಿಯಾ ವಕ್ಫ್ ಮಂಡಳಿ ಸಿದ್ಧಪಡಿಸಿರುವ ಒಪ್ಪಂದ ಸೂತ್ರಕ್ಕೆ ಅಖೀಲ ಭಾರತೀಯ ಅಖಾಡಾ ಪರಿಷತ್ ವಿರೋಧ ವ್ಯಕ್ತಪಡಿಸಿದೆ. ಅದನ್ನು ಮಂಡಳಿ ಡಿ.5ರ ಒಳಗಾಗಿ ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡುವ ಇರಾದೆ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.