ಕಳಸಾ ಬಂಡೂರಿ ಚರ್ಚೆಯಾಗಿದ್ದರೆ ಶಾಸಕರಿಗೆ ಛೀಮಾರಿ: ವಾಟಾಳ್
Team Udayavani, Nov 14, 2017, 6:55 AM IST
ಹುಬ್ಬಳ್ಳಿ: ಮಹದಾಯಿ ಹಾಗೂ ಕಳಸಾ ಬಂಡೂರಿ ಸೇರಿ ಈ ಭಾಗದ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸದಿದ್ದರೆ ನ.22ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಎಲ್ಲಾ ಶಾಸಕರಿಗೆ ಛೀಮಾರಿ ಹಾಕಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿ ಅಧಿವೇಶನ ಕೇವಲ ಕಾಟಾಚಾರಕ್ಕೆ ಸೀಮಿತವಾಗಿದೆ. ಶಾಸಕರು ಪಾಲ್ಗೊಳ್ಳದ ಕಾರಣ ಯಾವುದೇ ಗಂಭೀರ ವಿಚಾರಗಳು ಚರ್ಚೆಯಾಗುವುದಿಲ್ಲ. ಹೀಗಾಗಿ ಈ ಭಾಗದ ಸಮಸ್ಯೆ ಹಾಗೂ ಅಭಿವೃದ್ಧಿಗಾಗಿ ಇಲ್ಲಿ ಅಧಿವೇಶನ ಆಯೋಜಿಸಿದರೂ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಅಧಿವೇಶನದಲ್ಲಿ ಮಹದಾಯಿ ಸೇರಿ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸದಿದ್ದರೆ ವಿವಿಧ ಸಂಘಟನೆಗಳಿಂದ ಸದಸ್ಯರಿಗೆ ಸುವರ್ಣಸೌಧದ ಮುಂದೆ ಛೀಮಾರಿ ಹಾಕುವುದಾಗಿ ಹೇಳಿದರು.
ಮಹಾದಾಯಿ ವಿಚಾರದಲ್ಲಿ ಗೋವಾ ರಾಜಕಾರಣ ಮಾಡುತ್ತಿದೆ. ಕುಡಿವ ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಾ ವಿಳಂಬ ಧೋರಣೆ ಅನುಸರಿಸುತ್ತಿರುವುದು ಶೋಚನೀಯ. ಹೀಗಾಗಿ ಗೋವಾ ರಾಜಕಾರಣ ಖಂಡಿಸಿ ಡಿ. 9ರಂದು ಗೋವಾ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.