ಬೆಳಗಾವೀಲಿ ಸರಣಿ ಪ್ರತಿಭಟನೆಗಳ ಕಾವು


Team Udayavani, Nov 14, 2017, 6:35 AM IST

13BNP-(20).jpg

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನಕ್ಕೆ ಮೊದಲ ದಿನವೇ ಆರು ಪ್ರತಿಭಟನೆಗಳ ಕಾವು ತಟ್ಟಿತು. ಹತ್ತಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ಸಂಘಟನೆಗಳು ಸುವರ್ಣ ವಿಧಾನಸೌಧದ ಬಳಿಯ ಕೊಂಡಸಕೊಪ್ಪ ಮತ್ತು ಹಲಗಾ ಗ್ರಾಮದಲ್ಲಿ ನಿರ್ಮಿಸಿರುವ ವೇದಿಕೆಗಳಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಕೊಂಡಸಕೊಪ್ಪ ಗ್ರಾಮದ ಬಳಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಇದಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಕಾರ್ಖಾನೆಯಿಂದ ಮೂರು ವರ್ಷಗಳಿಂದ ಕಬ್ಬಿನ ಬಾಕಿ ಹಣ ಪಾವತಿ ಮಾಡಿಲ್ಲ. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌, ರೈತರ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಬದಲಾಗಿ ಪೊಲೀಸರ ಮೂಲಕ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಈ ಸರಕಾರದಲ್ಲಿ ಗಂಟುಕಳ್ಳರೇ ಹೆಚ್ಚಾಗಿದ್ದಾರೆ ಎಂದು ಟೀಕಿಸಿದರು.

ವೈದ್ಯರ ಪ್ರತಿಭಟನೆ: ಹಲಗಾ ಗ್ರಾಮದ ಬಳಿ ನಿರ್ಮಿಸಲಾಗಿದ್ದ ವೇದಿಕೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಸದಸ್ಯರು ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಿದರು.

ಅಧಿವೇಶನದಲ್ಲಿ ಮಸೂದೆ ಮಂಡಿಸಿ ಚರ್ಚೆ ಮಾಡಿದರೆ ನಮ್ಮ ವಿರೋಧ ಇಲ್ಲ. ಆದರೆ ಮಸೂದೆಯನ್ನು ಪಾಸ್‌ ಮಾಡಿದ್ದೇ ಆದರೆ ಅಂದಿನಿಂದ ರಾಜ್ಯಾದ್ಯಂತ ಖಾಸಗಿ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸಲಾಗುವುದು. ನಮ್ಮ ಬೇಡಿಕೆ ಈಡೇರುವವರೆಗೆ ಈ ಅಧಿವೇಶನದ ಸಮಯದಲ್ಲಿ ನ.14 ರಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ರವೀಂದ್ರನ್‌ ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜಗದೀಶ ಶೆಟ್ಟರ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ, ಸರ್ಕಾರದ ಧೋರಣೆ ಹಾಗೂ ಆರೋಗ್ಯ ಸಚಿವರ ಕ್ರಮವನ್ನು ಕಟುವಾಗಿ ಟೀಕಿಸಿದರು. ತಮಟೆ ಚಳವಳಿ ಇನ್ನೊಂದೆಡೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ರೈಲ್ವೆ ನಿಲ್ದಾಣದ ಬಳಿ ತಮಟೆ ಚಳವಳಿ ನಡೆಸಿದರು.

ಪೂರ್ವ ನಿಗದಿಯಂತೆ ರೈಲ್ವೆ ನಿಲ್ದಾಣದಿಂದ ಸುವರ್ಣ ವಿಧಾನಸೌಧದವರೆಗೆ ಕಾರ್ಯಕರ್ತರು ತಮಟೆ ಮತ್ತು ಕಹಳೆ ಚಳವಳಿ ನಡೆಸಲು ನಿರ್ಧರಿಸಿದ್ದರು. ಆದರೆ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಹೋರಾಟ ಸಮಿತಿ ಸದಸ್ಯರು ರೈಲ್ವೆ ನಿಲ್ದಾಣದ ಬಳಿಯೇ ಕುಳಿತು ಧರಣಿ ನಡೆಸಿದರು. ಇದನ್ನು ಹೊರತುಪಡಿಸಿ ಸುವರ್ಣ ವಿಧಾನಸೌಧದ ಬಳಿ ಸರ್ಕಾರಿ ಪ್ರಾಥಮಿಕ ಶಾಲಾ ಆಯಾಗಳು, ಮಾದಿಗ ಯುವ ಸೇನೆ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.