ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ಬಲಿ
Team Udayavani, Nov 14, 2017, 7:40 AM IST
ಶಿವಮೊಗ್ಗ: ಜಿಲ್ಲಾಡಳಿತದ ನಿಷೇಧದ ನಡುವೆಯೂ ಯಾವುದೇ ಅನುಮತಿ ಪಡೆಯದೆ ತಾಲೂಕಿನ ಆಯನೂರು ಕೋಟೆಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ.
ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದ ನಿವಾಸಿ ಚಂದ್ರಶೇಖರ (38) ಮೃತವ್ಯಕ್ತಿ. ಸ್ಪರ್ಧೆಯಲ್ಲಿ ಹೋರಿ ಹಿಡಿಯಲು ಮುಂದಾದ ಚಂದ್ರುವಿನ ಹೊಟ್ಟೆಯ ಕೆಳಭಾಗಕ್ಕೆ ಹೋರಿ ಬಲವಾಗಿ ತಿವಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತಕ್ಷಣವೇ ಗ್ರಾಮಸ್ಥರು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾನೆ. ಘಟನೆಯ ನಂತರ ಹೋರಿ ಬೆದರಿಸುವ ಸ್ಪರ್ಧೆಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಮತಿ ಇರಲಿಲ್ಲ: ಆಯನೂರು ಕೋಟೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲವೆಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಸ್ಪಷ್ಟವಾಗಿ ತಿಳಿಸಿದ್ದರು.
ಇದರ ಹೊರತಾಗಿಯೂ ಕೆಲವರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದರು. ನೂರಾರು ಜನ ಸ್ಪರ್ಧೆವೇಳೆ ಜಮಾಯಿಸಿದ್ದರು. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಬಾರಿ ಎರಡು ಸಾವು
ಕಳೆದ ವರ್ಷ ಸೊರಬ ತಾಲೂಕು ಆನವಟ್ಟಿಯಲ್ಲಿ ಆ ಯೋಜಿಸಿದ್ದ ಸ್ಪರ್ಧೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೇ
ಆಯನೂರು ಗ್ರಾಮದಲ್ಲಿ ಮೂವರು ಗಂಭೀರವಾಗಿ ಗಾಯ ಗೊಂಡಿ ದ್ದರು. ಆಗ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಈ ಕಾರಣದಿಂದ ಹೋರಿ ಬೆದರಿಸುವ ಸ್ಪರ್ಧೆಗಳ ಮೇಲೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.