ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ
Team Udayavani, Nov 14, 2017, 11:29 AM IST
ನವದೆಹಲಿ: ಇಂಡಿಗೋ ವಿಮಾನದಲ್ಲಿ ಬ್ಯಾಗ್ ಒಂದರ ಒಳಗಿದ್ದ ಲ್ಯಾಪ್ಟಾಪ್ ಹೊಗೆಯಾಡುವ ಮೂಲಕ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದ ಘಟನೆ ನ.11ರ ಶನಿವಾರ ನಡೆದಿದೆ. 6ಇ-445 (ವಿಟಿ-ಐಜಿವಿ) ವಿಮಾನ ತಿರುವನಂತಪುರದಿಂದ ಬೆಂಗಳೂರಿನತ್ತ ಹಾರಿದ ಸ್ವಲ್ಪ ಹೊತ್ತಿನಲ್ಲೇ ವಿಮಾನದಲ್ಲಿ ಸುಟ್ಟ ವಾಸನೆ ಹರಡಿದ್ದು, ಪ್ರಯಾಣಿಕರು ವಿಮಾನ ಸಿಬ್ಬಂದಿಗೆ ತಿಳಿಸಿದ್ದಾರೆ.
ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಸೀಟ್ ಸಂಖ್ಯೆ 24ಆರ್ಎಚ್ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ನಿಂದ ಸಣ್ಣ ಕಿಡಿಯೊಂದಿಗೆ ಹೊಗೆ ಬರುತ್ತಿರುವುದು ಕಂಡುಬಂದಿದೆ. ಕೂಡಲೆ ಅಕ್ಕ ಪಕ್ಕದ ಪ್ರಯಾಣಿಕರನ್ನು ಸ್ಥಳಾಂತರಿಸಿದ ಸಿಬ್ಬಂದಿ, ಬ್ಯಾಗ್ ತೆಗೆದು ನೋಡಿದಾಗ ಲ್ಯಾಪ್ಟಾಪ್ನಿಂದ ಹೊಗೆ ಬರುತ್ತಿರುವುದು ಖಚಿತವಾಗಿದೆ.
ಆರಂಭದಲ್ಲಿ ಅಗ್ನಿ ನಂದಕ ಬಳಸಿ ಕಿಡಿ ಆರಿಸಿದ ಸಿಬ್ಬಂದಿ, ನಂತರ ಲ್ಯಾಪ್ಟಾಪ್ ಅನ್ನು ನೀರಿನಲ್ಲಿ ಮುಳುಗಿಸಿಟ್ಟಿದ್ದರು. ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಬಂದಿಳಿದ ನಂತರ ಸಾಧನವನ್ನು ಪರೀಕ್ಷೆಗೆ ಕಳಿಸಿಕೊಡಲಾಗಿದೆ. ತಿಂಗಳ ಹಿಂದಷ್ಟೇ ದೆಹಲಿ-ಇಂಧೋರ್ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಹೊತ್ತಿ ಉರಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.