ಕನ್ನಡ ಫಲಕ ಹಾಕಿ ಎಂದಿದ್ದಕ್ಕೆ ಹಲ್ಲೆಗೆ ಮುಂದಾದ ಮಹಿಳೆ
Team Udayavani, Nov 15, 2017, 11:33 AM IST
ಬೆಂಗಳೂರು: ಬೇಕರಿಯ ನಾಮಫಲಕ ಕನ್ನಡದಲ್ಲಿ ಹಾಕದಿರುವುದನ್ನು ಪ್ರಶ್ನಿಸಿದ ಕನ್ನಡ ಪರ ಸಂಘಟನೆ ಸದಸ್ಯರ ಮೇಲೆ ಅಂಗಡಿಯ ಯಜಮಾನಿ ಹಲ್ಲೆಗೆ ಮುಂದಾದ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಳಿಮಾವುನಲ್ಲಿರುವ ಜಸ್ಟ್ ಬೇಕ್ ಬೇಕರಿಯ ನಾಮಫಲಕದಲ್ಲಿ ಕನ್ನಡ ಅಕ್ಷರಗಳು ಇರಲಿಲ್ಲ.
ಇದನ್ನು ಪ್ರಶ್ನಿಸಲು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸಂಘಟನೆ ಹತ್ತಾರು ಮಂದಿ ಕಾರ್ಯಕರ್ತರು ಬೇಕರಿಗೆ ಹೋಗಿದ್ದು, ನಾಮಫಲಕವನ್ನು ಕನ್ನಡದಲ್ಲಿ ಪ್ರಕಟಿಸದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೂಡಲೇ ಕನ್ನಡ ನಾಮಫಲಕ ಹಾಕಬೇಕೆಂದು ಆಗ್ರಹಿಸಿದ್ದಾರೆ. ಬೇಕರಿಯ ಯಜಮಾನಿ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಕೋಪಗೊಂಡ ಯಜಮಾನಿ ಕನ್ನಡ ಪರ ಸಂಘಟನೆ ಕಾರ್ಯಕರ್ತರೊಬ್ಬರ ಮೊಬೈಲ್ ಕಸಿದುಕೊಂಡು ನೆಲಕ್ಕೆ ಹೊಡೆದು ಪುಡಿ ಪುಡಿ ಮಾಡಿದ್ದಾರೆ. ಅಲ್ಲದೇ ಹಲ್ಲೆಗೆ ಮುಂದಾಗಿದ್ದಾರೆ. ಆದರೂ ಬೇಕರಿಯ ಯಜಮಾನಿ ಕನ್ನಡದಲ್ಲಿ ನಾಮಫಲಕ ಹಾಕುವುದಿಲ್ಲ ಎಂದು ಉದ^ಟತನ ತೋರಿದ್ದಾರೆ. ನಂತರ ಬೇಕರಿಯ ಯಜಮಾನಿಯ ವರ್ತನೆ ವಿರುದ್ಧ ಸಂಘಟನೆ ಕಾರ್ಯಕರ್ತರು ಹುಳಿಮಾವು ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಇಬ್ಬರನ್ನು ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.