ಅಪಹರಣ ಯತ್ನದಲ್ಲಿ ಸಂತೋಷ್ ಭಾಗಿ ದಾಖಲೆ ನೀಡಲು ಹೈಕೋರ್ಟ್ ಸೂಚನೆ
Team Udayavani, Nov 15, 2017, 11:33 AM IST
ಬೆಂಗಳೂರು: ವಿನಯ್ ಅಪಹರಣ ಯತ್ನ ಹಾಗೂ ಹಲ್ಲೆ ಪ್ರಕರಣದಲ್ಲಿ ಎನ್.ಆರ್ ಸಂತೋಷ್ ಭಾಗಿಯಾಗಿದ್ದಾರೆ ಎಂಬುದಕ್ಕೆ ಪೂರಕದಾಖಲೆಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಎಫ್ಐಆರ್ ರದ್ದುಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ಪ್ರಕರಣದ ಆರೋಪಿಯೊಬ್ಬರು ನೀಡಿದ ಹೇಳಿಕೆ ಆಧರಿಸಿ ಅರ್ಜಿದಾರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ , ಆರೋಪಿ ಹೇಳಿಕೆ ಹೊರತುಪಡಿಸಿ ಅರ್ಜಿದಾರರು ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವ ಸಾಕ್ಷ್ಯಗಳನ್ನು ಕಲೆಹಾಕಲಾಗಿದೆ. ಅರ್ಜಿದಾರರೇ ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕಿರುವ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿ ನ. 17ಕ್ಕೆ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಪ್ರಾಸಿಕ್ಯೂಶನ್ ಪರ ವಕೀಲರು ವಾದಿಸಿ, ವಿನಯ್ ಅಪಹರಣ ಯತ್ನ ಹಾಗೂ ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪ್ರಶಾಂತ್, ವಿನಯ್ರನ್ನು ಅಪಹರಿಸಿ ಹಲ್ಲೆ ಮಾಡಿ ಆತನ ಬಳಿಯಿರುವ ಲ್ಯಾಪ್ಟಾಪ್ ಸೇರಿದಂತೆ ಮತ್ತಿತರ ವಸ್ತುಗಳನ್ನು ತರಲು ಸಂತೋಷ್ ಹೇಳಿದ್ದರು.
ಹಲವು ದಿನಗಳಿಂದ ಸಂತೋಷ್ ಪರಿಚಯವಿದ್ದು ನೊಣವಿನಕೆರೆಯ ಮನೆಯಲ್ಲಿ ಭೇಟಿಯಾಗಿದ್ದೆವು. ಈ ಪ್ರಕರಣದಲ್ಲಿ ಪ್ರಮುಖ ಸೂತ್ರಧಾರ ಸಂತೋಷ್ ಎಂಬ ಹೇಳಿಕೆ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆಗೆ ಸಂತೋಷ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.