ಕೊಟ್ಟ ಮಾತು ತಪ್ಪಿದರೆ ಮೆಚ್ಚನಾಕೂಡಲ ಸಂಗಮದೇವ?
Team Udayavani, Nov 16, 2017, 7:46 AM IST
ವಿಧಾನಸಭೆ: “ಉತ್ತರ ಕರ್ನಾಟಕ ವಿಷಯದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತನ್ನು ತಪ್ಪಿ ನಡೆದರೆ ಕೂಡಲ ಸಂಗಮದೇವ ಮೆಚ್ಚುವುದಿಲ್ಲ ಎಂದು ಹೇಳಿದ ಕಾಂಗ್ರೆಸ್ ಉಚ್ಛಾಟಿತ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, “ಉತ್ತರ ಕರ್ನಾಟಕಕ್ಕೆ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಅನ್ಯಾಯ ಮಾಡಿದೆ’ ಎಂದು ಆರೋಪಿಸಿದ್ದಾರೆ.
ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಬುಧವಾರ ಚರ್ಚೆ ಆರಂಭಿಸಿದ ಅವರು, “ನಂಜುಂಡಪ್ಪ ವರದಿ ಅನ್ವಯ 2010ರೊಳಗೆ ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ನೀಡಬೇಕು. ಅದರಲ್ಲಿ 16 ಸಾವಿರ ಕೋಟಿ ರೂ. ಒಂದೇ ಕಂತಿನಲ್ಲಿ ನೀಡಿ ಉಳಿದ 15 ಸಾವಿರ ಕೋಟಿಯನ್ನು ಬಜೆಟ್‌ನಲ್ಲಿ ನೀಡುವಂತೆ ವರದಿಯಲ್ಲಿ ಸೂಚಿಸಲಾಗಿದೆ. ಈ ವರದಿ 2002ರಲ್ಲಿ ಸರ್ಕಾರಕ್ಕೆ ಮಂಡನೆಯಾದರೂ, 2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಆಧಿಕಾರಕ್ಕೆ ಬರುವವರೆಗೂ ಅನುಷ್ಠಾನವಾಗಿರಲಿಲ್ಲ. ಆ ನಂತರ ಬಂದ ಸರ್ಕಾರಗಳು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಲೇ ಬಂದಿದ್ದು, ಇದುವರೆಗೆ ಕೇವಲ 14,639 ಕೋಟಿ ರೂ. ಖರ್ಚು ಮಾಡಿವೆ’ ಎಂದು ದೂರಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿದ್ದಕ್ಕೆ ಸರ್ಕಾರ ನನ್ನನ್ನು ನಾಡದ್ರೋಹಿ ಎಂದು ಬಿಂಬಿಸಿದೆ. ಅಪರಾಧಿ ಎಂದು ಬಿಂಬಿಸುವ ಪ್ರಯತ್ನ ನಡೆಸಿದೆ. ಆದರೆ ನಾನು ನಾಡದ್ರೋಹಿಯಲ್ಲ, ಉತ್ತರ ಕರ್ನಾಟಕ ಜನರ ಧ್ವನಿಯಾಗಿ ಮಾತನಾಡುತ್ತಿದ್ದೇನೆ ಎಂದರು.
ನಡಹಳ್ಳಿ ಆರೋಪಕ್ಕೆ ಪ್ರಾಥಮಿಕ ಶಿಕ್ಷಣ ಸಚಿವ ತನ್ವಿರ್ ಸೇಠ್ ಆಕ್ಷೇಪ ವ್ಯಕ್ತಪಡಿಸಿ, ಹಿಂದಿನ ಅಂಕಿ ಅಂಶಗಳನ್ನು ಇಟ್ಟುಕೊಂಡು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಬೇಡಿ. ವಾಸ್ತವ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ನಡಹಳ್ಳಿ, ಸರ್ಕಾರ ನೀಡಿರುವ ದಾಖಲೆಗಳ ಪ್ರಕಾರವೇ ವಾಸ್ತವ ಅಂಕಿ ಅಂಶಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದರು.
ಉ.ಕ. ಸಮಸ್ಯೆ ಚರ್ಚೆಗೆಮೇಲ್ಮನೆಯಲ್ಲೂ ಅವಕಾಶ ವಿಧಾನಪರಿಷತ್ತು: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಮೇಲ್ಮನೆಯಲ್ಲಿ ಅವಕಾಶ ನೀಡಲು ಬುಧವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಬಿಜೆಪಿಯ ಕೆ.ಬಿ.ಶಾಣಪ್ಪ ಹಾಗೂ ಇತರ ಸದಸ್ಯರು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನ, ಹೈದರಾಬಾದ್-ಕರ್ನಾಟಕ ವಿಶೇಷ ಸ್ಥಾನಮಾನದ ಪ್ರಗತಿ, ನಂಜುಂಡಪ್ಪ ವರದಿ ಜಾರಿ ಸೇರಿದಂತೆ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ಕೋರಿ ಗುರುವಾರ ನೋಟಿಸ್ ನೀಡಲಿದ್ದಾರೆ. ಬಳಿಕ ಸಭಾಪತಿ ಚರ್ಚೆಗೆ ಸಮಯ ನಿಗದಿಪಡಿಸಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.