ನಿರುಪಯುಕ್ತ ಕಾಯ್ದೆಗಳ ರದ್ದತಿಗೆ ವಿಧಾನಸಭೆ ಅಸ್ತು
Team Udayavani, Nov 16, 2017, 8:12 AM IST
ವಿಧಾನಸಭೆ: ರಾಜ್ಯ ಸರ್ಕಾರದ ವ್ಯಾಪ್ತಿಗೊಳಪಡುವ 134 ಅನುಪಯುಕ್ತ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ಮಂಡಿಸಿದ
ವಿಧೇಯಕಕ್ಕೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿತು. ಕರ್ನಾಟಕ ಧನ ವಿನಿಯೋಗ ಕಾಯ್ದೆ- 2012, ಪಂಚಾಯತ್
ರಾಜ್ ತಿದ್ದುಪಡಿ ವಿಧೇಯಕ, ಕರ್ನಾಟಕ ವಿಶ್ವ ವಿದ್ಯಾಲಯಗಳ ವಿಧೇಯಕ, ಶಿಕ್ಷಕರ ವರ್ಗಾವಣೆ ವಿಧೇಯಕ, ವಿಧಾನ ಮಂಡಲದ ಸಂಬಳದ ಶಾಸನ ಸೇರಿದಂತೆ 134 ಕಾನೂನುಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಲು ನಿರ್ಧರಿಸಿದ್ದು, ಅದಕ್ಕಾಗಿ ವಿಧೇಯಕ ಮಂಡಿಸಲಾಗಿದೆ ಎಂದು ವಿಧೇಯಕ ಮಂಡಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ಯಾವ ಕಾರಣಕ್ಕಾಗಿ ಈ ಕಾನೂನುಗಳನ್ನು ಜಾರಿಗೊಳಿಸಿತ್ತು ಮತ್ತು ಈ ಸಂದರ್ಭದಲ್ಲಿ ಕಾನೂನುಗಳನ್ನು ರದ್ದುಪಡಿ ಸುವ ಉದ್ದೇಶವೇನು ಎಂದು ಪ್ರಶ್ನಿಸಿದರಲ್ಲದೆ, ಅದಕ್ಕೆ ಸೂಕ್ತಕಾರಣ ನೀಡುವಂತೆ ಆಗ್ರಹಿಸಿದರು.
ಕೆಲವು ಕಾನೂನುಗಳಿಗೆ ಪರ್ಯಾಯವಾಗಿ ಕಾನೂನುಗಳನ್ನುತರಲಾಗಿದೆ. ಜೊತೆಗೆ ಅನೇಕ ಕಾನೂನುಗಳು ಇದ್ದರೂ ನಿರುಪ
ಯುಕ್ತವಾಗಿವೆ. ಕೆಲವು ಕಾನೂನುಗಳನ್ನು ಬಳಕೆ ಮಾಡಿ ದರೂ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗದು.
ಹಾಗಾಗಿ ಹಳೆಯ ಕಾನೂನುಗಳನ್ನು ರದ್ದುಪಡಿಸುತ್ತಿರುವುದಾಗಿ ಸಚಿವ ಜಯಚಂದ್ರ ವಿವರಣೆ ನೀಡಿದರು. ಬಳಿಕ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ ಈ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಗರಾಭಿವೃದ್ಧಿ ಪ್ರಾಧಿಕಾರಗಳ ತಿದ್ದುಪಡಿ ವಿಧೇಯಕ 2017ಕ್ಕೆ ವಿಧಾನಸಭೆಯಲ್ಲಿ ಆಂಗೀಕಾರ ನೀಡಲಾಯಿತು. ಕೇಂದ್ರದ 2013ರ ಭೂಸ್ವಾಧೀನ ಕಾಯ್ದೆ ಆನ್ವಯ ಭೂ ಸ್ವಾಧೀನ, ಪುನರ್ವಸತಿ ಒದಗಿಸಲು ಮತ್ತು ಸ್ವಾಧೀನಪಡಿಸಿಕೊಂಡ ಭೂಮಿಗೆ ನ್ಯಾಯ ಸಮ್ಮತವಾದ ಬೆಲೆ ನೀಡಲು
ನೂತನ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.