ಸುವರ್ಣ ಸೌಧದೆದುರು ಸರಣಿ ಪ್ರತಿಭಟನೆ
Team Udayavani, Nov 16, 2017, 8:23 AM IST
ಬೆಳಗಾವಿ: ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರವೂ ಸುವರ್ಣಸೌಧದ ಹೊರಗಡೆ ಪ್ರತಿಭಟನೆಗಳು ನಡೆದವು. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಒಟ್ಟು ಏಳು ಸಂಘಟನೆಗಳು ಪ್ರತಿಭಟನೆ ನಡೆಸಿ, ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ಪ್ರತಿನಿಧಿಗಳು ಬುಧವಾರವೂ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಕಾರ್ಯಕರ್ತರು ಮಧ್ಯಾಹ್ನ 1.30 ರ ಸುಮಾರಿಗೆ ಸಾವಿರಾರು ಕುರಿಗಳೊಂದಿಗೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನಾಕಾರರ ಒಂದು ಗುಂಪು ಒಮ್ಮೆಲೇ ಸಾವಿರಕ್ಕೂ ಅಧಿಕ ಕುರಿಗಳನ್ನು
ಸುವರ್ಣ ವಿಧಾನ ಸೌಧದ ಎದುರಿಗೆ ಬಿಟ್ಟರೆ, ಇನ್ನೊಂದು ಗುಂಪು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಮುಂದಾಯಿತು.
ಸುವರ್ಣ ವಿಧಾನಸೌಧದ ಮುಂದೆ ಅನಿರೀಕ್ಷಿತ ವೆಂಬಂತೆ ಬಂದ ಸಾವಿರಕ್ಕೂ ಅಧಿಕ ಕುರಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟ
ಪೊಲೀಸರು ಪ್ರತಿಭಟನಾಕಾರರನ್ನು ಚೆದುರಿಸಲು ಬೆತ್ತದ ರುಚಿ ತೋರಿಸಿದರು. ಕೆಲವರನ್ನು ತಮ್ಮ ವಶಕ್ಕೆ ತೆಗೆದು ಕೊಂಡು ನಂತರ ಬಿಡುಗಡೆ ಮಾಡಿದರು. ಈ ಮಧ್ಯೆ, ಕಡುಬಡವರಿಗೆ ಆಶ್ರಯ ಮನೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ
ರಾಜ್ಯ ಬಡವರ ಹಿತರಕಣಾ ವೇದಿಕೆ ಕಾರ್ಯ ಕರ್ತರು ಸುವರ್ಣ ವಿಧಾನಸೌಧ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರ್ಥಿಕವಾಗಿ ಹಿಂದುಳಿದವರು ಮನೆ ಇಲ್ಲದೇ ಬದುಕುತ್ತಿದ್ದಾರೆ. ನಿವೇಶನಗಳನ್ನು ತೆಗೆದುಕೊಳ್ಳುವಷ್ಟು ಹಣ ಇಲ್ಲ. ಆದ್ದರಿಂದ ಈಗಾ ಗಲೇ ಗ್ರೂಪ್ ಹೌಸಿಂಗ್ (ಅಪಾರ್ಟ್ ಮೆಂಟ್) ಸೌಕರ್ಯವನ್ನು ಬೆಂಗಳೂರು ನಗರದಲ್ಲಿ ಆರಂಭಿ
ಸಲಾಗಿದ್ದು ಧಾರವಾಡ ಜಿಲ್ಲೆಯಲ್ಲೂ ಈ ಸೌಕರ್ಯ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಬಳಿಕ, ರೈತರಿಗೆ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಪ್ರದೇಶ ರೈತ ಹಾಗೂ ರೈತ ಕಾರ್ಮಿಕ ಸಂಘದ ಸದಸ್ಯರು ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಮುಂದಾದರು. ಪೊಲೀಸರು ಅವರನ್ನು ವಶಕ್ಕೆ ತೆಗದುಕೊಂಡು ನಂತರ ಬಿಡುಗಡೆ ಮಾಡಿದರು. ಇದೇ ವೇಳೆ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ
ಒತ್ತಾಯಿಸಿ ಭಾರತೀಯ ಕೃಷಿಕ ಸಮಾಜದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.