ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಸಭೆ
Team Udayavani, Nov 16, 2017, 11:29 AM IST
ಮಹಾನಗರ:ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಧರಣೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಭವನದಲ್ಲಿ ಜರಗಿತು.
ರಾಜ್ಯ ಸರಕಾರ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯೊಂದಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಬದುಕುವ ಕಟ್ಟ ಕಡೆಯ ವ್ಯಕ್ತಿಗೂ ನೆರವನ್ನು ಕೊಡುತ್ತಿದೆ. ಅನ್ನ ಭಾಗ್ಯ ಮಕ್ಕಳಿಗೆ ಕ್ಷೀರಭಾಗ್ಯ, ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರ ಕೊಡುವಂತಹ ಯೋಜನೆ. ಇದು ಬಲಿಷ್ಠ ಸಮಾಜ ಸುರಕ್ಷಿತ ಸಮಾಜವನ್ನು ನಿರ್ಮಿಸಿ ಬಲಿಷ್ಠ ಗ್ರಾಮ ರಾಷ್ಟ್ರದ ನಿರ್ಮಾಣ ಮಾಡುತ್ತಿದೆ ಎಂದು ಅವರು ಹೇಳಿದರು.
ಅಲ್ಲದೆ ಸರಕಾರದ ಎಲ್ಲ ಇಲಾಖೆಗಳ ಸಚಿವರು ಅವರವರ ಖಾತೆಗಳಲ್ಲಿ ಕರ್ನಾಟಕ ಸಮಗ್ರ ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ. ಹಲವು ಮಹತ್ವದ ಕಾರ್ಯ ಕ್ರಮಗಳಿಂದ ಹಿಂದುಳಿದ, ದಲಿತ, ಅಲ್ಪ ಸಂಖ್ಯಾಕರ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ಜನರನ್ನು ಸಂಕಷ್ಟದಿಂದ ದೂರ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಮಾತು ತಪ್ಪಿದ ಕೇಂದ್ರ ಸರಕಾರ
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿ, ಕೇಂದ್ರ ಸರಕಾರವು ಅಚ್ಛೇ ದಿನ್ ಆಯೇಗಾ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಪೂರೈಸಿದರೂ ಯಾವುದೇ ಬೃಹತ್ ಯೋಜನೆಗಳು ಜಾರಿಗೆ ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿಗಳು ಗುಂಡಿ ಬಿದ್ದು ಹೊಂಡಮಯವಾಗಿವೆ. ಗ್ರಾಮೀಣ ರಸ್ತೆಗಳಿಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಮಂಜೂರಾಗುತ್ತಿಲ್ಲ. ಕಪ್ಪು ಹಣವನ್ನು ತಂದು ಜನರು ಎಷ್ಟೋ ವರ್ಷ ತೆರಿಗೆಯೇ ಕಟ್ಟಬೇಕಾಗಿಲ್ಲ ಎಂದು ಹೇಳಿ ಈಗ ಜಿ.ಎಸ್.ಟಿ. ಅಂತ ಹೇಳಿ ಬಡವರ ರಕ್ತವನ್ನು ಹೀರಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದಕ್ಕೆಲ್ಲ ನಮ್ಮ ಯುವ ಜನಾಂಗ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಇತರ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಗಳಾದ ಸದಾಶಿವ ಉಳ್ಳಾಲ್ ಹಾಗೂ ಡಿ.ಸಿ.ಸಿ., ಒ.ಬಿ.ಸಿ. ವಿಭಾಗದ ಉಪಾಧ್ಯಕ್ಷ ಸುಂದರ ಸಿ. ಪೂಜಾರಿ, ಶೋಭಾ ಕೇಶವ್, ಪ್ರವೀಣ ಕಡೆಂಜಿ, ಮನುರಾಜ್, ವಿಶ್ವನಾಥ ಕೋಟ್ಯಾನ್ ಅಳಿಯೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.