ಆನ್‌ಲೈನ್ ವ್ಯವಸ್ಥೆ ಕಲ್ಪಿಸಲು ಮನವಿ
Team Udayavani, Nov 16, 2017, 12:03 PM IST
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಹಾಗೂ ಮತದಾನ ಪ್ರಕ್ರಿಯೆಗೆ ಆನ್‌ಲೈನ್ ವ್ಯವಸ್ಥೆ ಅಳವಡಿಸಬೇಕು ಎಂದು “ಈಗಲ್ ಐ’ (ಹದ್ದಿನ ಕಣ್ಣು) ಸಂಸ್ಥೆ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರನ್ನು ಒತ್ತಾಯಿಸಿದೆ.
ಗುಜರಾತಿನಲ್ಲಿ ಈಗಾಗಲೇ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ನಲ್ಲಿ ನಡೆಯುತ್ತಿದೆ. ಮಾಹಿತಿ ತಂತ್ರಜ್ಞಾನದ ಕೇಂದ್ರಬಿಂದು ಆಗಿರುವ ಕರ್ನಾಟಕದಲ್ಲೂ ಈ ಮಾದರಿಯ ವ್ಯವಸ್ಥೆ ಜಾರಿಗೊಳಿಸಬೇಕು. ಇದರಿಂದ ಚುನಾವಣೆ ಮತ್ತಷ್ಟು ಪಾರದರ್ಶಕಗೊಳ್ಳಲಿದೆ ಎಂದು ಈಗಲ್ ಐ ಸಂಸ್ಥೆ ಅಧ್ಯಕ್ಷ ಪ್ರೊ.ಕೆ.ಪಿ. ಶ್ರೀನಾಥ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಮಸ್ಯೆ ಏನು?: ತಂತ್ರಜ್ಞಾನ ಯುಗದಲ್ಲಿ ಕಡಲೆಕಾಯಿ ಕೂಡ ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹೀಗಿರುವಾಗ, ಪದವೀಧರ ಕ್ಷೇತ್ರಗಳ ಮತದಾರರ ನೋಂದಣಿ ಮತ್ತು ಮತದಾನ ಪ್ರಕ್ರಿಯೆಯನ್ನು ಆನ್‌ಲೈನ್ ನಲ್ಲಿ ನಡೆಸಲು ಏನು ಸಮಸ್ಯೆ ಎಂದು ಕೇಳಿದ ಅವರು, ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮೂಲಕ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಪದವೀಧರ ಕ್ಷೇತ್ರದ ಮತದಾರರಿದ್ದಾರೆ. ಈ ಪೈಕಿ ಮತ ಚಲಾಯಿಸಿದವರು ಕೇವಲ ಶೇ. 20ರಷ್ಟು ಜನ. ಒಂದು ವೇಳೆ ಆನ್‌ಲೈನ್ ವ್ಯವಸ್ಥೆ ಜಾರಿಯಾದರೆ, ಮತದಾನದ ಪ್ರಮಾಣ ಶೇ. 90ರಷ್ಟು ಆಗಲಿದೆ. ಅಷ್ಟೇ ಅಲ್ಲ, ಪೇಪರ್ ಲೆಸ್ ವ್ಯವಸ್ಥೆ ಜಾರಿಗೆ ಬರಲಿದೆ. ಖರ್ಚು-ವೆಚ್ಚ ಕೂಡ ಸಾಕಷ್ಟು ಕಡಿಮೆ ಆಗಲಿದೆ ಎಂದರು.
ಇದಲ್ಲದೆ, ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಗುತ್ತಿದೆ. ಇದು ಅನಿವಾರ್ಯವಾಗಿ ಉಪಚುನಾವಣೆಗೆ ಎಡೆಮಾಡಿಕೊಡುತ್ತದೆ. ಇದರಿಂದ ಅನಗತ್ಯವಾಗಿ ಸಾರ್ವಜನಿಕ ಹಣ ಪೋಲು ಆಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ಸಂಸ್ಥೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಮಾತನಾಡಿ, ಕುಲಪತಿ ನೇಮಕ, ಸಿಂಡಿಕೇಟ್ ನೇಮಕ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರಿಂದ ಉನ್ನತ ಶಿಕ್ಷಣ ನಿರ್ವಹಣೆ ಅಧಃಪತನವಾಗುತ್ತಿದೆ.
ಕುಲಪತಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮಕ್ಕೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.