“ಕನ್ನಡಿಗರಿಂದಲೇ ಕನ್ನಡಕ್ಕೆ ಅಪಾಯ’
Team Udayavani, Nov 16, 2017, 12:23 PM IST
ಯಲಹಂಕ: ಕನ್ನಡ ಭಾಷೆ ಬಳಸಲು ಕೀಳರಿಮೆ ಬೇಡ ಎಂದು ಹಿರಿಯ ಸಾಹಿತಿ ಹಾಗೂ ಲೇಖಕ ಬಿ.ಆರ್.ಲಕ್ಷ್ಮಣರಾವ್ ಹೇಳಿದರು. ಯಲಹಂಕ ಉಪನಗರ ಶೇಷಾದ್ರಿಪುರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಕಾರ್ಯ ಪ್ರವೃತ್ತನಾಗಬೇಕು. ಬೇರೆ ಬೇರೆ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಆದರೆ ಕೇವಲ ಪ್ರತಿಷ್ಠೆಗಾಗಿ ಇಂಗ್ಲಿಷ್ ಅಥವಾ ಇನ್ನಿತರ ಭಾಷೆಗಳನ್ನು ಮಾತನಾಡುವುದು ಮಾತೃಭಾಷೆ ಕನ್ನಡಕ್ಕೆ ಅನ್ಯಾಯ ಮಾಡುವಂತಾಗುತ್ತದೆ ಎಂದರು.
ಮನೆಗಳಲ್ಲಿ ಪೋಷಕರು ಮಕ್ಕಳೊಡನೆ ಕನ್ನಡದಲ್ಲೇ ಮಾತನಾಡಿದಾಗ ಭಾಷೆ ತಂತಾನೇ ಅಭಿವೃದ್ಧಿಯಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ನಿರಾಭಿಮಾನದಿಂದ ಕನ್ನಡಿಗರಿಂದಲೇ ಕನ್ನಡಕ್ಕೆ ಕಂಟಕವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವೂಡೆ ಪಿ.ಕೃಷ್ಣ ಮಾತನಾಡಿ, ಕನ್ನಡ ವಿಶ್ವದಲ್ಲೇ ಅತಿ ಪುರಾತನ ಹಾಗೂ ಶಾಸ್ತ್ರೀಯ ಭಾಷೆ. ಸಾಹಿತ್ಯ ಸಂಸ್ಕೃತಿ ಸಂಗೀತಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.