ಸರಕಾರಗಳ ಕೃಷಿ ವಿರೋಧಿ ನೀತಿ ಖಂಡಿಸಿ ರೈತ ಸಂಘ ಪ್ರತಿಭಟನೆ


Team Udayavani, Nov 16, 2017, 2:43 PM IST

16-Nov-10.jpg

ಪುತ್ತೂರು: ದೇಶದ ಆರ್ಥಿಕ ಬೆನ್ನೆಲುಬು ಆಗಿದ್ದ ರೈತಾಪಿ ಕುಟುಂಬಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಸಂಪೂರ್ಣವಾಗಿ ಕಡೆಗಣಿಸಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಧನಕೀರ್ತಿ ಬಲಿಪ ಹೇಳಿದರು.

ಬುಧವಾರ ಪುತ್ತೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೃಷಿ ವಿರೋಧಿ ನೀತಿ ವಿರುದ್ಧ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ವತಿಯಿಂದ ನಡೆದ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಶೇ. 65ರಷ್ಟು ರೈತಾಪಿ ಕುಟುಂಬಗಳಿದ್ದು, ದೇಶದ ಆರ್ಥಿಕ ಪ್ರಗತಿಗೆ ರೈತರು ವರ್ಗದ ಕೊಡುಗೆ ಅಪಾರವಾದದು. ರಾಜ್ಯ ಸರಕಾರವು ಸಹಕಾರಿ ಬ್ಯಾಂಕ್‌ಗಳಲ್ಲಿನ ರೂ. 50,000 ಹಾಗೂ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿದ್ದರೂ ಎಷ್ಟು ರೈತರಿಗೆ ಈ ಸೌಲಭ್ಯ ಸಿಕ್ಕಿದೆ ಎಂಬ ಮಾಹಿತಿ ಇಲ್ಲ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಲೇ ಇಲ್ಲ ಎಂದು ಅವರು ಟೀಕಿಸಿದರು.

ಆರ್ಥಿಕ ವ್ಯವಸ್ಥೆ ಕುಸಿದಿದೆ
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಮಾತನಾಡಿ, ಕೇಂದ್ರ ಸರಕಾರಕ್ಕೆ ರೈತರ ಸಾಲ ಮನ್ನಾ ಮಾಡಿ ಎಂದರೆ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದೆ ಎಂದು ಉತ್ತರ ನೀಡುತ್ತಾರೆ. ಆದರೆ ದೇಶದ ಅಭಿವೃದ್ಧಿಗೆ ಪೂರಕವಾಗಿರುವ ರೈತರ ಅಭಿವೃದ್ಧಿಯಾಗಿದೆಯೇ ಎಂದು ಅವರು ಪ್ರಶ್ನಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಶ್ರೀಧರ್‌ ಶೆಟ್ಟಿ ಮಾತನಾಡಿ, ಜನಪ್ರತಿನಿಧಿಗಳಿಗೆ ಮೋಜು, ಮಸ್ತಿಗಾಗಿ ಹಣವಿದೆ. ಆದರೆ ರೈತರ ಸಾಲ ಮನ್ನಾ ಮಾಡಲು ಸರಕಾರದ ಬಳಿ ಹಣವಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರನ್ನು ಕಡೆಗಣಿಸುತ್ತಿದ್ದಾರೆ. ಯಾವುದೇ ಕೆಲಸ ಮಾಡಬೇಕಾದರು ಅಧಿಕಾರಿಗಳಿಗೆ ಲಂಚ ಕೊಡುವ ಪರಿಸ್ಥಿತಿ ಇದೆ. ಕೇಂದ್ರ ಸರಕಾರ ಕಾರ್ಪೊರೇಟ್‌ ಕಂಪೆನಿಗಳ ಹಾಗೂ ಉದ್ಯಮಿಗಳ ಬ್ಯಾಂಕ್‌ ಸಾಲವನ್ನು ಮನ್ನಾ ಮಾಡುತ್ತದೆ. ಆದರೆ ಇದೇ ನೀತಿ ಕೃಷಿ ವಲಯಕ್ಕೆ ಅನ್ವಯವಾಗದಿರುವುದು ವಿಪರ್ಯಾಸವೇ ಸರಿ ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಗೌರವ ಸಲಹೆಗಾರ ಡಾ| ಪಿ.ಕೆ.ಎಸ್‌. ಭಟ್‌ ರೈತರ ವಿರುದ್ಧ ಸರಕಾರಗಳ ಧೋರಣೆಯ ವಿರುದ್ಧ ಮಾತನಾಡಿದರು. ಈ ಸಂದರ್ಭ ಹಲವಾರು ರೈತನ ಮುಖಂಡರು ಉಪಸ್ಥಿತರಿದ್ದರು.

ಪೊಲೀಸರ ತಡೆಗೆ ಜಗ್ಗದ ರೈತರು
ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಸಂಘ ಪ್ರತಿಭಟನೆಯಲ್ಲಿ ಆಗ್ರಹಿಸಿತ್ತು. ಅಲ್ಲದೆ ಸಹಾಯಕ ಕಮಿಷನರ್‌ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಆರಂಭದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯಿಂದ ಹೊರಟು ಮುಖ್ಯ ರಸ್ತೆಯಾಗಿ ರೈತರ ಸಂಘದ ರ‍್ಯಾಲಿಯು ಮಿನಿ ವಿಧಾನಸೌಧದ ಬಳಿಗೆ ಆಗಮಿಸಿತು. ಆರಂಭದಲ್ಲಿ ಮಿನಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸದಂತೆ ಪೊಲೀಸರು ತಡೆಯೊಡ್ಡಿದರು. ಬಗ್ಗದ ರೈತರು ಮಿನಿ ವಿಧಾನಸೌಧದ ಆವರಣದಲ್ಲಿಯೇ ಪ್ರತಿಭಟನೆ ನಡೆಸಿದರು.

ಸಂಪೂರ್ಣ ಸಾಲ ಮನ್ನಾವಾಗಲಿ
ರೈತ ಸಾಲಗಾರನಾಗಲು ಸರಕಾರಗಳೇ ಕಾರಣ ಎಂದು ಆರೋಪಿಸಿದ ಅವರು, ರೈತ ಸಮುದಾಯ ಸಂಘಟಿತವಾಗುವ ಮೂಲಕ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕಾಗಿದೆ. ರೈತ ಬೆಳೆದ ಬೆಳೆಗೆ ವೈಜ್ಞಾನಿಕ ರೀತಿಯಲ್ಲಿ ಬೆಲೆ ನಿಗದಿ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೇಳಿ ಬಂದ ಬೇಡಿಕೆಗಳು
ರಾಷ್ಟ್ರೀಕೃತ ಬ್ಯಾಂಕ್‌, ಸಹಕಾರಿ ಸಂಘ ಹಾಗೂ ಗ್ರಾಮೀಣ ಬ್ಯಾಂಕ್‌ಗಳ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು.

ಡಾ| ಎಂ.ಎಸ್‌. ಸ್ವಾಮಿನಾಥನ್‌ ಆಯೋಗದ ವರದಿಯಲ್ಲಿ ಮಂಡಿಸಿದ ರೈತರ ಕೃಷಿ ಉತ್ಪಾದನಾ ವೆಚ್ಚಕ್ಕೆ ಶೇ. 50ರಷ್ಟು ಸೇರಿಸಿ ರೈತರಿಗೆ ಮಾರುಕಟ್ಟೆ ದರ ಸಿಗುವಂತೆ ಮಸೂದೆ ಜಾರಿಗೊಳಿಸುವುದು.

ಪಡಿತರ ಚೀಟಿ ಆಹಾರ ಪಡೆಯುವ ಗ್ರಾಹಕರ ಹೆಬ್ಬೆರಳು ಗುರುತಿಗಾಗಿ ಸತಾಯಿಸುವುದನ್ನು ಕೂಡಲೇ ಸರಿಪಡಿಸಬೇಕು.

ಕೇವಲ ಭರವಸೆಗಳ ಮೂಲಕ ಕಾಲಹರಣ ಮಾಡುತ್ತಿರುವ ಜನಪ್ರತಿನಿಧಿಗಳು ರೈತರ ಬಹುದಿನಗಳ ಬೇಡಿಕೆ ಕುಮ್ಕಿ ಜಮೀನು ಹಕ್ಕುಪತ್ರವನ್ನು ನೀಡಲು ಕೂಡಲೇ ಆಧ್ಯಾದೇಶ ನೀಡುವುದು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

accident

Bantwal: ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.