ಸರ್ಕಾರಿ ವೈದ್ಯರ ಬೆನ್ನುತಟ್ಟಿದ ಜನತೆ
Team Udayavani, Nov 17, 2017, 11:31 AM IST
ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕರಿಗೆ ಖಾಸಗಿ ವೈದ್ಯರ ಮುಷ್ಕರದ ಬಿಸಿ ತಟ್ಟಿರುವುದು ಸತ್ಯ. ಆದರೆ ಇದೇ ವೇಳೆ ಜನರಿಗೆ ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರ ವೈದ್ಯರ ಸೇವೆಯ ಮಹತ್ವದ ಅರಿವಾಗಿರುವುದು ಕೂಡ ಸುಳ್ಳಲ್ಲ.
ಪ್ರಸ್ತುತ ಖಾಸಗಿ ವೈದ್ಯ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತರುವ ಕೆಪಿಎಂಇ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ನಲುಗಿರುವ ರೋಗಿಗಳು, ಸರ್ಕಾರಿ ಆಸ್ಪತ್ರೆಗಳ ಕಡೆ ಗುರುವಾರ ಮುಕಮಾಡಿದರು. ಇದರ ಪರಿಣಾಮ ನಗರದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.5ರಿಂದ 10ರಷ್ಟು ಹೊರರೋಗಿಗಳು ಸಂಖ್ಯೆ ಹೆಚ್ಚಾಗಿದೆ.
ವಿಶೇಷವೆಂದರೆ, ಯಾವತ್ತೂ ಜನರಿಂದ ಟೀಕೆಗೆ ಒಳಗಾಗುತ್ತಿದ್ದ ಸರ್ಕಾರಿ ಆಸ್ಪತ್ರೆ, ಮತ್ತು ಅಲ್ಲಿನ ವೈದ್ಯರು ಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಚಿಕಿತ್ಸೆ ಒದಗಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಸಾವಿರಾರು ಮಂದಿ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಗುರುವಾರ ಎಲ್ಲ ಖಾಸಗಿ ಆಸ್ಪತ್ರೆಯ ಹೊರ ರೋಗಿಗಳ ವಿಭಾಗ(ಓಪಿಡಿ) ಸ್ಥಗಿತಗೊಳಿಸಿದ್ದರಿಂದ ರೋಗಿಗಳಿಗೆ ಸಮಸ್ಯೆ ಇನ್ನಷ್ಟು ಉಲಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯಲು ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲ ಸರ್ಕಾರಿ ಆಸ್ಪತ್ರೆಗಳತ್ತ ಧಾವಿಸಿದ್ದರು.
ನಗರದ ಕೆ.ಸಿ.ಜನರಲ್, ಜಯದೇವ, ಕಿದ್ವಾಯಿ, ವಿಕ್ಟೋರಿಯಾ, ಬೌರಿಂಗ್, ಇಎಸ್‌ಐ, ಬಿಬಿಎಂಪಿ ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಕೇಂದ್ರಗಳು, ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಸೇವೆ ಒದಗಿಸಲಾಗಿತ್ತು. ಜತೆಗೆ ಎಲ್ಲ ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿ ರಜೆ ಪಡೆಯದಂತೆ ಸರ್ಕಾರ ಸೂಚಿಸಿತ್ತು.
ಈ ಸಂಬಂಧ ಈ ಎಲ್ಲಾ ಆಸ್ಪತ್ರೆಗಳಲ್ಲಿ ಹೊರ ರೋಗಿಗಳು ಹಾಗೂ ಒಳ ರೋಗಿಗಳು ಶೇಕಡ ಪ್ರಮಾಣದಲ್ಲಿ ಅಧಿಕವಾಗಿದ್ದರು. ಆದರೂ ಸರ್ಕಾರಿ ಆಸ್ಪತ್ರೆ ವೈದ್ಯರು ಪ್ರತಿಯೊಬ್ಬರಿಗೂ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ನಿತ್ಯ 1500ರಿಂದ 2000 ಸಾವಿರ ಮಂದಿ ಹೊರರೋಗಿಗಳು ಆಗಮಿಸುತ್ತಾರೆ.
ಆದರೆ, ಗುರುವಾರ ಮಾತ್ರ ಇದರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದ್ದು, 2,200ಕ್ಕೆ ಏರಿಕೆಯಾಗಿದೆ. ಹಾಗೇ ಒಳ ರೋಗಿಗಳ ವಿಭಾಗದಲ್ಲಿ 70ರಿಂದ 85ಕ್ಕೆ ಹೆಚ್ಚಳವಾಗಿದೆ. ಇನ್ನು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಹೊರ ರೋಗಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನುಳಿದ್ದಂತೆ ಒಳ ರೋಗಿಗಳ ವಿಭಾಗದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ವಿಕ್ಟೋರಿಯಾದಲ್ಲಿ 10ರಿಂದ 15ರಷ್ಟು ಮತ್ತು ಮಿಂಟೋ ಆಸ್ಪತ್ರೆಯಲ್ಲಿ ಶೇ.5ರಿಂದ 10ರಷ್ಟು ರೋಗಿಗಳು ಚಿಕಿತ್ಸೆ ಪಡೆದು ಹೋಗಿದ್ದಾರೆ. ಇನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ಸಾಮಾನ್ಯವಾಗಿ 1200ರಿಂದ 1500 ಹೊರ ರೋಗಿಗಳು ಬರುತ್ತಾರೆ. ಗುರುವಾರ ಕೂಡ ಅಷ್ಟೇ ಪ್ರಮಾಣದಲ್ಲಿ ಬಂದಿದ್ದರು.
ನಗರದ ಏಕೈಕ ಕ್ಯಾನ್ಸರ್ ಆಸ್ಪತ್ರೆ ಕಿದ್ವಾಯಿಯಲ್ಲಿ ಶೇ.10ರಷ್ಟು ಹೊರರೋಗಿಗಳು ಹೆಚ್ಚಾಗಿದ್ದರು. ಇನ್ನು ಇಎಸ್‌ಐ ಆಸ್ಪತ್ರೆಯಲ್ಲಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಮಾತ್ರವಲ್ಲದೇ ಬೇರೆ ರೋಗಿಗಳಿಗೂ ಚಿಕಿತ್ಸೆ ನೀಡಲಾಗಿದೆ. ಆದರೆ, ಎಲ್ಲಿಯೂ ಒತ್ತಡದಿಂದ ಕೆಲಸ ಮಾಡಿಲ್ಲ.
ಸಾಮಾನ್ಯವಾಗಿ ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಇನ್ನುಳಿದ್ದಂತೆ ಬಿಬಿಎಂಪಿ ಆಸ್ಪತ್ರೆ ಹೆಚ್ಚಿನ ಸೇವೆ ಒದಗಿಸಲಾಗಿದೆ. ಎಲ್ಲಿಯೂ ಕೂಡ ಒತ್ತಡದಲ್ಲಿ ಕೆಲಸ ಮಾಡಿಲ್ಲ. ಸಾಮಾನ್ಯವಾಗಿ ಎಂದಿನಂತೆ ನಡೆದುಕೊಂಡಿದೆ ಎಂದು ಆಸ್ಪತ್ರೆಗಳ ಮುಖ್ಯಸ್ಥರು “ಉದಯವಾಣಿ’ಗೆ ತಿಳಿಸಿದ್ದಾರೆ.
ಹೃದಯಾಘಾತವಾದರೂ ದಾಖಲಿಸಿಕೊಳ್ಳಿಲ್ಲ: ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರತಿಭಟನೆಯ ಬಿಸಿ ನಗರದ ಜನತೆಗೂ ತಟ್ಟಿದ್ದು, ಎರಡು ಅಮಾಯಕ ಜೀವವನ್ನು ಬಲಿತೆಗೆದುಕೊಂಡಿದೆ. ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಚಂದ್ರಾ ಲೇಔಟ್‌ನ ಸತೀಶ್ (45) ಚಿಕಿತ್ಸೆಗಾಗಿ ಮೂರು ಆಸ್ಪತ್ರೆ ಅಲೆದು ಕೊನೆಯುಸಿರೆಳೆದಿದ್ದಾರೆ.
ಹಠಾತ್ ಎದೆನೋವು ಕಾಣಿಸಿಕೊಂಡಾಗ ಮನೆಯವರು ಸತೀಶ್‌ರನ್ನು ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ದಾಖಲಿಸಿಕೊಂಡಿಲ್ಲ. ಬಸವನಗುಡಿಯ ಇನ್ನೊಂದು ಖಾಸಗಿ ಆಸ್ಪತ್ರೆಯವರೂ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಕಡೆಗೆ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸತೀಶ್ ಮೃತಪಟ್ಟರು.
ಗುರುವಾರ ಬೆಳಗ್ಗೆ 11 ಗಂಟೆಗೆ ಸಹೋದರ ಫೈರೋಜ್ ತೀವ್ರ ಜ್ವರದಿಂಧ ಅಸ್ವಸ್ಥನಾಗಿದ್ದ. ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೆ, ವೈದ್ಯರೆಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಚಿಕಿತ್ಸೆ ನೀಡುವುದಿಲ್ಲ ಎಂದರು. ಮಧ್ಯಾಹ್ನ ಂದು ಗಂಟೆ ಹೊತ್ತಿಗೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡಿದ್ದಾನೆ
-ಸೈಯದ್ ಮೊಹಮ್ಮದ್, ಶಿವಾಜಿನಗರ
ಮಹಡಿಯಲ್ಲಿ ಕೆಲಸ ಮಾಡುವಾಗ ನಮ್ಮ ಅಳಿಯ ರಾಘವೇಂದ್ರ ಆಯತಪ್ಪಿ ಬಿದ್ದು ಕೈ ಮತ್ತು ಕಾಲಿಗೆ ಗಾಯವಾಗಿತ್ತು. ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೆ ಚಿಕಿತ್ಸೆ ನೀಡಲಿಲ್ಲ. ಬಳಿಕ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದೇನೆ. ಇದೇ ಸ್ಥಿತಿ ವೈದ್ಯರು, ಅವರ ಮಕ್ಕಳು ಅಥವಾ ಕುಟುಂಬದ ಸದಸ್ಯರಿಗಾದರೆ ಏನು ಮಾಡುತ್ತಾರೆ?
-ಭಾಗ್ಯಮ್ಮ, ರಾಜಾಜಿನಗರ
ಸರ್ಕಾರದ ಸೂಚನೆ ಮೇರೆಗೆ ಆಸ್ಪತ್ರೆಯ ವೈದ್ಯರು ಹಾಗೂ ಇತರ ಸಿಬ್ಬಂದಿಯ ರಜೆ ರದ್ದು ಮಾಡಿದ್ದು, ದಿನದ 24 ಗಂಟೆ ಸೇವೆ ಸಲ್ಲಿಸುತ್ತಿದ್ದಾರೆ. ಎಂದಿನ ದಿನಗಳಿಗೆ ಹೋಲಿಸಿದರೆ ಗುರುವಾರ ಹೊರ ರೋಗಿಗಳ ಪ್ರಮಾಣದಲ್ಲಿ ಶೇ.10ರಷ್ಟು ಹೆಚ್ಚಳ ಕಂಡುಬಂದಿದೆ.
-ಡಾ. ಮಂಜುನಾಥ್, ಬೌರಿಂಗ್ ಆಸ್ಪತ್ರೆ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.