ಖಾಸಗಿ ವೈದ್ಯರ ಹಲ್ಲೆ ಖಂಡಿಸಿ ಪ್ರತಿಭಟನೆ
Team Udayavani, Nov 17, 2017, 12:04 PM IST
ಧಾರವಾಡ: ಚಿಕಿತ್ಸೆಗೆ ದಾಖಲಾಗಿದ್ದ ನಿವೃತ್ತ ಯೋಧರ ಪತ್ನಿಯ ಮೇಲೆ ಹಲ್ಲೆ ಮಾಡಿರುವ ಡಾ| ವೈ.ಎನ್. ಇರಕಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಯುವ ಕಾಂಗ್ರೆಸ್ ಘಟಕ ವತಿಯಿಂದ ನಗರದ ಶ್ರೀಯಾ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಚಿಕಿತ್ಸೆ ನೀಡಬೇಕಾದ ವೈದ್ಯರೇ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ ಪತ್ನಿಯ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಹೀಗಾಗಿ ಈ ಕೂಡಲೇ ಡಾ| ವೈ.ಎನ್. ಇರಕಲ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಂಬಡಗಟ್ಟಿ ಗ್ರಾಮದ ನಿವೃತ್ತ ಯೋಧ ಬಸಯ್ಯ ಅಡಿವೆಪ್ಪನಮಠ ಅವರು ಮೂಲವ್ಯಾಧಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಮಾಡಲು ರಕ್ತ ಹಾಕಿದ್ದು, ಈ ವೇಳೆ ರಕ್ತಸಾವ್ರ ಉಂಟಾಗಿರುವ ಬಗ್ಗೆ ಅವರ ಧರ್ಮಪತ್ನಿ ಕಸ್ತೂರೆವ್ವ ವೈದ್ಯರ ಗಮನ ಸೆಳೆದಿದ್ದಾರೆ.
ಈ ನೆಪದಲ್ಲಿ ಡಾ| ವೈ.ಎನ್. ಇರಕಲ್ ಹಲ್ಲೆ ಮಾಡಿದ್ದು, ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಹಲ್ಲೆಗೊಳಗಾದ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಎಚ್ಚರಿಸಲಾಯಿತು. ಈ ವೇಳೆ ಇಮಾಮ್ ಯಲಿಗಾರ, ಅಬ್ದುಲ್ ದೇಸಾಯಿ, ಬಾಬು ಮಿಗಳಿ, ಮಂಜು ನೀಲಗುಂದ, ಮಂಜು ಮಂಗಳಗಟ್ಟಿ, ತಾಯಪ್ಪ ಪವಾರ, ಮೆಹಬೂಬ ರಾಮದುರ್ಗ, ರೋಹನ್ ಪವಾರ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.