ಉಪನೋಂದಣಿ ಕಚೇರಿ ಸ್ಥಳಾಂತರಿಸಿ


Team Udayavani, Nov 17, 2017, 3:07 PM IST

17-Nov-9.jpg

ಪುತ್ತೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಗುರುವಾರ ಪುತ್ತೂರು ತಾಲೂಕು ಆಸ್ಪತ್ರೆಗೆ
ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಸಮೀಪದಲ್ಲಿರುವ ಉಪ ನೋಂದಣಿ ಕಚೇರಿ ಸ್ಥಳಾಂತರವಾದರೆ ಆಸ್ಪತ್ರೆಯ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಸಹಕಾರಿ ಆಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ವಿಷಯ ಪ್ರಸ್ತಾಪಿಸಿದರು. ಈ ಬಗ್ಗೆ ಸಹಾಯಕ ಕಮಿಷನರ್‌ ಅವರಿಂದ ಮಾಹಿತಿ ಪಡೆದ ಅವರು, ಉಪನೋಂದಣಿ ಕಚೇರಿಯನ್ನು ಮಿನಿ ವಿಧಾನಸೌಧಕ್ಕೆ ಅಥವಾ ಸೂಕ್ತ ಕಟ್ಟಡಕ್ಕೆ ಸ್ಥಳಾಂತರಗೊಳಿಸಲು ಎರಡು ತಿಂಗಳೊಳಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ಉಪನೋಂದಣಿ ಕಚೇರಿಯು ಸ್ಥಳಾಂತರಗೊಂಡಲ್ಲಿ ಈ ನಿವೇಶನದಲ್ಲಿ
ಸರಕಾರಿ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸಬಹುದು. ಮಿನಿ ವಿಧಾನ ಸೌಧದಲ್ಲಿ ಉಪನೋಂದಣಿ ಕಚೇರಿಗೆ ಕೊಠಡಿ ಇದ್ದು, ಈಗಿರುವ ಹಳೆ ಕಟ್ಟಡದ ಸ್ಥಳವನ್ನು ಸಾರ್ವಜನಿಕ ಆಸ್ಪತ್ರೆಯ ಉಪಯೋಗಕ್ಕೆ ಕಾದಿರಿಸಲು ಅಂದಿನ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದರು. ಆದರೆ ಜಿಲ್ಲಾಧಿಕಾರಿಗಳು ಆದೇಶಿಸಿದರೂ ಸ್ಥಳಾಂತರ ಮಾಡಿಲ್ಲ ಎಂದು ಗಮನ ಸೆಳೆದರು.

ಸಹಾಯಕ ಕಮಿಷನರ್‌ ಡಾ| ರಘುನಂದನ್‌ ಮೂರ್ತಿ ಅವರಿಗೆ ಈ ಬಗ್ಗೆ ಸೂಚನೆ ನೀಡಿದ ಲೋಕಾಯುಕ್ತರು, ಜಿಲ್ಲಾ ನೋಂದಣಿ ಅಧಿಕಾರಿಗೆ ಪತ್ರ ಬರೆದು ಲೋಕಾಯುಕ್ತರು ನೀಡಿದ ಸೂಚನೆಯ ಕುರಿತು ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಸ್ಥಳಾಂತರಗೊಳಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬಾರದು. ಸಮಸ್ಯೆ ಬಗೆಹರಿಯದಿದ್ದರೆ ಲೋಕಾಯುಕ್ತ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು. ಜಿಲ್ಲಾ ನೋಂದಣಿ ಅಧಿಕಾರಿಗೆ ಮಂಗಳೂರಿನಲ್ಲಿ ಭೇಟಿ ಮಾಡುವಂತೆ ತಿಳಿಸಲು ಲೋಕಾಯುಕ್ತ ಎಸ್ಪಿ ಜೆ.ಕೆ. ರಶ್ಮಿ ಅವರಿಗೆ ಲೋಕಾಯುಕ್ತರು ಸೂಚಿಸಿದರು

ಕಡತಕ್ಕೆ ಸೀಮಿತವೇ?
ಆಸ್ಪತ್ರೆಯ ಕೊಠಡಿ, ಆವರಣವನ್ನು ದಿನಂಪ್ರತಿ ಎಷ್ಟು ಬಾರಿ ಸ್ವಚ್ಛಗೊಳಿಸುತ್ತಿರಿ ಎಂದು ಲೋಕಾಯುಕ್ತರು ಪ್ರಶ್ನಿಸಿದರು. ಮೂರು ಬಾರಿ ಎಂದು ಸಿಬಂದಿ ಉತ್ತರಿಸಿದಾಗ, ಕೇವಲ ಕಡತದಲ್ಲಿ ಮಾತ್ರವೇ ಎಂದು ಮರು ಪ್ರಶ್ನಿಸಿದರು. ಆಸ್ಪತ್ರೆಯ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು ಎಂದು ಸೂಚಿಸಿದರು.

ಆಹಾರದ ಬಗ್ಗೆ ಎಚ್ಚರಿಕೆ
ಆಸ್ಪತ್ರೆಯ ಪಾಕಶಾಲೆ, ಸಾಮಗ್ರಿ ದಾಸ್ತಾನು ಕೊಠಡಿ ಪರಿಶೀಲಿಸಿದ ಲೋಕಾಯುಕ್ತರು, ನೆಲದಲ್ಲೇ ಇಟ್ಟಿದ್ದ ತರಕಾರಿಯನ್ನು ಕಂಡು, ಹೀಗೆ ಇಟ್ಟರೆ ಅದು ಹಾಳಾಗುವುದಿಲ್ಲವೇ? ಸರಿಯಾದ ಜಾಗದಲ್ಲಿ ಇರಿಸಬೇಕು. ಆಹಾರದ ತಯಾರಿ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದರು.

ಹೂದೋಟ ನಿರ್ಮಿಸಿ
ಆಸ್ಪತ್ರೆಯ ಹಿಂಭಾಗದ ಖಾಲಿ ನಿವೇಶನದಲ್ಲಿ ಹೂದೋಟ ಮತ್ತು ರೋಗಿಗಳ ಸಹಾಯಕರಿಗೆ ಸಂಜೆ ಹೊತ್ತು ವಿರಮಿಸಲು ಆಸನಗಳ ವ್ಯವಸ್ಥೆ ಮಾಡುವಂತೆ ಲೋಕಾಯುಕ್ತರು ಸಲಹೆ ಮಾಡಿದರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯಧಿಕಾರಿ ಭರವಸೆ ನೀಡಿದರು.

ಸಹಾಯಕ ಆಯುಕ್ತ ಡಾ| ರಘುನಂದನ್‌ ಮೂರ್ತಿ, ತಹಶೀಲ್ದಾರ್‌ ಅನಂತಶಂಕರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌., ಲೋಕಾಯುಕ್ತ ಜಿಲ್ಲಾ ಎಸ್ಪಿ ರಶ್ಮಿ, ಮಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಜಗದೀಶ, ಮಂಗಳೂರು ಲೋಕಾಯುಕ್ತ ಪೊಲೀಸ್‌ ಇನ್‌ ಸ್ಪೆಕ್ಟರ್‌ಗಳಾದ ವಿಜಯ ಪ್ರಸಾದ್‌, ವಿವೇಕಾನಂದ, ಸರಕಾರಿ ಆಸ್ಪತ್ರೆಯ ನೇತ್ರ ತಜ್ಞೆ ಡಾ| ಆಶಾಜ್ಯೋತಿ ಉಪಸ್ಥಿತರಿದ್ದರು.

ಹಾರಾಡಿ ವಿದ್ಯಾರ್ಥಿನಿಲಯ, ಮಿತ್ತೂರು ಅಂಗನವಾಡಿಗೆ ಭೇಟಿ
ಮಂಗಳೂರಿನಿಂದ ಆಗಮಿಸಿದ ಲೋಕಾಯುಕ್ತರು ಆರಂಭದಲ್ಲಿ ಮಿತ್ತೂರು ಅಂಗನವಾಡಿಗೆ ತೆರಳಿ ಪರಿಶೀಲನೆ ನಡೆಸಿದರು. ಅನಂತರ ಪುತ್ತೂರು ಆಸ್ಪತ್ರೆಗೆ ಆಗಮಿಸಿ, ಹಾರಾಡಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ನಿಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಬಗ್ಗೆ ಪ್ರಶ್ನಿಸಿದ ಅವರು, ಹಾಸ್ಟೆಲ್‌ನ ಪಾಕಶಾಲೆಯನ್ನು ಪರಿಶೀಲಿಸಿದರು. ಅನಂತರ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಶ್ವರಮಂಗಲ ಹನುಮಗಿರಿ ಕ್ಷೇತ್ರಕ್ಕೆ ತೆರಳಿದರು.

ಚಪಲಿ ಕಳಚಿ ಒಳ ಪ್ರವೇಶಿಸಿ
ಲೋಕಾಯುಕ್ತರು ಒಳರೋಗಿ ವಿಭಾಗಕ್ಕೆ ತೆರಳುವ ಮೊದಲು ಶೂ ಕಳಚಿ ಒಳ ಪ್ರವೇಶಿಸಿದರು. ಆದರೆ ಇತರರು ಚಪ್ಪಲಿ ಸಹಿತ ಒಳ ಪ್ರವೇಶಿಸಿದ್ದನ್ನು ಕಂಡು, ‘ಸ್ವಚ್ಛತೆ ಬಗ್ಗೆ ಆದ್ಯತೆ ನೀಡುವವರೇ ಚಪ್ಪಲಿ ಧರಿಸಿ ಒಳ ಬಂದರೆ ಹೇಗೆ?’ ಎಂದರಲ್ಲದೆ, ಒಳರೋಗಿ ವಿಭಾಗದಲ್ಲಿ ರೋಗಿಗಳ ಸಹಾಯಕರು ಸೇರಿದಂತೆ ಯಾರೂ ಚಪ್ಪಲಿ ಧರಿಸಿ ಒಳಗೆ ಹೋಗಬಾರದು. ಈ ಕುರಿತು ವಾರ್ಡ್‌ ಬಾಗಿಲ ಬಳಿ ಫಲಕಗಳನ್ನು ಅಳವಡಿಸಿ ಎಂದರು.

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.