ಶ್ರೀ ಆದಿಶಕ್ತಿ ಕನ್ನಡ ಶಾಲೆ:  62ನೇ ಕರ್ನಾಟಕ ರಾಜ್ಯೋತ್ಸವ 


Team Udayavani, Nov 17, 2017, 3:36 PM IST

15-Mum07.jpg

ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯ ವತಿಯಿಂದ  62ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಇತ್ತೀಚೆಗೆ ವೈವಿಧ್ಯ ಮಯ ಕಾರ್ಯಕ್ರಮಗಳೊಂದಿಗೆ ಶಾಲೆ ಯ ಸಭಾಗೃಹದಲ್ಲಿ ನಡೆಯಿತು.

ಶಾಲಾ ವಿದ್ಯಾರ್ಥಿಗಳ ನಾಡ ಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿದರು. ಮಾಧ್ಯ ಮಿಕ ಶಾಲಾ ವಿದ್ಯಾರ್ಥಿನಿ ಸಾನ್ವಿ ಪೂಜಾರಿ ಕರ್ನಾಟಕ ರಾಜ್ಯೋತ್ಸವದ ಬಗ್ಗೆ ಮಾತನಾಡಿ, ಕರ್ನಾಟಕ ವೈಭವ, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ವಿವರಿಸಿದರು.

ಶ್ರೀ ಆದಿಶಕ್ತಿ ಕನ್ನಡ ಸಂಘದ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ ವಿರುವ ಪ್ರಾಚೀನ ಭಾಷೆ ಕನ್ನಡದ ಬಗ್ಗೆ ನಾವೆಲ್ಲರೂ ಅಭಿಮಾನ ಪಡಬೇಕು. ಅತೀ ಹೆಚ್ಚು ಜ್ಞಾನ ಪೀಠ ಪ್ರಶಸ್ತಿಯನ್ನು ಬಾಚಿಕೊಂಡ ಭಾರತೀಯ ಭಾಷೆ ಕನ್ನಡ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂಬ ಕವಿವಾಣಿಯನ್ನು ನೆನಪಿಸುತ್ತಾ ಕನ್ನಡಕ್ಕೆ ಗೌರವ ಸಲ್ಲಿಸಿದರು.

ಶ್ರೀ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ ಅವರು, ಕರ್ನಾಟಕದ ಹಿರಿಮೆ, ನಾಡು-ನುಡಿಯ ಬಗ್ಗೆ, ಭಾರತೀಯ ಪರಂಪರೆಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ಸಂಘದ ಮಾಜಿ ಕೋಶಾಧಿಕಾರಿ ರಮಾನಾಥ ಐಲ್‌ ಅವರು ಕರ್ನಾಟಕದ ನಿಸರ್ಗ ಸೌಂದರ್ಯ, ಸಾಹಿತ್ಯ ಹಾಗೂ ಕಲೆಯ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಸಂಘದ ಕಾರ್ಯ ದರ್ಶಿ ವಾದಿರಾಜ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಉಪಸ್ಥಿತರಿದ್ದರು. ಸಭೆಯಲ್ಲಿ ಸಂಘದ ಮಾಜಿ ಕೋಶಾಧಿಕಾರಿ ಕೇಶವ ಆಳ್ವ ಅವರು ಉಪಸ್ಥಿತ ರಿದ್ದರು. ಸಹಶಿಕ್ಷಕಿ ಪ್ರಮೋದಾ ಮ್ಹಾಡ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದ, ಶಿಕ್ಷಕೇತರ ಸಿಬಂದಿ, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

15

UV Fusion: ಬಣ್ಣದ ಛತ್ರಿ; ಇಲ್ಲೊಂದು ಕಥೆ

14

UV Fusion: ವಯೋಮಾನದ ಕಾಲಘಟ್ಟಕ್ಕೆ ಬದುಕಿನನುಭವದ ಸಾರ

13

UV Fusion: ಹಿರಿಜೀವಗಳ ಕಾಳಜಿ ವಹಿಸಿ

12

UV Fusion: ಇಂಗ್ಲೆಂಡ್‌ ಟು ಕೋಲ್ಕತಾ ಬಸ್‌ ಒಂದು ನೆನಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.