ಉತ್ತಮ ಶಿಕ್ಷಕ ಪ್ರಶಸ್ತಿಯಲ್ಲಿ ಮಹಿಳೆಯರಿಗೆ ಮೀಸಲು ಪರಿಶೀಲನೆ
Team Udayavani, Nov 18, 2017, 9:13 AM IST
ವಿಧಾನಪರಿಷತ್ತು:“ಉತ್ತಮ ಶಿಕ್ಷಕರು ಪ್ರಶಸ್ತಿ ನೀಡುವಾಗ ಮಹಿಳೆಯರಿಗೆ ಮೀಸಲಾತಿ ಅಥವಾ ಅನುಪಾತ ನಿಗದಿಪಡಿಸುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಸರ್ಕಾರದಿಂದ ಉತ್ತಮ ಶಿಕ್ಷಕರು ಪ್ರಶಸ್ತಿ ನೀಡುವಾಗ ಮಹಿಳೆಯರಿಗೆ ತಾರತಮ್ಯ ಮಾಡುತ್ತಿರುವ ಬಗ್ಗೆ ಬಿಜೆಪಿ ಸದಸ್ಯೆ ತಾರಾ ಅನುರಾಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಾಗ ಸಚಿವರು ಈ ಉತ್ತರ ನೀಡಿದರು. 1.66 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ 80 ಸಾವಿರ ಪುರುಷರು, 85 ಸಾವಿರ ಮಹಿಳೆಯರು ಇದ್ದಾರೆ. ಒಟ್ಟು ಶಿಕ್ಷಕರಲ್ಲಿ ಮಹಿಳೆಯರೇ ಹೆಚ್ಚಿದ್ದಾರೆ. ಆದರೆ, ಪ್ರಶಸ್ತಿ ಪಡೆದವರಲ್ಲಿ ಮಾತ್ರ ಪುರುಷರು ಹೆಚ್ಚಾಗಿದ್ದಾರೆ. ಪ್ರಶಸ್ತಿ ನೀಡುವಲ್ಲಿ ಈ ರೀತಿ ತಾರತಮ್ಯ ಏಕೆ. ಮಹಿಳೆಯರಲ್ಲಿ ಉತ್ತಮ ಶಿಕ್ಷಕರು ಇಲ್ಲವೇ ಎಂದು ತಾರಾ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಶಸ್ತಿ ಆಯ್ಕೆಗೆ ಇಲ್ಲಿವರೆಗೆ ಯಾವುದೇ ಅನುಪಾತ, ಮೀಸಲಾತಿ ಇರಲಿಲ್ಲ. ಈಗ ಸದನದಲ್ಲಿ ಉತ್ತಮ ಸಲಹೆ ಬಂದಿದೆ. ಈ ಹಿನ್ನೆಲೆಯಲ್ಲಿ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡುವಾಗ ಮಹಿಳೆಯರಿಗೆ ಅನುಪಾತ ಅಥವಾ ಅಥವಾ ಮೀಸಲಾತಿ ನಿಗದಿಪಡಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.
ಶಿಕ್ಷಕರ ಸಮಸ್ಯೆ ಬಿಟ್ಟು ಬೇರೆ ಚರ್ಚೆನೇ ಇಲ್ವಾ: ಸದಸ್ಯರ ಅಳಲು
ವಿಧಾನಪರಿಷತ್ತು: ಸದನದಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೇನೆ ಚರ್ಚೆಯಾಗುತ್ತದೆ. ಬೇರೆ ಸಮಸ್ಯೆಗಳ ಬಗ್ಗೆ ಕೇಳ್ಳೋರೇ ಇಲ್ಲ,
ಅಪರೂಪಕ್ಕೆ ಮಾತನಾಡಿದಾಗ ಮುಗಿಬಿದ್ದು ಕೂರಿಸಿಬಿಡುತ್ತಾರೆ ಎಂದು ಕಾಂಗ್ರೆಸ್ ಸದಸ್ಯ ಬಸವರಾಜ ಪಾಟೀಲ್ ಇಟಗಿ ಅಳಲು ತೋಡಿಕೊಂಡರು. ಪ್ರಶ್ನೋತ್ತರ ಅವಧಿಯಲ್ಲಿ ರಾಯಚೂರು, ಕೊಪ್ಪಳ ಜಿಲ್ಲೆಗಳ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಪ್ರಶ್ನೆ ಕೇಳಿ, ಸಮಸ್ಯೆಗಳನ್ನು ವಿವರಿಸುತ್ತಿದ್ದರು. ಅಷ್ಟರಲ್ಲಿ ವಿಷಯ ಬೇಗ ಮುಗಿಸುವಂತೆ ಸಭಾಪತಿ ಸೂಚನೆ ನೀಡಿದರು. ಇದರಿಂದ ಬಸವರಾಜ ಪಾಟೀಲ್ ಇಟಗಿ, ಈ ಸದನ ಇರೋದೇ ಶಿಕ್ಷಕರ ಸಮಸ್ಯೆಗಾಗಿ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.