ಕತ್ತು ಬಿಗಿದು ಪತ್ನಿಯ ಕೊಂದ ಪತಿ ಪರಾರಿ
Team Udayavani, Nov 18, 2017, 11:23 AM IST
ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಪತ್ನಿಯ ಕುತ್ತಿಗೆ ಬಿಗಿದು ಪತಿಯೇ ಕೊಲೆಗೈದಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಲಲಿತಾ (25) ಮೃತರು. ಕೃತ್ಯವೆಸಗಿದ ಪತಿ ಮಣಿ ಪರಾರಿಯಾಗಿದ್ದಾನೆ. ಕೋಲಾರ ಮೂಲದ ಲಲಿತಾ ಗಾರೆ ಕೆಲಸದ ಮೆಸಿŒ ಮಣಿ ಎಂಬಾತನನ್ನು 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಮೂರು ತಿಂಗಳ ಹಿಂದಷ್ಟೇ ಕೊಡಿಗೆಹಳ್ಳಿಯಲ್ಲಿ ಪತಿ ಮಕ್ಕಳೊಂದಿಗೆ ಬಂದು ನೆಲೆಸಿದ್ದರು. ಈ ಮಧ್ಯೆ ಸಾಮಾನ್ಯವಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಮತ್ತು ಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ, ಯಾವ ಕಾರಣಕ್ಕೆ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮನೆ ತೆಗೆದಿರುವುದನ್ನು ಕಂಡ ನೆರೆಹೊರೆಯ ಜನ ಒಳಗೆ ಹೋಗಿ ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಲಟ್ಟಣಿಗೆಯಲ್ಲಿ ತಲೆಯ ಮೇಲೆ ಬಲವಾಗಿ ಹೊಡೆದು, ನಂತರ ವೈರ್ನಲ್ಲಿ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸಿದಾಗ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಪ್ರಕರಣ ಕಾಡುಗೋಡಿಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.