ಹೈಕೋರ್ಟ್ ಮೆಟ್ಟಿಲೇರಿದ ಕುದುರೆ ಮಾಲೀಕರು
Team Udayavani, Nov 18, 2017, 11:23 AM IST
ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ನ ಪರವಾನಗಿ ನವೀಕರಣ ಮಾಡಲು ರಾಜ್ಯಸರ್ಕಾರ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ 10 ಮಂದಿ ಕುದುರೆ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಟರ್ಫ್ ಕ್ಲಬ್ ಸದಸ್ಯರಾದ ಎಚ್.ಎಸ್ ಚಂದ್ರೇಗೌಡ ಸೇರಿದಂತೆ 10 ಮಂದಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಟರ್ಫ್ ಕ್ಲಬ್ ಆಡಳಿತ ಮಂಡಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯಸರ್ಕಾರ ಕಳೆದ ಆಗಸ್ಟ್ 31ರಿಂದ ಕ್ಲಬ್ನ ಪರವಾನಿಗೆ ನವೀಕರಣಗೊಳಿಸದೆ ವಿಳಂಬ ಮಾಡುತ್ತಿದೆ. ಇದರಿಂದ ರೇಸ್ ನಡೆಯದೆ ಕುದುರೆ ಮಾಲೀಕರಿಗೆ ತೊಂದರೆಯಾಗುತ್ತಿದೆ. ರೇಸ್ ಕುದುರೆಗಳ ನಿರ್ವಹಣೆ ಕೂಡ ಕಷ್ಟವಾಗುತ್ತಿದೆ. ಜೊತೆಗೆ ಕ್ಲಬ್ ಹಾಗೂ ರಾಜ್ಯಸರ್ಕಾರಕ್ಕೂ ಕೋಟ್ಯಾಂತರ ರೂ. ನಷ್ಟವುಂಟಾಗುತ್ತಿದೆ. ಹೀಗಾಗಿ ಕೂಡಲೇ ಕ್ಲಬ್ನ ಪರವಾನಗಿ ನವೀಕರಣ ಮಾಡಿಕೊಡಲು ರಾಜ್ಯಸರ್ಕಾರಕ್ಕೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.