ಪುರಭವನದಲ್ಲಿ ಸ್ತ್ರೀಶಕ್ತಿ ಸಮಾವೇಶ
Team Udayavani, Nov 19, 2017, 9:45 AM IST
ಹಂಪನಕಟ್ಟೆ: ಮಹಿಳೆಯರ ನ್ಯಾಯಯುತ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಲು ಸಂಘಟನೆಗಳ ಪಾತ್ರ ಹಿರಿದು ಎಂದು ಮೇಯರ್ ಕವಿತಾ ಸನಿಲ್ ಹೇಳಿದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸ್ತ್ರೀಶಕ್ತಿ ಗುಂಪುಗಳ ವತಿಯಿಂದ ನಗರದ ಪುರಭವನದಲ್ಲಿ ನಡೆದ ಮಕ್ಕಳ ದಿನಾಚರಣೆ, ಸ್ತ್ರೀಶಕ್ತಿ ಸಮಾವೇಶ ಹಾಗೂ ಶಾಸಕರಿಂದ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಪಾಲಿಕೆ ಸಹಕರಿಸುತ್ತಿದೆ. ಅಂಗನವಾಡಿ ಕಟ್ಟಡಗಳನ್ನು ಪಾಲಿಕೆಯಿಂದ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಂಘಗಳಿಗೆ ಅನುದಾನ
350ಕ್ಕೂ ಹೆಚ್ಚು ಸ್ವಸಹಾಯ ಸಂಘಗಳಿಗೆ ತಲಾ 10,000 ರೂ.ಗಳಂತೆ ಪಾಲಿಕೆಯಿಂದ ಅನುದಾನ ನೀಡಲಾಗುತ್ತಿತ್ತು. ಪ್ರಸಕ್ತ ಸಂಖ್ಯೆಯನ್ನು 400ಕ್ಕೆ ಏರಿಸಲಾಗಿದೆ. ಮಹಿಳಾ ಅಭ್ಯುದಯದ ದೃಷ್ಟಿಕೋನವನ್ನಿಟ್ಟು ಇದನ್ನು ಒದಗಿಸಲಾಗುತ್ತಿದೆ ಎಂದರು. ದಿಯಾ ಸಿಸ್ಟಮ್ಸ್ನ ಸಿಇಒ ಡಾ| ವಿ. ರವಿಚಂದ್ರನ್, ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು. ಸೆಲ್ಕೋ ಫೌಂಡೇಶನ್ನ ಯೋಜನಾ ಸಂಯೋಜಕ ಎಲ್ರಿಕ್, ಗುಲಾಬಿ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.
ಐಪ್ಯಾಡ್ ಟ್ಯಾಬ್ಗಳನ್ನು ಈ ವೇಳೆ ಸಂಘದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ
ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷೆ ಜಯಲಕ್ಷ್ಮೀ ಬಿ. ಆರ್. ಪ್ರಸ್ತಾವನೆಗೈದರು. ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಪ್ರಭಾರ) ಶೋಭಾ ಪಿ. ಸ್ವಾಗತಿಸಿದರು.
ಹಣ ಬಿಡುಗಡೆಗೆ ಯತ್ನ
ಸ್ವಂತ ನಿವೇಶನ ಹೊಂದಿರುವ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು. ಪ್ರತಿಭಟನೆಯಲ್ಲಿ ಭಾಗವಹಿಸಿದ ಅಂಗನವಾಡಿ ಕಾರ್ಯಕರ್ತರ ಸಂಬಳ ಕಡಿತಗೊಳಿಸಿದ ಕ್ರಮ ಸಮಂಜಸವಲ್ಲ. ಅವರ ಹಣವನ್ನು ತತ್ಕ್ಷಣ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟವರಲ್ಲಿ ಚರ್ಚಿಸಲಾಗುವುದು.
– ಜೆ.ಆರ್. ಲೋಬೋ
ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.