ರಾಷ್ಟ್ರಪತಿ, ಉಪರಾಷ್ಟ್ರಪತಿಗಳಿಗೆ ಈಗಲೂ ವೇತನ ಕಡಿಮೆ!
Team Udayavani, Nov 20, 2017, 9:48 AM IST
ಹೊಸದಿಲ್ಲಿ: ದೊಡ್ಡ ದೊಡ್ಡ ಹುದ್ದೆಯಲ್ಲಿರುವವರಿಗೆ ದೊಡ್ಡ ಮೊತ್ತದ ಸಂಬಳ ಎಂಬ ಗ್ರಹಿಕೆ ಜನರಲ್ಲಿರುತ್ತದೆ. ಆದರೆ ನಮ್ಮ ದೇಶದ ರಾಷ್ಟ್ರಪತಿ, ಉಪರಾಷ್ಟ್ರಪತಿ ವಿಚಾರದಲ್ಲಿ ಅದು ಸುಳ್ಳಾಗಿದೆ. 7ನೇ ವೇತನ ಆಯೋಗದ ಶಿಫಾರಸು 2016 ಜ.1ರಿಂದ ಪೂರ್ವಾನ್ವಯವಾಗುವಂತೆ ಜಾರಿಯಾದ ಬಳಿಕ ದೇಶದಲ್ಲಿ ಅತ್ಯಂತ ಹೆಚ್ಚು ಸಂಬಳ ಪಡೆಯುವ ಹುದ್ದೆ ಎಂದರೆ ಕೇಂದ್ರ ಸಂಪುಟ ಕಾರ್ಯದರ್ಶಿ. ಅವರಿಗೆ ಈಗ ಪ್ರತಿ ತಿಂಗಳು 2.25 ಲಕ್ಷ ರೂ. ವೇತನ ಸಿಗುತ್ತಿದೆ. ಆದರೆ ರಾಷ್ಟ್ರಪತಿಗೆ ಪ್ರತಿ ತಿಂಗಳು 1.50 ಲಕ್ಷ ರೂ., ಉಪ ರಾಷ್ಟ್ರಪತಿಗೆ 1.25 ಲಕ್ಷ ರೂ., ರಾಜ್ಯಪಾಲರಿಗೆ 1.10 ಲಕ್ಷ ರೂ. ವೇತನ ಇದೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಯಾಗಬೇಕೆಂದು ಒಂದು ವರ್ಷದ ಹಿಂದೆಯೇ ಕೇಂದ್ರ ಗೃಹ ಇಲಾಖೆ ಶಿಫಾರಸು ಸಿದ್ಧಗೊಳಿಸಿ ಕೇಂದ್ರ ಸಂಪುಟ ಕಾರ್ಯಾಲಯಕ್ಕೆ ಕಳುಹಿಸಿಕೊಟ್ಟಿತ್ತು. ಆ ಶಿಫಾರಸು ಅಂಗೀಕಾರಗೊಂಡರೆ, ರಾಷ್ಟ್ರಪತಿ ವೇತನ ಪ್ರತಿ ತಿಂಗಳಿಗೆ 5 ಲಕ್ಷ ರೂ., ಉಪ ರಾಷ್ಟ್ರಪತಿ 3.5 ಲಕ್ಷ ರೂ. ಮತ್ತು ರಾಜ್ಯಪಾಲರ ವೇತನ 3 ಲಕ್ಷ ರೂ.ಗೆ ಏರಿಕೆಯಾಗಲಿದೆ. 2008ರಲ್ಲಿ ಕೊನೆಯ ಬಾರಿಗೆ ಅವರ ವೇತನ ಹೆಚ್ಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.