ದತ್ತಮಾಲಾ ಅಭಿಯಾನಕ್ಕೆ ತೆರೆ
Team Udayavani, Nov 20, 2017, 10:20 AM IST
ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದತ್ತಮಾಲಾ ಅಭಿಯಾನಕ್ಕೆ ಭಾನುವಾರ ಶಾಂತಿಯುತ ತೆರೆ ಬಿದ್ದಿದೆ. 13 ರಿಂದ ಒಂದು ವಾರಗಳ ಕಾಲ ನಡೆದ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಭಾನುವಾರ ದತ್ತಮಾಲಾಧಾರಿಗಳು ದತ್ತ ಪೀಠಕ್ಕೆ ತೆರಳಿ ಹೋಮ ಹವನ ನಡೆಸಿ ದತ್ತಪಾದುಕೆಗಳ ದರ್ಶನ ಪಡೆದರು.
ಭಾನುವಾರ ಬೆಳಗ್ಗೆ ನಗರದಲ್ಲಿ ದತ್ತಮಾಲಾಧಾರಿ ಗಳು ಶೋಭಾಯಾತ್ರೆ ನಡೆಸಿದರು. ಬಳಿಕ, ಬೋಳರಾಮೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ನಡೆಯಿತು. ಸಭೆಯ ನಂತರ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿದ ದತ್ತಮಾಲಾ ಧಾರಿಗಳು ಹೊನ್ನಮ್ಮನ ಹಳ್ಳದಲ್ಲಿ ಮಿಂದು ಅಲ್ಲಿಂದ ಕೆಲವರು ಕಾಲ್ನಡಿಗೆಯಲ್ಲಿ, ಉಳಿದವರು ವಾಹನಗಳಲ್ಲಿ ಪೀಠಕ್ಕೆ ತೆರಳಿದರು.
ದತ್ತಪೀಠದ ಆವರಣದಲ್ಲಿ ನಿರ್ಮಿಸಲಾಗಿರುವ ಬ್ಯಾರಿ ಕೇಡ್ ಮೂಲಕ ಸರತಿ ಸಾಲಿನಲ್ಲಿ ನಿಂತು ಭಜನೆ ಮಾಡುತ್ತ ತೆರಳಿದ ಭಕ್ತರು, ಗುಹೆಯೊಳಗೆ ತೆರಳುವ ಮುನ್ನ ಇರುಮುಡಿಯನ್ನು ಸಮರ್ಪಿಸಿ, ದತ್ತಗುಹೆ ಯೊಳಗೆ ಹೋಗಿ ಪಾದುಕೆಗಳ ದರ್ಶನ ಪಡೆದರು. ನಾಗಾಸಾಧು ಗಳೂ ಸೇರಿದಂತೆ ಸಂಘಟನೆಯ ಮುಖಂಡರನ್ನು ವಿಶೇಷ ದ್ವಾರದ ಮೂಲಕ ಗುಹೆಯೊಳಗೆ ಕಳುಹಿಸಲಾಯಿತು.
ಪೂರ್ಣಾಹುತಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಆಂದೋಲನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಪಾದುಕೆಗಳ ದರ್ಶನದ ನಂತರ ಪೀಠದಲ್ಲಿ ದತ್ತ ಹಾಗೂ ಗಣಹೋಮ ನಡೆಯಿತು.
ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.