ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ಇನ್ನಿಲ್ಲ
Team Udayavani, Nov 20, 2017, 3:05 PM IST
ಸುಳ್ಯ : ಮಾಜಿ ಶಾಸಕ ಬಾಕಿಲ ಹುಕ್ರಪ್ಪ (68) ಅವರು ಸೋಮವಾರ ಬೆಳಗ್ಗಿನ ಜಾವ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹುಕ್ರಪ್ಪ ಅವರನ್ನು ಕೆಲ ಐದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಮನೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ. ಹುಕ್ರಪ್ಪ ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ಹುಕ್ರಪ್ಪ ಅವರು 1983 ರಿಂದ 85 ರವರೆಗೆ ಸುಳ್ಯದ ಶಾಸಕರಾಗಿದ್ದರು. ಎಸ್ಸಿ ಮೀಸಲು ಕ್ಷೇತ್ರವಾದ ಸುಳ್ಯದ ಬಿಜೆಪಿಯ ಪ್ರಥಮ ಶಾಸಕರಾಗಿದ್ದರು. 85 ರಲ್ಲಿ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
ಬಿಜೆಪಿ ತೊರೆದು ಜನತಾ ದಳ, ಕಾಂಗ್ರೆಸ್,ಬಂಗಾರಪ್ಪ ಅವರು ಸಂಸ್ಥಾಪಿಸಿದ್ದ ಕೆಸಿಪಿ.. ಹೀಗೆ ನಿರಂತರ ಪಕ್ಷಾಂತರ ಮಾಡಿದ್ದರು. ಇತ್ತೀಚೆಗೆ ಆಮ್ ಆದ್ಮಿ ಪಕ್ಷ ಸೇರಿದ್ದರು. ಒಂದು ತಿಂಗಳ ಹಿಂದೆ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.
ಗುತ್ತಿಗಾರು ಪಂಚಾಯತ್ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಶಾಸಕರಾಗಿದ್ದ ಸಂದರ್ಭ ಲಾಸ್ ಎಂಜಲೀಸ್ ಒಲಿಂಪಿಕ್ಸ್ ವೀಕ್ಷಿಸಲು ಸರ್ಕಾರದ ಪ್ರತಿನಿಧಿಯಾಗಿ ತೆರಳಿದ್ದರು.
ಶಾಸಕರಾದ ಹೊರತಾಗಿಯೂ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅವರು ಸಣ್ಣ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಕಾರು ಬಂಗಲೆ ಹೊಂದದೆ ರಾಜಕಾರಣಿಗಳಿಗೆ ಆದರ್ಶಪ್ರಾಯವಾಗಿದ್ದರು.
ಹುಕ್ರಪ್ಪ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.