ನೆಲ್ಯಾಡಿಯಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನ
Team Udayavani, Nov 20, 2017, 4:52 PM IST
ನೆಲ್ಯಾಡಿ: ಸರಕಾರದ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಸೂಚಿಯಾದ ‘ಪೋಡಿ ಮುಕ್ತ ಗ್ರಾಮ ಅಭಿಯಾನ’ವು ನೆಲ್ಯಾಡಿಯ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸರಕಾರವು ಗ್ರಾಮೀಣ ಪ್ರದೇಶದ ಪಟ್ಟಾದಾರರಿಗೆ ಬಹುಕಾಲದಿಂದ ಕಂದಾಯ ದಾಖಲೆಯಲ್ಲಿರುವ ಲೋಪ ದೋಷಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಸರಿಪಡಿಸಿ ಕೊಳ್ಳಬಹುದಾದ ವ್ಯವಸ್ಥೆಯನ್ನು ಈ ಪೋಡಿ ಮುಕ್ತ ಗ್ರಾಮ ಅನ್ನುವ ಕಾರ್ಯಸೂಚಿಯ ಮೂಲಕ ಸರಳೀಕರಣಗೊಳಿಸಿದೆ. ಇದರ ಉಪಯೋಗವನ್ನು ಗ್ರಾಮದ ಎಲ್ಲ ಜನರು ಪಡಕೊಳ್ಳುವಂತಾಗಲೀ ಎಂದರು.
ಪುತ್ತೂರು ತಾ| ಸರ್ವೇ ಇಲಾಖೆಯ ಎಡಿಎಲ್‌ಆರ್ ಭೈರಪ್ಪ ಮಾತನಾಡಿ, ಪೂರ್ವ ನಿಗದಿಯಂತೆ ಇಂದಿನಿಂದ ನೆಲ್ಯಾಡಿ ಗ್ರಾಮದಲ್ಲಿ ಪೋಡಿ ಮುಕ್ತ ಅಭಿಯಾನ ಆರಂಭಿಸುತ್ತಿದ್ದೇವೆ. ಇಂದು ಮಾಹಿತಿಯನ್ನು ಪಡಕೊಳ್ಳದ ಗ್ರಾಮಸ್ಥರು ಬಹುತೇಕ ಇದ್ದರೂ ಅವರು ತಮ್ಮ ಸಮಸ್ಯೆಗಳನ್ನು ಗ್ರಾ. ಪಂ. ಕಚೇರಿಗೆ ಬಂದು ತಿಳಿಸಿದಲ್ಲಿ ಇದನ್ನು ಸರಿಪಡಿಸಿಕೊಡಲಾಗುವುದು ಎಂದರು. ಸರ್ವೆ ಇಲಾಖೆಯ ಸೂಪರ್‌ವೈಸರ್ ಸಿ.ಕೆ. ಮಂಜುನಾಥ್, ನೆಲ್ಯಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್, ಸರ್ವೇಯರ್ ಉದಯ ಕುಮಾರ್, ನೆಲ್ಯಾಡಿ ಗ್ರಾಮಕರಣಿಕೆ ಅಶ್ವಿನಿ ಮೊದಲಾದವರು ಉಪಸ್ಥಿತರಿದ್ದರು.
ಮಹತ್ವಾಕಾಂಕ್ಷಿ ಯೋಜನೆ
ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪೋಡಿ ಮುಕ್ತ ಗ್ರಾಮ. ಇದರ ಮಾಹಿತಿಯನ್ನು ಸಂಬಂಧ ಪಟ್ಟ ಇಲಾಖೆ ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವ ಕಾರ್ಯ ಇನ್ನೂ ಸಮರೋಪಾದಿಯಲ್ಲಿ ನಡೆಯಬೇಕಾಗಿದೆ. ಪಟ್ಟಾದಾರರ ಹಳೆಯ ಕಂದಾಯ ಸಮಸ್ಯೆಗಳಾದ ಗಡಿ ಗುರುತು ತಕರಾರು, ಹಿಂದಿನಿಂದಲೂ ಗಡಿಯಲ್ಲಿರುವ ಗೊಂದಲಗಳನ್ನು ಗ್ರಾಮಮಟ್ಟದಲ್ಲಿ ಸ್ವತಃ ಸರ್ವೇ ಇಲಾಖೆಯವರೇ ಬಂದು ಪ್ಲಾಟಿಂಗ್ ಮೂಲಕ ಸರಿಪಡಿಸಲು ಇರುವ ಅತೀ ಅಗತ್ಯದ ಯೋಜನೆಯಾಗಿದೆ ಎಂದು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್!
Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.