ಮಾಜಿ ಶಾಸಕ ಬಾಕಿಲ ಹುಕ್ರಪ್ಪ ನಿಧನ
Team Udayavani, Nov 21, 2017, 7:59 AM IST
ಸುಬ್ರಹ್ಮಣ್ಯ: ಮಾಜಿ ಶಾಸಕ ಬಾಕಿಲ ಹುಕ್ರಪ್ಪ (65) ಅವರು ನ. 20ರಂದು ನಾಲ್ಕೂರು ಗ್ರಾಮದ ಕೋಣೆಕಾನ ಗುಂಡಡ್ಕದಲ್ಲಿರುವ ಸ್ವಗೃಹದಲ್ಲಿ ಅಸೌಖ್ಯದಿಂದ ನಿಧನ ಹೊಂದಿದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೆಲವು ಸಮಯಗಳಿಂದ ಅಸ್ವಸ್ಥ ರಾಗಿದ್ದ ಅವರು ಇತ್ತೀಚೆಗೆ ಪಾರ್ಶ್ವ ವಾಯು ಕಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಮೃತಪಟ್ಟರು. 1983ರಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬಿಜೆಪಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 1983ರಿಂದ 1985ರ ತನಕ ಶಾಸಕ ರಾಗಿದ್ದ ಅವರು ತಾಲೂಕಿನ ಪ್ರಥಮ ಶಾಸಕ ಎಂಬ ಹೆಗ್ಗಳಿಕೆ ಹೊಂದಿದ್ದರು.
ಶಾಸಕನ ಅವಧಿಯಲ್ಲಿ ಅಮೆ ರಿಕದ ಲಾಸ್‌ಏಂಜಲೀಸ್, ಪ್ಯಾರಿಸ್ ಮುಂತಾದ ವಿದೇಶಗಳಿಗೆ ಒಲಿಂಪಿಕ್ಸ್ ಕ್ರೀಡೆ ವೀಕ್ಷಿಸಲು ಪ್ರವಾಸ ತೆರಳಿ ದ್ದರು. ಜನಸಂಘ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ಕರ್ತ ರಾಗಿದ್ದ ಅವರು ತನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಬಹುತೇಕ ಎಲ್ಲ ರಾಜಕೀಯ ಪಕ್ಷಗಳಲ್ಲಿ ಗುರುತಿಸಿ ಕೊಂಡಿದ್ದರು.
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷರಾಗಿಯೂ ಸೇವೆ ಸಲ್ಲಿ ಸಿರುವ ಅವರು ಯಕ್ಷಗಾನ ಕಲಾವಿದರಾಗಿ, ಅತ್ಯುತ್ತಮ ಕ್ರೀಡಾಪಟುವಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸಮ್ಮಾನಿತರಾಗಿದ್ದರು. ಶಾಸಕನಾಗಿದ್ದ ಅವಧಿಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದ ಅವರ ನಿಧನದ ಸುದ್ದಿ ತಿಳಿದು ಅವರ ನಿವಾಸಕ್ಕೆ ಅಪಾರ ಸಂಖ್ಯೆಯ ಒಡನಾಡಿಗಳು, ವಿವಿಧ ಪಕ್ಷಗಳ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.